CROP-INSURANCE:ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ದಿನಾಂಕ ವಿಸ್ತರಿಸಲು ಭರವಸೆ

(CROP-INSURANCE:) ಮಲೆನಾಡು ಭಾಗದಲ್ಲಿ ಸುರಿದ ಮಳೆಗೆ ಹಲವು ಅವಾಂತರ ಸೃಷ್ಟಿಸಿತ್ತು, ಸದ್ಯ ಕೆಲವು ಭಾಗದಲ್ಲಿ ಇದೀಗ ಸುಧಾರಿಸಿಕೊಳ್ಳುತ್ತಿದೆ. ಆದರೆ, ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ ಆದ ಪರಿಣಾಮ ಈಗಲೇ ಬೆಳೆ ನಾಶವಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.


ಇದನ್ನೂ ಓದಿ: ಅನಧಿಕೃತ ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್ ನೀಡಿದ ಇಂಧನ ಸಚಿವ; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ


ಈ ನಡುವೆ ರಾಜ್ಯದ ರೈತಾಪಿ ವರ್ಗಕ್ಕೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಮುಂಗಾರು ಹಂಗಾಮಿಗೆ ಬೆಳೆ ವಿಮೆಗೆ ನೋಂದಣಿ ಮಾಡಿಸಲು ನಿನ್ನೆ (ಜುಲೈ 31 2024) ಕೊನೆಯ ದಿನವಾಗಿತ್ತು. ಆದರೆ ಮಲೆನಾಡು ಭಾಗದಲ್ಲಿ ಸುರಿದ ಮಳೆಯಿಂದಾಗಿ ಹಲವು ರೈತರಿಗೆ ಬೆಳೆ ವಿಮೆ ಪ್ರೀಮಿಯಂ ಪಾವತಿ ಮಾಡಲು ಸಾಧ್ಯವಾಗಿರುವುದಿಲ್ಲ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ದಿನಾಂಕ ವಿಸ್ತರಿಸಿ ರೈತರಿಗೆ ಬೆಳೆ ವಿಮೆ ಪಾವತಿಗೆ ಮತ್ತಷ್ಟು ಸಮಯಾವಕಾಶ ನೀಡಬೇಕೆಂದು ನ್ಯೂಸ್ ಮಲ್ನಾಡ್ ಸುದ್ದಿ ಬಿತ್ತರಿಸಿತ್ತು.


ಇದನ್ನೂ ಓದಿ: ಮಲೆನಾಡಿನಲ್ಲಿ ಧಾರಾಕಾರ ಮಳೆಯಿಂದ ಎಲ್ಲೆಡೆ ಅವಾಂತರ; ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ವಿಸ್ತರಿಸಬೇಕಿದೆ ದಿನಾಂಕ


ಇದೀಗ ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ, ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌವ್ಹಾನ್ ಅವರ ಗಮನಕ್ಕೆ ತಂದಿದ್ದು, ಜುಲೈ ತಿಂಗಳ ಅಂತ್ಯದಲ್ಲಿ ಮುಗಿಯುವ ಬೆಳೆ ವಿಮೆ ಅವಧಿಯನ್ನು ಆಗಸ್ಟ್ ತಿಂಗಳ ಅಂತ್ಯದವರೆಗೆ ವಿಸ್ತರಿಸಿ ರೈತಾಪಿ ವರ್ಗಕ್ಕೆ ಸಹಾಯ ಮಾಡಬೇಕೆಂದು ಮನವಿ ಮಾಡಿದ್ದಾರೆ. ಮನವಿಗೆ ಸ್ಪಂದಿಸಿದ ಅವರು ಈ ಬಗ್ಗೆ ಕೂಡಲೇ ಆದೇಶ ನೀಡುತ್ತೇನೆ ಎಂಬ ಭರವಸೆ ನೀಡಿದ್ದಾರೆ.

CROP-INSURANCE:ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ದಿನಾಂಕ ವಿಸ್ತರಿಸಲು ಭರವಸೆ
CROP-INSURANCE:ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ದಿನಾಂಕ ವಿಸ್ತರಿಸಲು ಭರವಸೆ

ಇದನ್ನೂ ಓದಿ: ಕೃಷಿ ಪಂಪ್ ಸೆಟ್ ಹೊಂದಿರುವವರಿಗೆ ಮತ್ತೊಂದು ಮುಖ್ಯ ಮಾಹಿತಿ; ಏನದು? ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?