Credit Score:ಕ್ರೆಡಿಟ್ ಸ್ಕೋರ್ ಕಡಿಮೆ ಇದ್ರೆ ಲೋನ್ ಪಡೆಯೋದು ಹೇಗೆ

(Credit Score) ಯಾವುದೇ ಬ್ಯಾಂಕ್ ನಲ್ಲಿ ವ್ಯವಹಾರ ಅಥವಾ ಬೇರೆ ಕೆಲಸಗಳಿಗೆ ಸಾಲ ಪಡೆಯಬೇಕಾದರೆ ಮೊದಲು ಕ್ರೇಡಿಟ್ ಸ್ಕೋರ್ ಉತ್ತಮವಾಗಿರಬೇಕು. ಹೌದು, ಬ್ಯಾಂಕ್ ನಲ್ಲಿ ಕ್ರೆಡಿಟ್ ಸ್ಕೋರ್ ಚೆನ್ನಾಗಿದ್ದರೆ ಸುಲಭವಾಗಿ ಸಾಲ ಸಿಗುತ್ತೆ. 300 ರಿಂದ 900 ಪಾಯಿಂಟ್ ಗಳನ್ನು ನಾವು ಕ್ರೆಡಿಟ್ ಸ್ಕೋರ್ ಎಂದು ಪರಿಗಣಿಸುತ್ತೇವೆ. ಇದರಲ್ಲಿ 750 ಕ್ಕಿಂತ ಹೆಚ್ಚಿನ ಸ್ಕೋರ್ ಇದ್ರೆ ಅದನ್ನು ಉತ್ತಮ ಕ್ರೆಡಿಟ್ ಸ್ಕೋರ್ ಎಂದು ಪರಿಗಣಿಸಲಾಗುತ್ತದೆ. ಹಾಗಾಗಿ 750 ಕ್ಕಿಂತ ಜಾಸ್ತಿ 900 ವರೆಗೆ ಇರುವ ಕ್ರೆಡಿಟ್ ಸ್ಕೋರ್, ಬಹಳ ಬೇಗ ಮತ್ತು ಸುಲಭವಾಗಿ ಸಾಲ ಸೌಲಭ್ಯ ಪಡೆದುಕೊಳ್ಳಲು ಸಹಾಯವಾಗುತ್ತದೆ. ಅದೇ ಕ್ರೆಡಿಟ್ ಸ್ಕೋರ್ ಕಡಿಮೆ ಇದ್ರೆ ಸಾಲ ಸೌಲಭ್ಯ ಸುಲಭವಾಗಿ ಸಿಗುವುದಿಲ್ಲ.


ಇದನ್ನೂ ಓದಿ: ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್


ಕ್ರೆಡಿಟ್ ಸ್ಕೋರ್ ಕಡಿಮೆ ಇದ್ದರೂ ಸಾಲ ಪಡೆದುಕೊಳ್ಳುವುದು ಹೇಗೆ?:
* ಹೆಚ್ಚಿನ ಡೌನ್ ಪೇಮೆಂಟ್:
ಹೌದು ನಿಮ್ಮ ಕ್ರೆಡಿಟ್ ಸ್ಕೋರ್ ಕಡಿಮೆ ಇದ್ದರೆ ಸಾಲ ಪಡೆಯುವಾಗ ಡೌನ್ ಪೇಮೆಂಟ್ ಹೆಚ್ಚಾಗಿ ಮಾಡಬೇಕು ಅಂದರೆ ವಾಹನದ ಮೇಲೆ ಸಾಲ ಪಡೆಯುವುದಿದ್ದರೆ ಈ ನಿಯಮ ಅನ್ವಯವಾಗುತ್ತದೆ. ಈ ರೀತಿ ಮಾಡುವುದರಿಂದ ನಿಮ್ಮ ಸಾಲದ ಹೊರೆ ಕೂಡ ಕಡಿಮೆಯಾಗುತ್ತದೆ ಜೊತೆಗೆ ಬ್ಯಾಂಕ್ ಬೇಗ ಸಾಲವನ್ನು ಮಂಜೂರು ಮಾಡುತ್ತದೆ.

