ಶ್ರೀನಗರ: ಟಿ-20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆದ್ದಿದ್ದ ಕಾರಣಕ್ಕೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಭಾನುವಾರ ಭಾರತ-ಪಾಕಿಸ್ತಾನದ ನಡುವೆ ಕ್ರಿಕೆಟ್ ಟಿ-20 ಪಂದ್ಯಾವಳಿ ನಡೆದಿತ್ತು ಇದರಲ್ಲಿ ಪಾಕಿಸ್ತಾನ ಭಾರತವನ್ನು 10 ವಿಕೆಟ್‍ಗಳ ಅಂತರದಿಂದ ಸೋಲಿಸಿತ್ತು.
ಕಣಿವೆ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರ ಶ್ರೀನಗರ ಸೌರಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಶೇರ್-ಐ-ಕಾಶ್ಮೀರ್ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನ ವಿದ್ಯಾರ್ಥಿಗಳು ಪಾಕಿಸ್ತಾನ ಗೆದ್ದ ಬಳಿಕ ಭಾರಿ ಪ್ರಮಾಣದಲ್ಲಿ ಪಟಾಕಿಯನ್ನು ಸಿಡಿಸಿ, ಘೋಷಣೆ ಕೂಗಿ ಸಂಭ್ರಮಾಚರಣೆಯನ್ನು ನಡೆಸಿದರು.
ಈ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 105 , 505 ಮತ್ತು ಕಾನೂನು ಬಾಹಿತ ಚಟುವಟಿಕೆಗಳ ನಿಯಂತ್ರಣ ಕಾಯ್ದೆ ಸೆಕ್ಷನ್ 13ರ ಅಡಿ ಪ್ರಕರಣವನ್ನು ದಾಖಲಿಸಲಾಗಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಡಿಜಿ ದಿಲ್‍ಬಾಗ್‍ಸಿಂಗ್, ಎರಡು ಎಫ್‍ಐಆರ್ ಗಳನ್ನು ದಾಖಲಿಸಲಾಗಿದೆ. ಸಂಭ್ರಮಾಚರಣೆಗೆ ಸಂಬಂಧಿಸಿದಂತೆ ಹಲವಾರು ವಿಡಿಯೋಗಳು ಲಭಿಸಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು