Crop Insurance Scheme: ಬೆಳೆ ವಿಮೆ ಯೋಜನೆಯಡಿಯಲ್ಲಿ ಪರಿಹಾರ

Crop Insurance Scheme: ರೈತರ ಖಾತೆಗೆ 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹಾನಿಗೆ ಒಳಗಾದ ಬೆಳೆಗೆ NDRF ಮತ್ತು ಬೆಳೆ ವಿಮಾ ಯೋಜನೆಯಡಿ ಬಹುತೇಕ ಜಿಲ್ಲೆಗಳಲ್ಲಿ ಬೆಳೆ ವಿಮೆ ಮತ್ತು ಬೆಳೆ ಹಾನಿ ಪರಿಹಾರವನ್ನು ನೇರ ನಗದು ವರ್ಗಾವಣೆ ಮೂಲಕ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ರೈತರಿಗೆ ಬೆಳೆ ಹಾನಿ ಮತ್ತು ಬೆಳೆ ವಿಮೆ ಪರಿಹಾರದ ಹಣ ಜಮಾ ಅಗಿರುವ ವಿವರವನ್ನು ಹೇಗೆ ತಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದು.

ಬೆಳೆ ಪರಿಹಾರ ಮತ್ತು ಬೆಳೆ ವಿಮೆ ಎರಡು ಬೇರೆ ಬೇರೆ ಯೋಜನೆ:

ಕೇಂದ್ರ ಮತ್ತು ರಾಜ್ಯ ಸರಕಾರವು NDRF ಮಾರ್ಗಸೂಚಿಯನ್ವಯ ಬೆಳೆ ಹಾನಿ ಪರಿಹಾರವನ್ನು ಒದಗಿಸಲಾಗುತ್ತದೆ,ಹಲವು ರೈತರಿಗೆ ಈ ಮಾಹಿತಿ ತಿಳಿದಿರುವುದಿಲ್ಲ ಬೆಳೆ ಹಾನಿ ಪರಿಹಾರ ಮತ್ತು ಬೆಳೆ ವಿಮೆ ಯೋಜನೆಯಡಿ ಒದಗಿಸುವ ಪರಿಹಾರವು ಎರಡು ಬೇರೆ ಬೇರೆಯಾಗಿದೆ. ಬೆಳೆ ಹಾನಿ ಆದ ಸಮಯದಲ್ಲಿ ರೈತರು ನಿಮ್ಮ ಗ್ರಾಮದ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲೆಗಳನ್ನು ಒದಗಿಸಿ ಅರ್ಜಿ ಸಲ್ಲಿಸಿ ಬೆಳೆ ಹಾನಿಗೆ ಪರಿಹಾರವನ್ನು ಪಡೆಯಬಹುದು.

ರೈತರು ತಮ್ಮ ಜಮೀನಿನಲ್ಲಿ ಬೆಳೆಯದ ಬೆಳೆಯು ಅತೀಯಾದ ಮಳೆ,ಮಳೆ ಕೊರತೆಯಿಂದಾಗಿ ಬೆಳೆ ಹಾನಿಯಾದರೆ ಕೂಡಲೇ ನಿಮ್ಮ ಹಳ್ಳಿ ವ್ಯಾಪ್ತಿಯಲ್ಲಿ ಬರುವಂತಹ ಕಂದಾಯ ಇಲಾಖೆಯ ಅಧಿಕಾರಿ ಕಚೇರಿಗೆ ಭೇಟಿ ನೀಡಿ. ಅಗತ್ಯ ದಾಖಲೆ ಮತ್ತು ಹಾನಿಯಾದ ಜಮೀನಿನ ಪೋಟೋ ಸಹಿತ ಅರ್ಜಿಯನ್ನು ಸಲ್ಲಿಸಿ.

ನ್ನೂ ಓದಿ: ರೈತರಿಗೆ ಸಿಹಿ ಸುದ್ದಿ; ಸೋಲಾರ್ ಪಂಪ್ ಸೆಟ್‌ಗಳಿಗೆ ಅರ್ಜಿ ಆಹ್ವಾನ

ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ರೈತರು ತಮ್ಮ ಬೆಳೆಗಳಿಗೆ ವಿಮೆಯನ್ನು ಮಾಡಿಸಲು ಅವಕಾಶವಿದ್ದು, ರೈತರು ತಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರವನ್ನು ಭೇಟಿ ಮಾಡಿ ಪ್ರತಿ ಹಂಗಾಮಿ ಬೆಳೆ ಆರಂಭಿಕ ಹಂತದಲ್ಲಿ ಉದಾಹರಣೆಗೆ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಮಾಡಿಸಬೇಕಾದರೆ ಜೂನ್-ಜುಲೈ ನಲ್ಲಿ ಮೆಕ್ಕೆಜೋಳ ಇನ್ನಿತರೆ ಬೆಳೆಗಳಲ್ಲಿಗೆ ಬೆಳೆ ವಿಮೆ ಪ್ರಿಮಿಯಂ ಅನ್ನು ಪಾವತಿ ಮಾಡಿ.

2.5 ಎಕರೆಗೆ ಎಷ್ಟು ಪರಿಹಾರ ನೀಡಲಾಗುತ್ತದೆ?

ಬೆಳೆ ಪರಿಹಾರ ಯೋಜನೆಯಡಿ ಬೆಳೆ ಹಾನಿಯಾಗಿರುವ ಕ್ಷೇತ್ರಕ್ಕೆ ಅನುಗುಣವಾಗಿ ಕೇಂದ್ರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ NDRF ಮತ್ತು SDRF ಯೋಜನೆಯಡಿ ಪರಿಹಾರದ ಹಣವನ್ನು ರೈತರ ಖಾತೆಗೆ ನೇರವಾಗಿ ಯಾವುದೇ ಮಧ್ಯವರ್ತಿಗೆ ಅವಕಾಶ ನೀಡದೆ ಪರಿಹಾರದ ಹಣವನ್ನು ಜಮಾ ಮಾಡಲಾಗುತ್ತದೆ.

* ಮಳೆಯಾಶ್ರಿತ ಬೆಳೆಗಳಿಗೆ- 17,000 ರೂ
* ನೀರಾವರಿ ಬೆಳೆಗೆ- 25,500 ರೂ
* ಬಹು ವಾರ್ಷಿಕ ಬೆಳೆಗಳಿಗೆ- 25,500 ರೂ

ಪ್ರಸ್ತುತ 2025-26ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ವಿವಿಧ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದಾಗಿ ಹಾನಿಗೆ ಒಳಗಾದ ಬೆಳೆಗೆ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಮತ್ತು ಬೆಳೆ ವಿಮೆ ಯೋಜನೆಯ ಹಣವನ್ನು ರೈತರ ಖಾತೆಗೆ ಈಗಾಗಲೇ ವರ್ಗಾವಣೆ ಮಾಡಲಾಗುತ್ತಿದೆ.

ಹಂತ-1: ಕೃಷಿಕರು “Crop Loss Status Check” ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಿ.

ಹಂತ-2: ಈ ಪೇಜ್ ನಲ್ಲಿ ವರ್ಷ, ಹಂಗಾಮು, ವಿಪತ್ತಿನ ವಿಧ, ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮವನ್ನು ಆಯ್ಕೆ ಮಾಡಿಕೊಂಡು “ವರದಿ ಪಡೆಯಿರಿ”  ಮೇಲೆ ಕ್ಲಿಕ್ ಮಾಡಿ.

ನ್ನೂ ಓದಿ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಯೋಜನೆ ಜಾರಿ

ಹಂತ-3: ಈ ಪುಟದಲ್ಲಿ ಕೆಳಗೆ ಗೋಚರಿಸುವ “Farmers” ಕಾಲಂ ನಲ್ಲಿ “Check Status” ಬಟನ್ ಮೇಲೆ ಕ್ಲಿಕ್ ಮಾಡಿ ಮೊಬೈಲ್‌ ನಂಬರ್ ಆಯ್ಕೆಯ ಮೇಲೆ ಒತ್ತಿ ನೀವು ಅರ್ಜಿ ಸಲ್ಲಿಸುವಾಗಿ ನೀಡಿರುವ ಮೊಬೈಲ್ ನಂಬರ್ ಅನ್ನು ನಮೂದಿಸಿ.

ಹಂತ-4: ಈ ಪುಟದ ಕೊನೆಯಲ್ಲಿ ಕಾಣುವ “Select” ಬಟನ್ ಮೇಲೆ ಕ್ಲಿಕ್ ಮಾಡಿದರೆ “UTR Details” ಕಾಲಂ ನಲ್ಲಿ  ಪರಿಹಾರದ ಹಣ ಜಮಾ ಆಗಿರುವ ವಿವರ ನೋಡಬಹುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು (Crop Insurance Scheme:)

    1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
    2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
    3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
    4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
    5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
Crop Insurance Scheme:‌ ಬೆಳೆ ವಿಮೆ ಯೋಜನೆಯಡಿಯಲ್ಲಿ ಪರಿಹಾರ
Crop Insurance Scheme:‌ ಬೆಳೆ ವಿಮೆ ಯೋಜನೆಯಡಿಯಲ್ಲಿ ಪರಿಹಾರ