Tuesday, November 28, 2023
Homeರಾಜಕೀಯಬೆಂಗಳೂರಿನಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಮಕ್ಕಳ ಆಸ್ಪತ್ರೆಯನ್ನು ತೆರೆಯಿರಿ: ಆರ್ ಅಶೋಕ್

ಬೆಂಗಳೂರಿನಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಮಕ್ಕಳ ಆಸ್ಪತ್ರೆಯನ್ನು ತೆರೆಯಿರಿ: ಆರ್ ಅಶೋಕ್

ಬೆಂಗಳೂರು: ಶ್ರಾವಣ ಮಾಸ ಆರಂಭವಾಗಿದ್ದು, ಸಾಲುಸಾಲು ಹಬ್ಬಗಳು ಹಿಂದೂಗಳಿಗೆ ಎದುರಾಗಿರುವುದರಿಂದ ಮಕ್ಕಳನ್ನು ಕೋವಿಡ್ 3ನೇ ಅಲೆಯಿಂದ ತಪ್ಪಿಸಲು ಬೆಂಗಳೂರಿನ ಪ್ರತಿವಿಧಾನಸಭಾ ಕ್ಷೇತ್ರದಲ್ಲಿ ಮಕ್ಕಳ ಆಸ್ಪತ್ರೆಯನ್ನು ತೆರೆಯಲು ಸೂಚನೆ ನೀಡಿರುವುದಾಗಿ ಬೆಂಗಳೂರು ಉಸ್ತುವಾರಿ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಅಮೆರಿಕಾದಲ್ಲಿ ಕೊವಿಡ್ 3ನೇ ಅಲೆಯಿಂದ ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಅನೇಕ ಕಟ್ಟು ನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದರು.

ಬೆoಗಳೂರಿನ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮಕ್ಕಳ ಆಸ್ಪತೆಯನ್ನು ತೆರೆಯಲು ಸೂಚನೆಯನ್ನು ನೀಡಿದ್ದೇನೆ. ಐದಾರು ದಿನಗಳಲ್ಲಿ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ. ಕೇರಳದಲ್ಲಿ ಕೊರೋನಾ ಪ್ರಕರಣ ಹೆಚ್ಚಾಗಿದೆ. ಅದು ನಮ್ಮ ರಾಜ್ಯದಲ್ಲಿ ಕಾಣಿಸದಂತೆ ಕ್ರಮವನ್ನು ಕೈಗೊಳ್ಳಲಾಗುವುದು ಎಂದರು.

ಆಗಸ್ಟ್ 15 ರ ನಂತರ ಬೆಂಗಳೂರಿನಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಗೆ ತರಲಾಗುವುದು. ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳಿಗೆ ತಾತ್ಕಾಲಿಕವಾಗಿ ಬೆಡ್ ಗಳನ್ನು ವಾಪಸ್ ನೀಡಲಾಗಿದೆ. ಅಗತ್ಯ ಬಿದ್ದರೆ ಬೆಡ್ ಗಳನ್ನು ವಾಪಸ್ ಪಡೆಯುತ್ತೇವೆ. ನಮ್ಮ ಆದೇಶದಲ್ಲಿಯೇ ಅದನ್ನು ತಿಳಿಸಿದ್ದೇವೆ ಎಂದು ಅಶೋಕ್ ತಿಳಿಸಿದರು.

Most Popular

Recent Comments