Wednesday, November 29, 2023
Homeಇತರೆರಾಜ್ಯದಲ್ಲಿ ಸದ್ಯ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡುವುದಿಲ್ಲ: ಸಿ ಎಂ ಬೊಮ್ಮಾಯಿ ಸ್ಪಷ್ಟನೆ

ರಾಜ್ಯದಲ್ಲಿ ಸದ್ಯ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡುವುದಿಲ್ಲ: ಸಿ ಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡುವುದಿಲ್ಲ ಎಂದು ಸಿ ಎಂ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಲಾಕ್ ಡೌನ್ ವಿಷಯವಾಗಿ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಕೋವಿಡ್ ರೂಪಾಂತರ ವೈರಸ್ ನಿಯಂತ್ರಣ ತರಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಇದರ ಹೊರತಾಗಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಘೋಷಣೆಯನ್ನು ಮಾಡುವುದಿಲ್ಲ ಎಂದು ಹೇಳಿದರು.

ಒಮಿಕ್ರಾನ್ ವೈರಸ್ ಹಾವಳಿಯನ್ನು ತಡೆಯಲು ಅದನ್ನು ನಿಯಂತ್ರಣಕ್ಕೆ ತರಲು ರಾಜ್ಯದ ಗಡಿ ಭಾಗದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಟೆಸ್ಟಿಂಗ್, ಟ್ರೇಸ್ ಹೆಚ್ಚಿಸಲಾಗುತ್ತಿದೆ ವಿದೇಶದಿಂದ ಬರುವಂತಹ ಪ್ರಯಾಣಿಕರ ಮೇಲೆ ತೀವ್ರ ನಿಗಾ ವಹಿಸಲಾಗಿದೆ.

ಆರೋಗ್ಯ ಸಚಿವರು ಇಂದು ಕೋವಿಡ್ ನಿಯಂತ್ರಣಕ್ಕೆ ತರುವ ಸಂಬಂಧ ಮಹತ್ವದ ಸಭೆಯನ್ನು ನಡೆಸುತ್ತಿದ್ದಾರೆ, ಈಗ ಸದ್ಯಕ್ಕೆ ಲಾಕ್ ಡೌನ್ ಮಾಡೋ ಪ್ರಶ್ನೆ ಇಲ್ಲ. ಸಭೆ, ಸಮಾರಂಭಗಳಲ್ಲಿ ಕೋವಿಡ್ ನಿಯಮವನ್ನು ಕೈಗೊಳ್ಳುವಂತೆ ಮನವಿ ಮಾಡಿದರು.

Most Popular

Recent Comments