ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ನಿವೇಶನದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾರಾಟ ಮಾಡಿದ ಆರೋಪದಡಿಯಲ್ಲಿ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಮಂಜುನಾಥ್ (50) ಬಂಧಿತ ಆರೋಪಿ
ಇದನ್ನೂ ಓದಿ; ಶುಭ ಕಾರ್ಯಕ್ಕೆ ಹೊರಟ್ಟಿದ್ದ ವೇಳೆ ಭೀಕರ ಅಪಘಾತ: ಓರ್ವ ಸಾವು
ಇದನ್ನೂ ಓದಿ; ರಸ್ತೆ ಅಪಘಾತ, ಫುಟ್ ಪಾತ್ ಮೇಲೆ ನಿಂತಿದ್ದ ಯುವಕ ಸಾವು
ಇಲ್ಲಿನ ನಿವಾಸಿಯೊಬ್ಬರು ಶುಭಮಂಗಳ ಸಮೀಪ 20×30 ಅಳತೆಯ ನಿವೇಶನಕ್ಕೆ ನಕಲಿ ದಾಖಲೆಗಳನ್ನು ಸೃಷ್ಟಿಸಿ, ನಿವೇಶನಗಳನ್ನು ಮಾರಿದ್ಧಾರೆ. ಆದರೆ ಖಾತೆ ಮಾಡಿಸುವ ಸಂಬಂಧ ಪಾಲಿಕೆಯಲ್ಲಿ ವಿಚಾರಿಸಿದಾಗ, ನಿವೇಶನದ ಸಂಖ್ಯೆಯೇ ಇಲ್ಲದಿರುವುದು ಗೊತ್ತಾಗಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ
- ಪಟ್ಟಣದಲ್ಲಿ ಡಬಲ್ ಮರ್ಡರ್; ಕೊನೆಗೂ ಆರೋಪಿ ಅರೆಸ್ಟ್; ಹತ್ಯೆಗೆ ಕಾರಣವೇನು?
- ಕಾಡಾನೆ ದಾಳಿಗೊಳಗಾಗಿದ್ದ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೇ ಸಾವು
ಇದರಿಂದಾಗಿ ನಕಲಿ ದಾಖಲೆ ನೀಡಿ ಮೋಸ ಮಾಡಿದ್ದ ವ್ಯಕ್ತಿಯ ವಿರುದ್ಧ ವಿನೋಬನಗರ ಪೊಲೀಸ್ ಸ್ಟೇಷನ್ ನಲ್ಲಿ ಕಂಪ್ಲೇಂಟ್ ದಾಖಲಾಗಿತ್ತು. ದೂರು ದಾಖಲಿಸಿಕೊಂಡ ಪೊಲೀಸರು ವಂಚನೆ ಪ್ರಕರಣದಡಿಯಲ್ಲಿ ಆರೋಪಿಯನ್ನ ಬಂಧಿಸಿದ್ಧಾರೆ.
ಹರೀಶ್ ಎಂಬುವವರಿಗೆ ಮೋಸ ಮಾಡಿದ್ದು, ಅವರು ನೀಡಿದ ದೂರಿನ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ; ಕಾಂಗ್ರೆಸ್ ಗೆದ್ದಿದ್ದಕ್ಕೆ ರಸ್ತೆಯಲ್ಲಿ ಪಟಾಕಿ ಸಿಡಿಸಿದ ದಲಿತ ಯುವಕನಿಗೆ ಹಲ್ಲೆ
ಗಳಿಕೆಯಲ್ಲಿ ಇತಿಹಾಸ ನಿರ್ಮಿಸಿದ ‘ದಿ ಕೇರಳ ಸ್ಟೋರಿ’
ದೇಶಾದ್ಯಂತ ಭಾರೀ ಚರ್ಚೆ ಹುಟ್ಟಾಕ್ಕಿರುವ ‘ದಿ ಕೇರಳ ಸ್ಟೋರಿ’ ನಿಧಾನವಾಗಿ ಸದ್ದು ಮಾಡಲು ಆರಂಭಿಸಿದೆ. ಈಗಾಗಲೇ ಕೆಲವೆಡೆ ಸಿನಿಮಾ ಪ್ರದರ್ಶನ ನಿಲ್ಲಿಸಲಾಗುತ್ತಿದೆ. ಆದರೂ ಕೂಡ ಪ್ರೇಕ್ಷಕರು ಸಿನಿಮಾ ನೋಡಲು ಮುಗಿಬೀಳುತ್ತಿದ್ದಾರೆ. ಇದು ಮತ್ತೊಂದು ‘ಕಾಶ್ಮೀರ್ ಫೈಲ್ಸ್’ ಆಗುವ ಸುಳಿವು ಸಿಗುತ್ತಿದೆ.
