Court Recruitment 2026: ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ

(Court Recruitment 2026:) ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ. ಯಾದಗಿರಿ ಜಿಲ್ಲಾ ನ್ಯಾಯಾಲಯದ ಅಧೀನದಲ್ಲಿರುವ ಇ-ಕೋರ್ಟ್ ಮೂಲಕ ಖಾಲಿ ಇರುವ ಪ್ರೊಸೆಸ್ ಸರ್ವರ್ ಮತ್ತು ಪಿಯೋನ್ ಸೇರಿ ಒಟ್ಟು 14 ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ನ್ನೂ ಓದಿ: ವಾಹನ ಮಾಲೀಕರ ಗಮನಕ್ಕೆ; ಇನ್ಮುಂದೆ ಗಾಡಿ FC ಗೆ ಸಾರಿಗೆ ಇಲಾಖೆಯಿಂದ ಹೊಸ ರೂಲ್ಸ್


ಕರ್ನಾಟಕ ಸರ್ಕಾರದ ಅಡಿಯಲ್ಲಿ ಬರುವ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,000 ರಿಂದ ರೂ. 61,300 ರವರೆಗೆ ವೇತನ ನಿಗದಿಪಡಿಸಲಾಗಿದೆ.

* ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು.
* ವಯೋಮಿತಿ 29 ಜನವರಿ 2026ರ ಪ್ರಕಾರ ಕನಿಷ್ಠ 18 ವರ್ಷಗಳಿಂದ ಗರಿಷ್ಠ 35 ವರ್ಷಗಳೊಳಗೆ ಇರಬೇಕು.
* ಸರ್ಕಾರದ ನಿಯಮಾನುಸಾರ ಎಸ್‌ಸಿ/ಎಸ್‌ಟಿ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ, ಹಿಂದುಳಿದ ವರ್ಗದವರಿಗೆ 3 ವರ್ಷ ಹಾಗೂ ಅಂಗವಿಕಲ ಅಥವಾ ವಿಧವೆ ಅಭ್ಯರ್ಥಿಗಳಿಗೆ 10 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
* ಅಭ್ಯರ್ಥಿಗಳು ಏಪ್ರಿಲ್ 12ರ ಒಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
* ಅರ್ಜಿ ಶುಲ್ಕವಾಗಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 200, ಮತ್ತು SC/ST/Cat-1/PH ಅಭ್ಯರ್ಥಿಗಳಿಗೆ ರೂ. 100 ನಿಗದಿಪಡಿಸಲಾಗಿದೆ.
* ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.


ನ್ನೂ ಓದಿ: ನಿಮ್ಮ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದೀರಾ?; ಅಂತಹವರು ಈ ಸ್ಟೋರಿ ಓದಲೇಬೇಕು?


ಈ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆ ಸಂದರ್ಶನದ ಆಧಾರದ ಮೇಲೆ ಮಾತ್ರ ನಡೆಯಲಿದೆ. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ತಮ್ಮ ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವುದು ಅಗತ್ಯ.

ಅಭ್ಯರ್ಥಿಗಳು ಅಧಿಕೃತ ಇ-ಕೋರ್ಟ್ ವೆಬ್‌ಸೈಟ್‌ಗೆ ಭೇಟಿ ನೀಡಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ, ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬಹುದು. ಯಾದಗಿರಿಯಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಇದು ಉತ್ತಮ ಅವಕಾಶವಾಗಿದ್ದು, ಕೊನೆಯ ದಿನಾಂಕದವರೆಗೆ ಕಾಯದೆ ಶೀಘ್ರವಾಗಿ ಅರ್ಜಿ ಸಲ್ಲಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

Court Recruitment: ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ
Court Recruitment: ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ

ಇತ್ತೀಚಿನ ಜನಪ್ರಿಯ ಸುದ್ದಿಗಳು (Court Recruitment 2026:)

    1. ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
    2. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
    3. ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
    4. ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
    5. ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್‌
    6. ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
    7. ಯುವಕರಿಗೆ ʼಗ್ರಾಮ ಒನ್‌ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
    8. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    9. 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
    10. ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್‌ ಹುದ್ದೆಗೆ ಅರ್ಜಿ ಆಹ್ವಾನ