* ಒಂದಕ್ಕಿಂತ ಹೆಚ್ಚು ಬ್ಯಾಂಕ್ ಗಳಲ್ಲಿ ಮಾಹಿತಿ ಪಡೆಯಿರಿ:
ಬೇರೆ ಬೇರೆ ರೀತಿಯ ಸಾಲವನ್ನು ಬೇರೆ ಬೇರೆ ಬ್ಯಾಂಕುಗಳು ನೀಡುತ್ತವೆ ಹಾಗೂ ನಿಯಮಗಳಲ್ಲಿಯೂ ಕೂಡ ಸಾಕಷ್ಟು ವ್ಯತ್ಯಾಸ ಇರುತ್ತದೆ. ಕೆಲವು ಬ್ಯಾಂಕುಗಳು ಕ್ರೆಡಿಟ್ ಸ್ಕೋರ್ ಗೆ ಮೊದಲ ಆದ್ಯತೆ ನೀಡುತ್ತವೆ. ಆದರೆ ಇನ್ನೂ ಕೆಲವು ಬ್ಯಾಂಕುಗಳು ಕ್ರೆಡಿಟ್ ಸ್ಕೋರ್ ಗೆ ಬದಲಾಗಿ ಕೆಲವು ಆಪ್ಷನ್ ಗಳನ್ನು ಕೊಡುತ್ತವೆ. ಇಂತಹ ಸಂದರ್ಭದಲ್ಲಿ ನೀವು ಸಾಲ ಮಾಡುವುದಕ್ಕೂ ಮೊದಲು ನಾಲ್ಕಾರು ಬ್ಯಾಂಕುಗಳಲ್ಲಿ ವಿಚಾರಿಸಿ ನಂತರ ಎಲ್ಲಿ ಸೂಕ್ತ ಎನ್ನುವುದನ್ನು ಆಯ್ಕೆ ಮಾಡಿಕೊಳ್ಳಿ.


ಇದನ್ನೂ ಓದಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಜಮಾ ಕುರಿತು ಬಿಗ್ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ


* ಜಂಟಿ ಸಾಲ:
ನಿಮ್ಮ ಕ್ರೆಡಿಟ್ ಸ್ಕೋರ್ ಕಡಿಮೆ ಇದ್ದರೆ ನೀವು ಕುಟುಂಬದ ಸದಸ್ಯರೊಂದಿಗೆ ಅಥವಾ ಇತರ ಪಾರ್ಟ್ನರ್ ಜೊತೆಗೆ ಸಾಲ ತೆಗೆದುಕೊಳ್ಳಬಹುದು. ಈ ರೀತಿ ಜಂಟಿಯಾಗಿ ಸಾಲ ತೆಗೆದುಕೊಂಡಾಗ ಅವರ ಕ್ರೆಡಿಟ್ ಸ್ಕೋರ್ ಉತ್ತಮವಾಗಿದ್ದರೆ ನಿಮಗೆ ಸುಲಭ ಸಾಲ ಸಿಗುತ್ತದೆ.

* ಸರಿಯಾದ ದಾಖಲೆ ನೀಡುವುದು:
ನೀವು ಉತ್ತಮ ಕೆಲಸದಲ್ಲಿ ಇದ್ದು, ನಿಮ್ಮ ಬಳಿ ಆಸ್ತಿ ಕೂಡ ಇದ್ದರೆ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೀಡುವುದು ಬಹಳ ಮುಖ್ಯ. ನಿಮ್ಮ ಬ್ಯಾಂಕ್ ಸ್ಟೇಟ್ಮೆಂಟ್ ಸ್ಯಾಲರಿ ಸ್ಲಿಪ್ ಮೊದಲಾದ ದಾಖಲೆಗಳು ಸಾಲ ಪಡೆದುಕೊಳ್ಳುವುದಕ್ಕೆ ಹೆಚ್ಚು ಸಹಾಯಕವಾಗುತ್ತವೆ.

Credit Score:ಕ್ರೆಡಿಟ್ ಸ್ಕೋರ್ ಕಡಿಮೆ ಇದ್ರೆ ಲೋನ್ ಪಡೆಯೋದು ಹೇಗೆ
Credit Score:ಕ್ರೆಡಿಟ್ ಸ್ಕೋರ್ ಕಡಿಮೆ ಇದ್ರೆ ಲೋನ್ ಪಡೆಯೋದು ಹೇಗೆ

ಇದನ್ನೂ ಓದಿ: ಬಿಡುಗಡೆ ಆಯ್ತು 9ನೇ ಕಂತಿನ ಗೃಹಲಕ್ಷ್ಮಿ ಹಣ; ಈ ಜಿಲ್ಲೆಗಳಿಗೆ ಮೊದಲು ಹಣ ಜಮಾ!; ಇಲ್ಲಿದೆ ನೋಡಿ ಡಿಟೈಲ್ಸ್


ಈ ರೀತಿ ಕ್ರೆಡಿಟ್ ಸ್ಕೋರ್ ಕಡಿಮೆ ಇದ್ದಾಗಲೂ ಕೂಡ ಸಾಲ ಪಡೆದುಕೊಳ್ಳಲು ಸಾಧ್ಯವಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
  10. ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