ಇದನ್ನೂ ಓದಿ; ಅನಾಥ ಶವದ ಪಕ್ಕದಲ್ಲಿದ್ದ ಬ್ಯಾಗಿನಲ್ಲಿ 6.65 ಲಕ್ಷ ಪತ್ತೆ
ಸುದೀಪ್ತೊ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಅದಾ ಶರ್ಮಾ, ಯೋಗಿತಾ ಬಿಹಾನಿ ಹಾಗೂ ಸೋನಿಯಾ ಬಾಲಾನಿ ಲೀಡ್ ರೋಲ್‌ಗಳಲ್ಲಿ ನಟಿಸಿದ್ದಾರೆ. ರಿಲೀಸ್‌ಗೂ ಮೊದಲೇ ಈ ಸಿನಿಮಾ ಪ್ರದರ್ಶನಕ್ಕೆ ಅವಕಾಶ ಕೊಡಬಾರದು ಎಂದು ಕೇರಳದಲ್ಲಿ ಒತ್ತಡ ಶುರುವಾಗಿತ್ತು. ಸಿನಿಮಾ ಬಿಡುಗಡೆ ವಿರೋಧಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಸಿನಿಮಾ ಬಿಡುಗಡೆಗೆ ಕೋರ್ಟ್ ಅಸ್ತು ಎಂದಿತ್ತು.
ಇದನ್ನೂ ಓದಿ; ಹಣಕ್ಕಾಗಿ ಯುವತಿಯ ಕಿಡ್ನ್ಯಾಪ್
ಮೇ 5ರಂದು ದೇಶಾದ್ಯಂತ ಬಿಡುಗಡೆಗೊಂಡ ಈ ಚಿತ್ರ ೧೦ ದಿನಗಳಲ್ಲಿ ಮೈಲುಗಲ್ಲೊಂದನ್ನು ನೆಟ್ಟಿದೆ. ಸುದೀಪ್ತೋ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ ಸಿನಿಮಾ 135 ಕೋಟಿ ರೂ. ಗಳಿಸಿದೆ. ಈ ಮೂಲಕ ಬಾಕ್ಸ್ ಆಫೀಸ್ ನಲ್ಲಿ ಯಶಸ್ವಿ ಪ್ರದರ್ಶನ ಮುಂದುವರಿಸಿದೆ. ಈ ಮೂಲಕ 2023 ರಲ್ಲಿ ಬಾಲಿವುಡ್ ನಲ್ಲಿ ಅತೀ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾಗಳಲ್ಲಿ ಎರಡನೇ ಸಿನಿಮಾವಾಗಿ ‘ದಿ ಕೇರಳ ಸ್ಟೋರಿ’ ಹೊರಹೊಮ್ಮಿದೆ.
ಕೇರಳದಲ್ಲಿ ಬಲವಂತವಾಗಿ ಯುವತಿಯರನ್ನು ಇಸ್ಲಾಂಗೆ ಮತಾಂತರ ಮಾಡಿ ಅವರನ್ನು ಭಯೋತ್ಪಾದನೆಗೆ ದೂಡಲಾಗುತ್ತಿದೆ ಎನ್ನುವ ವಿಚಾರವನ್ನಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ವ್ಯವಸ್ಥಿತ ಮತಾಂತರ ಸುತ್ತಾ ಸಿನಿಮಾ ಕಥೆ ಸುತ್ತುತ್ತದೆ. ಈ ಸಿನಿಮಾದಲ್ಲಿ ಹೇಳಿರುವುದು ಕಟ್ಟು ಕತೆ, ಇದರಿಂದ ಕೆಟ್ಟ ಸಂದೇಶ ರವಾನೆಯಾಗುತ್ತದೆ. ಹಾಗಾಗಿ ಸಿನಿಮಾ ಬಿಡುಗಡೆ ಮಾಡಲು ಅವಕಾಶ ಕೊಡಬಾರದು ಎಂದು ಕೆಲವರು ಆಗ್ರಹಿಸಿದ್ದರು. ಐಪಿಎಲ್ ಭರಾಟೆ ನಡುವೆಯೂ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರೇಕ್ಷಕರನ್ನು ಥಿಯೇಟರ್‌ಗಳಿಗೆ ಸೆಳೀತಿದೆ.
ಇದನ್ನೂ ಓದಿ; ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ
ಇದನ್ನೂ ಓದಿ; ಮಗಳ ಮೊಬೈಲ್ ಫೋನ್ ನಿಂದಲೇ ಬಂತು 20 ಲಕ್ಷ ರೂ.ಗಳ ಬೇಡಿಕೆ
ಫಸ್ಟ್ ವೀಕೆಂಡ್ 35. 25 ಕೋಟಿ ರೂ. ಗಳಿಕೆ:
ಭಾರತದಲ್ಲಿ ಶುಕ್ರವಾರ 8.03 ಕೋಟಿ ರೂ. ಕಲೆಕ್ಷನ್ ಮಾಡಿದ್ದ ಸಿನಿಮಾ ಶನಿವಾರ 11.22 ಕೋಟಿ ರೂ. ಹಾಗೂ ಭಾನುವಾರ 16 ಕೋಟಿ ರೂ. ಗಳಿಕೆ ಕಂಡು ಸಂಚಲನ ಸೃಷ್ಟಿಸಿದೆ. ಒಟ್ಟಾರೆ ಫಸ್ಟ್ ವೀಕೆಂಡ್‌ನಲ್ಲಿ ಸಿನಿಮಾ 35. 25 ಕೋಟಿ ರೂ. ಬಾಚಿ ಗೆಲುವಿನ ಓಟ ಮುಂದುವರೆಸಿದೆ.