crop-insurance-:ರೈತರಿಗೆ ಮುಖ್ಯ ಮಾಹಿತಿ|ಮಿಸ್‌ ಮಾಡ್ದೆ ಈ ಸುದ್ದಿ ಓದಿ

(crop-insurance-:) ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿಯಲ್ಲಿ ಬೆಳೆ ವಿಮೆಗೆ ನೋಂದಾಯಿಸಲು ಇನ್ಜು ಎರಡು ದಿನ ಮಾತ್ರ ಬಾಕಿ ಇದ್ದು, ರೈತರು ಕೊನೆಯ ದಿನಾಂಕದೊಳಗೆ ನೋಂದಾಯಿಸಬಹುದಾಗಿದೆ.


ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್‌ ಕಾರ್ಡ್‌ ಅನ್ನು ಇಲ್ಲಿ ಪಡೆಯಿರಿ


ಪಿಎಂ ಫಸಲ್ ಭೀಮಾ ಯೋಜನೆಯಲ್ಲಿ ಹಿಂಗಾರು ಹಾಗೂ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ರೈತರು ಕೊನೆಯ ದಿನಾಂಕದೊಳಗಾಗಿ ನೋಂದಾಯಿಸಬಹುದಾಗಿದೆ.


ಇದನ್ನೂ ಓದಿ; ರಾಜ್ಯದ ಎಲ್ಲಾ ರೈತರಿಗೆ ಮುಖ್ಯ ಮಾಹಿತಿ; ಈ ಕೆಲಸ ಮಾಡಲು ಮೂರು ದಿನ ಮಾತ್ರ ಬಾಕಿ


ಹಿಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ನೀರಾವರಿ ಬೆಳೆ ಜೋಳ, ನೀರಾವರಿ ಮತ್ತು ಮಳೆಯಾಶ್ರಿತ ಬೆಳೆ ಕಡಲೆ ಮತ್ತು ಬೇಸಿಗೆ ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ನೀರಾವರಿ ಬೆಳೆಗಳಾದ ನೆಲಗಡಲೆ (ಶೇಂಗಾ), ಭತ್ತ ಹಾಗೂ ಹೋಬಳಿ ಮಟ್ಟದ ಹಿಂಗಾರು ಹಂಗಾಮಿನ ನೀರಾವರಿ ಬೆಳೆ ಮುಸುಕಿನ ಜೋಳ, ನೀರಾವರಿ/ಮಳೆಯಾಶ್ರಿತ ಬೆಳೆ ಸೂರ್ಯಕಾಂತಿ, ಕುಸುಮೆ, ಈರುಳ್ಳಿ ಮತ್ತು ಬೇಸಿಗೆ ಹಂಗಾಮಿನ ನೀರಾವರಿ ಬೆಳೆಗಳಾದ ಸೂರ್ಯಕಾಂತಿ, ಬೆಳೆಗಳಿಗೆ ನೋಂದಾಯಿಸಬಹುದಾಗಿದೆ.


ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್‌ ಶಿಪ್‌; ಅರ್ಜಿ ಸಲ್ಲಿಸಲು ಸಿಂಪಲ್‌ ಸ್ಟೆಪ್‌ ಇಲ್ಲಿದೆ ನೋಡಿ


ಯಾವ ಬೆಳೆಗಳಿಗೆ ಎಷ್ಟು ದಿನ ಬಾಕಿ:
ಹಿಂಗಾರು ಹಂಗಾಮಿನ ಬೆಳೆಗಳಾದ ಜೋಳ, ಮುಸುಕಿನ ಜೋಳ, ಸೂರ್ಯಕಾಂತಿ, ಕುಸುಮೆ ಬೆಳೆಗಳಿಗೆ ಡಿ.16 ಆಗಿದೆ. ಅದರಂತೆ ಮಳೆಯಾಶ್ರಿತ ಬೆಳೆ ಜೋಳ ನ.15, ಈರುಳ್ಳಿ ಬೆಳೆಗೆ ನ.30. ಬೇಸಿಗೆ ಬೆಳೆಗಳಾದ ಭತ್ತ, ನೆಲಗಡಲೆ (ಶೇಂಗಾ), ಸೂರ್ಯಕಾಂತಿ ಮತ್ತು ಈರುಳ್ಳಿ ಬೆಳೆಗಳಿಗೆ 2025 ರ ಫೆ.28 ಕೊನೆಯ ದಿನವಾಗಿದೆ.


ಇದನ್ನೂ ಓದಿ; ಇಂತಹ ಉಚಿತ ಉಪಕರಣ ಪಡೆಯಲು ಅರ್ಜಿ ಆಹ್ವಾನ; ಈ ರೀತಿ ಅರ್ಜಿ ಸಲ್ಲಿಸಿ


ಇನ್ನು ಈ ಯೋಜನೆಯ ಲಾಭ ಪಡೆಯಲು ಯಾವುದೇ ಸ್ಥಳೀಯ ಬ್ಯಾಂಕ್/ಸಾರ್ವಜನಿಕ ಸೇವಾ ಕೇಂದ್ರಗಳಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ.

ಕೃಷಿ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

crop-insurance-:ರೈತರಿಗೆ ಮುಖ್ಯ ಮಾಹಿತಿ|ಮಿಸ್‌ ಮಾಡ್ದೆ ಈ ಸುದ್ದಿ ಓದಿ
crop-insurance-:ರೈತರಿಗೆ ಮುಖ್ಯ ಮಾಹಿತಿ|ಮಿಸ್‌ ಮಾಡ್ದೆ ಈ ಸುದ್ದಿ ಓದಿ

ಇತ್ತೀಚಿನ ಜನಪ್ರಿಯ ಸುದ್ದಿಗಳು