(Crop -Damage;) ಪ್ರಸಕ್ತ ವರ್ಷದ ಮಳೆ ಹಾನಿಗೆ ಪರಿಹಾರವಾಗಿ ರೈತರಿಗೆ 297 ಕೋಟಿ ರೂ. ಪರಿಹಾರ ನೀಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃ ಷ್ಣಬೈರೇಗೌಡ ವಿಧಾನಸಭೆಗೆ ತಿಳಿಸಿದರು.
ಇದನ್ನೂ ಓದಿ; SC/ST ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ; ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಭೂಕುಸಿತ ತಡೆಗೆ ಶಾಶ್ವತ ಪರಿಹಾರಕ್ಕಾಗಿ ಎರಡೂವರೆ ವರ್ಷಗಳಲ್ಲಿ 425 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು. ಆದರೆ, ಕೇಂದ್ರ ಸರ್ಕಾರದಿಂದ ಈ ವರ್ಷದ ಎನ್‌ಡಿಆರ್‌ಎಫ್ ಪರಿಹಾರ ಈವರೆಗೂ ಸಂದಾಯವಾಗಿಲ್ಲ ಎಂದರು.
3-4 ದಿನದಲ್ಲಿ ಜಮೆ:
ಪ್ರಸಕ್ತ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಬೆಳೆ ಹಾನಿ ಉದ್ದೇಶಕ್ಕೆ ಒಟ್ಟು 297 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಶೇ.75 ರಷ್ಟು ಮಂದಿಗೆ ಪರಿಹಾರ ತಲುಪಿದೆ. ಬಾಕಿ ಉಳಿದವರಿಗೆ 3-4 ದಿನಗಳಲ್ಲಿ ಜಮೆಯಾಗಲಿದೆ ಎಂದರು.
ಇದನ್ನೂ ಓದಿ; ಶಾಲೆಗಳ ಶೈಕ್ಷಣಿಕ ಪ್ರವಾಸ ರದ್ದು!; ಇಲ್ಲಿದೆ ಮಹತ್ವದ ಮಾಹಿತಿ…
ತುರ್ತು ಪರಿಹಾರಕ್ಕಾಗಿ 80.47 ಕೋಟಿ ರೂ. ಅನುದಾನ:
ರಸ್ತೆ, ಸೇತುವೆ, ಶಾಲಾ ಕೊಠಡಿ, ಅಂಗನವಾಡಿ, ಆರೋಗ್ಯ ಕೇಂದ್ರ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ವ್ಯವಸ್ಥೆ ಪುನರ್ ಸ್ಥಾಪನೆಯ ತುರ್ತು ಪರಿಹಾರಕ್ಕಾಗಿ 80.47 ಕೋಟಿ ರೂ. ಅನುದಾನ ನೀಡಲಾಗಿದೆ. ಈ ಪೈಕಿ 60.16 ಕೋಟಿ ರೂ. ಬಿಡುಗಡೆಯಾಗಿದೆ.
ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರ್‌ಗಳ ಖಾತೆಯಲ್ಲಿ 579 ಕೋಟಿ ರೂ:
ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರ್‌ಗಳ ಖಾತೆಯಲ್ಲಿ ತುರ್ತು ಪರಿಹಾರಕ್ಕಾಗಿ 579 ಕೋಟಿ ರೂ. ಲಭ್ಯವಿದೆ. ಪ್ರವಾಹದಿಂದ ಮನೆಗೆ ನೀರು ನುಗ್ಗಿರುವ ಕಡೆ ನಿತ್ಯದ ಖರ್ಚು ನಿಭಾಯಿಸಲು 5,000 ರೂ. ವಿತರಿಸಲಾಗಿದ್ದು, 5.62 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ; ಆಧಾರ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಓದಿ; ಈ ಕೆಲಸ ಮಾಡಲು ಇಂದು ಕೊನೆಯ ದಿನ
ಭೂಕುಸಿತ ತಡೆಗೆ ಶಾಶ್ವತ ಪರಿಹಾರ ಕ್ರಮ
ರಾಜ್ಯದ ಆರು ಜಿಲ್ಲೆಗಳ 863 ಗ್ರಾಪಂಗಳನ್ನು ಭೂಕುಸಿತ ಸಂಭವಿಸುವ ಪ್ರದೇಶಗಳು ಎಂದು ಗುರುತಿಸಲಾಗಿದೆ,’’ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ವಿಧಾನಸಭೆಗೆ ತಿಳಿಸಿದರು.
ಭೂಕುಸಿತ ಸಂಭಾವ್ಯ ಸ್ಥಳಗಳ ಬಗ್ಗೆ ಕೇಂದ್ರ ಸರ್ಕಾರದ ನ್ಯಾಷನಲ್ ಜಿಯಾಲಜಿಕಲ್ ಸರ್ವೆ ಸಂಸ್ಥೆಯಿಂದ ವರದಿ ಪಡೆಯಲಾಗಿದೆ. ಅದರಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಈ ಪಂಚಾಯಿತಿಗಳಿವೆ ಎಂದರು.
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿರುವ ಯುವಕ – ಯುವತಿಯರಿಗೆ ಸಿಹಿಸುದ್ದಿ; ಈ ತರಬೇತಿಗೆ ಅರ್ಜಿ ಆಹ್ವಾನ
ಈ ಜಿಲ್ಲೆಗಳಲ್ಲಿ ಭೂಕುಸಿತ ತಡೆಗೆ 425 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಸಿಎಂ ಜೊತೆಗೆ ಚರ್ಚಿಸಿ ಅವರ ಸೂಚನೆಯಂತೆ ಎರಡೂವರೆ ವರ್ಷದಲ್ಲಿ 400 ಕೋಟಿ ರೂ. ವೆಚ್ಚದ ಕಾಮಗಾರಿ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಈಗಾಗಲೇ 152 ಕೋಟಿ ರೂ. ವೆಚ್ಚದಲ್ಲಿ ನಾನಾ ಕಾಮಗಾರಿ ಮಂಜೂರು ಮಾಡಲಾಗಿದೆ ಎಂದು ಸಚಿವ ತಿಳಿಸಿದರು.

ಇದನ್ನೂ ಓದಿ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿರುವವರ ಗಮನಕ್ಕೆ; ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






