crop-Insurance ರಾಜ್ಯದ ಎಲ್ಲಾ ರೈತರಿಗೆ ಮುಖ್ಯ ಮಾಹಿತಿ

(crop-Insurance) ಪಿಎಂ ಫಸಲ್ ಭೀಮಾ ಯೋಜನೆಯ ಹಿಂಗಾರು ಹಾಗೂ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ರೈತರು ಕೊನೆಯ ದಿನಾಂಕದೊಳಗಾಗಿ ನೋಂದಾಯಿಸಬಹುದಾಗಿದೆ.


ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್‌ ಕಾರ್ಡ್‌ ಅನ್ನು ಇಲ್ಲಿ ಪಡೆಯಿರಿ


ಹಿಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ನೀರಾವರಿ ಬೆಳೆ ಜೋಳ, ನೀರಾವರಿ ಮತ್ತು ಮಳೆಯಾಶ್ರಿತ ಬೆಳೆ ಕಡಲೆ ಮತ್ತು ಬೇಸಿಗೆ ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ನೀರಾವರಿ ಬೆಳೆಗಳಾದ ನೆಲಗಡಲೆ (ಶೇಂಗಾ), ಭತ್ತ ಹಾಗೂ ಹೋಬಳಿ ಮಟ್ಟದ ಹಿಂಗಾರು ಹಂಗಾಮಿನ ನೀರಾವರಿ ಬೆಳೆ ಮುಸುಕಿನ ಜೋಳ, ನೀರಾವರಿ/ಮಳೆಯಾಶ್ರಿತ ಬೆಳೆ ಸೂರ್ಯಕಾಂತಿ, ಕುಸುಮೆ, ಈರುಳ್ಳಿ ಮತ್ತು ಬೇಸಿಗೆ ಹಂಗಾಮಿನ ನೀರಾವರಿ ಬೆಳೆಗಳಾದ ಸೂರ್ಯಕಾಂತಿ, ಬೆಳೆಗಳಿಗೆ ನೋಂದಾಯಿಸಬಹುದಾಗಿದೆ.


ಇದನ್ನೂ ಓದಿ; ರೇಷನ್‌ ಕಾರ್ಡ್‌ ರದ್ದಾದ ಕೂಡಲೇ ಗೃಹಲಕ್ಷ್ಮಿ ಯೋಜನೆ ಹಣ ಸ್ಥಗಿತವಾಗುತ್ತಾ?; ಏನಂತಾರೆ ಅಧಿಕಾರಿಗಳು?


ಹಿಂಗಾರು ಹಂಗಾಮಿನ ಬೆಳೆಗಳಾದ ಜೋಳ, ಮುಸುಕಿನ ಜೋಳ, ಸೂರ್ಯಕಾಂತಿ, ಕುಸುಮೆ ಬೆಳೆಗಳಿಗೆ ಡಿ.16 ಆಗಿದೆ. ಅದರಂತೆ ಮಳೆಯಾಶ್ರಿತ ಬೆಳೆ ಜೋಳ ನ.15, ಈರುಳ್ಳಿ ಬೆಳೆಗೆ ನ.30. ಬೇಸಿಗೆ ಬೆಳೆಗಳಾದ ಭತ್ತ, ನೆಲಗಡಲೆ (ಶೇಂಗಾ), ಸೂರ್ಯಕಾಂತಿ ಮತ್ತು ಈರುಳ್ಳಿ ಬೆಳೆಗಳಿಗೆ 2025 ರ ಫೆ.28 ಕೊನೆಯ ದಿನವಾಗಿದೆ.


ಇದನ್ನೂ ಓದಿ; ರಾಜ್ಯದ ಎಲ್ಲಾ ಹೋಟೆಲ್‌ ಗಳಿಗೆ ಹೊಸ ನಿಯಮ ಜಾರಿ; ಏನದು? ಕಂಪ್ಲೀಟ್‌ ಡಿಟೈಲ್ಸ್‌ ಇಲ್ಲಿದೆ ನೋಡಿ


ಇನ್ನು ಈ ಯೋಜನೆಯ ಲಾಭ ಪಡೆಯಲು ಯಾವುದೇ ಸ್ಥಳೀಯ ಬ್ಯಾಂಕ್/ಸಾರ್ವಜನಿಕ ಸೇವಾ ಕೇಂದ್ರಗಳಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ.

crop-Insurance ರಾಜ್ಯದ ಎಲ್ಲಾ ರೈತರಿಗೆ ಮುಖ್ಯ ಮಾಹಿತಿ
crop-Insurance ರಾಜ್ಯದ ಎಲ್ಲಾ ರೈತರಿಗೆ ಮುಖ್ಯ ಮಾಹಿತಿ

ಇತ್ತೀಚಿನ ಜನಪ್ರಿಯ ಸುದ್ದಿಗಳು