(Crop-insurance:) ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಇಂದು ಕೊನೆಯ ದಿನಾಂಕವಾಗಿದೆ (31.07.2024). ಹೌದು, ಅನೇಕ ಬೆಳೆಗಳಿಗೆ ಬೆಳೆ ವಿಮೆ ಪ್ರೀಮಿಯಂ ಪಾವತಿ ಮಾಡಲು ಇಂದು ಕೊನೆಯ ದಿನಾಂಕವಾಗಿದ್ದು, ರೈತರು ಕಂಗಾಲಾಗಿದ್ದಾರೆ.
ಇದನ್ನೂ ಓದಿ: ಅನಧಿಕೃತ ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್ ನೀಡಿದ ಇಂಧನ ಸಚಿವ; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ
ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಅವಾಂತರ ಸೃಷ್ಟಿಯಾಗಿದ್ದು, ತಿಂಗಳಿನಿಂದ ವಿದ್ಯುತ್ ಸಂಪರ್ಕ ಕಡಿತವಾಗಿದೆ, ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಅಲ್ಲದೆ ಹಲವು ಸೇತುವೆಗಳಿಗೆ ಹಾನಿಯಾಗಿದೆ. ಜೊತೆಗೆ ಸ್ಥಳದಲ್ಲಿ ಭೂಮಿ ಬಿರುಕು ಬಿಟ್ಟಿದ್ದು, ಧರೆ ಕುಸಿತ, ಗುಡ್ಡ ಕುಸಿತ ಉಂಟಾಗಿದೆ. ಜೊತೆಗೆ ಕಳೆದ ವಾರ ಸುರಿದ ಭಾರೀ ಗಾಳಿ-ಮಳೆಗೆ ಮರ ಹಾಗೂ ವಿದ್ಯುತ್ ಕಂಬಗಳು ಉರುಳಿ ಬಿದ್ದು ಅಪಾರ ನಷ್ಟ ಉಂಟಾಗಿತ್ತು. ಮಳೆಯ ನಡುವೆಯೇ ಸಿಬ್ಬಂದಿ ಅವುಗಳನ್ನು ತೆರವುಗೊಳಿಸಲು ಶ್ರಮಿಸುತ್ತಿದ್ದಾರೆ. ಈ ನಡುವೆ ಕಚೇರಿಗಳಿಗೆ ತೆರಳಿ ಬೆಳೆ ವಿಮೆ ಪ್ರೀಮಿಯಂ ಪಾವತಿ ಮಾಡಲು ರೈತರಿಗೆ ಕಷ್ಟವಾಗಿದ್ದು, ಚಿಂತೆಗೆ ದೂಡುವಂತಾಗಿದೆ.
ಇದನ್ನೂ ಓದಿ: ಕೃಷಿ ಪಂಪ್ ಸೆಟ್ ಹೊಂದಿರುವವರಿಗೆ ಮತ್ತೊಂದು ಮುಖ್ಯ ಮಾಹಿತಿ; ಏನದು? ಇಲ್ಲಿದೆ ನೋಡಿ
ಬೆಳೆ ವಿಮೆ ಪಾವತಿಗೆ ವಿಸ್ತರಿಸಬೇಕಿದೆ ದಿನಾಂಕ:
ಹೌದು, ಮಲೆನಾಡು ಭಾಗದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದ್ದು, ಈಗಲೇ ಬೆಳೆನಾಶವಾಗಿದೆ. ಹಾಗೆಯೇ ಮಳೆಯ ಅಬ್ಬರಕ್ಕೆ ರೈತರಿಗೆ ಬೆಳೆ ವಿಮೆ ಪ್ರೀಮಿಯಂ ಪಾವತಿ ಮಾಡಲು ಕಷ್ಟವಾಗಿದ್ದು, ಹಲವು ರೈತರು ಇನ್ನೂ ಬೆಳೆ ವಿಮೆ ಹಣ ಪಾವತಿ ಮಾಡಬೇಕಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಬೆಳೆ ವಿಮೆ ಪಾವತಿಗೆ ದಿನಾಂಕ ವಿಸ್ತರಿಸಿ ರೈತರಿಗೆ ಬೆಳೆ ವಿಮೆ ಪಾವತಿಗೆ ಮತ್ತಷ್ಟು ಸಮಯಾವಕಾಶ ನೀಡಬೇಕಿದೆ.
ಇದನ್ನೂ ಓದಿ: ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
ಬೆಳೆ ವಿಮೆಯನ್ನು ಮಾಡಿಸಲು ವಿವಿಧ ಬೆಳೆಗಳಿಗೆ ಕೊನೆಯ ದಿನಾಂಕ ಯಾವಾಗ:
ಭತ್ತ (ನೀರಾವರಿ), ಮುಸುಕಿನ ಜೋಳ (ನೀರಾವರಿ ಮತ್ತು ಮಳೆಯಾಶ್ರಿತ), ತೊಗರಿ (ನೀರಾವರಿ ಮತ್ತು ಮಳೆಯಾಶ್ರಿತ), ಉದ್ದು (ಮಳೆಯಾಶ್ರಿತ), ನವಣೆ (ಮಳೆಯಾಶ್ರಿತ) ತೊಗರಿ (ನೀರಾವರಿ ಮತ್ತು ಮಳೆಯಾಶ್ರಿತ), ಹತ್ತಿ (ನೀರಾವರಿ ಮತ್ತು ಮಳೆಯಾಶ್ರಿತ) ಹಾಗೂ ಸೋಯಾ ಅವರೆ (ಮಳೆಯಾಶ್ರಿತ) ಬೆಳೆಗಳಿಗೆ ರೈತರು ನೋಂದಣಿ ಮಾಡಿಕೊಳ್ಳಳು ಜುಲೈ 31 ಕೊನೆಯ ದಿನವಾಗಿದೆ.
ಸೂರ್ಯಕಾಂತಿ (ನೀರಾವರಿ ಮತ್ತು ಮಳೆಯಾಶ್ರಿತ ಬೆಳೆಗೆ ನೋಂದಣಿ ಮಾಡಿಕೊಳ್ಳಲು ಆಗಸ್ಟ್16 ಕೊನೆಯ ದಿನವಾಗಿದೆ.
ಇದನ್ನೂ ಓದಿ: 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
ಬೆಳೆ ಹಾನಿಯಾದರೆ ರೈತರೇನು ಮಾಡಬೇಕು?:
ಬೆಳೆ ವಿಮೆ ಮಾಡಿಸಿದ ನಂತರ ರೈತರ ಬೆಳೆ ಪ್ರಾಕೃತಿಕ ವಿಕೋಪದಿಂದಾಗಿ ಬೆಳೆ ಹಾಳಾದರೆ 72 ಗಂಟೆಯೊಳಗೆ ವಿಮಾ ಕಂಪನಿಗೆ ತಿಳಿಸಬೇಕು. ಆಗ ವಿಮಾ ಕಂಪನಿಯ ಸಿಬ್ಬಂದಿ ರೈತರ ಜಮೀನಿಗೆ ಬಂದು ಬೆಳೆ ಪರಿಶೀಲನೆ ಮಾಡಿದ ನಂತರ ರೈತರಿಗೆ ವಿಮೆ ಪರಿಹಾರ ಹಣ ಜಮೆಯಾಗಲಿದೆ.

ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






