(crop insurance) ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳಬೇಕು. ಯಾವ ಬೆಳೆಗಳಿಗೆ ಹಾಗೂ ವಿಮೆ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ನವ ಮಂಗಳೂರು ಬಂದರು ಟ್ರಸ್ಟ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
ಈ ಬೆಳೆಗಳಿಗೆ ವಿಮೆ:
ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಭತ್ತ, ಮುಸುಕಿನ ಜೋಳ ಹಾಗೂ ಹೋಬಳಿ ಮಟ್ಟದ ಬೆಳೆಗಳಾದ ಜೋಳ, ರಾಗಿ, ಸಜ್ಜೆ, ನವಣೆ, ತೊಗರಿ, ಹುರುಳಿ, ಸೂರ್ಯಕಾಂತಿ ಎಳ್ಳು, ಹತ್ತಿ, ನೆಲಗಡಲೆ, ಈರುಳ್ಳಿ, ಭತ್ತ, ಕೆಂಪು ಮೆಣಸಿನಕಾಯಿ ಬೆಳೆಗಳಿಗೆ ವಿಮೆಯನ್ನು ಮಾಡಿಸಿಕೊಳ್ಳಬೇಕು.
ಇದನ್ನೂ ಓದಿ: ರೈತರೇ ಗಮನಿಸಿ; ಈ ಕೆಲಸ ಮಾಡದಿದ್ದರೆ ಜಮೆ ಆಗಲ್ಲ ಬರ ಪರಿಹಾರ ಹಣ!
ಕೊನೆಯ ದಿನಾಂಕ ಯಾವಾಗ:
* ಮುಸುಕಿನ ಜೋಳ, ಜೋಳ, ಸೂರ್ಯಕಾಂತಿ, ತೊಗರಿ, ಹತ್ತಿ, ಕೆಂಪು ಮೆಣಸಿನಕಾಯಿ, ಈರುಳ್ಳಿ ಮತ್ತು ಎಳ್ಳು ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ಜುಲೈ 31 ಕೊನೆಯ ದಿನವಾಗಿದೆ.
* ಭತ್ತ, ತೊಗರಿ, ರಾಗಿ, ನವಣೆ, ಹುರುಳಿ, ನೆಲಗಡಲೆ ಮತ್ತು ಸಜ್ಜೆ ಬೆಳೆಗಳಿಗೆ ವಿಮೆ ಮಾಡಿಸಲು ಆಗಸ್ಟ್ 16 ಕೊನೆಯ ದಿನವಾಗಿದೆ.
* ಎಳ್ಳು ಬೆಳೆಗೆ ವಿಮೆ ಮಾಡಲು ಜುಲೈ 15 ಕೊನೆಯ ದಿನವಾಗಿದೆ.
ಇದನ್ನೂ ಓದಿ: ಸಾಲಗಾರರಿಗೆ ಗುಡ್ ನ್ಯೂಸ್; ಹೆಚ್ಚಿನ ಬಡ್ಡಿ ವಸೂಲಿ ಮಾಡಿ ಕಿರುಕುಳ ನೀಡುವವರ ವಿರುದ್ಧ ಕಠಿಣ ಕ್ರಮ
ಈ ಯೋಜನೆಯ ಲಾಭ ಪಡೆಯಲು ಯಾವುದೇ ಸ್ಥಳೀಯ ಬ್ಯಾಂಕ್, ಸಾರ್ವಜನಿಕ ಸೇವಾ ಕೇಂದ್ರ ಮತ್ತು ಗ್ರಾಮ ಒನ್ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು.
ಇದನ್ನೂ ಓದಿ: ಪಿಎಂ ಕಿಸಾನ್ ಸಮ್ಮಾನ್ ಯೋಜನೆ; 17 ನೇ ಕಂತಿನ ಹಣ ಜಮಾ ಯಾವಾಗ?; ರೈತರಿಗೆ ಇಲ್ಲಿದೆ ಮಾಹಿತಿ
ಬೆಳೆ ಸಾಲ ಪಡೆದ ರೈತರು ಇಚ್ಛೆಪಡದೇ ಇದ್ದಲ್ಲಿ ತಮ್ಮ ವ್ಯಾಪ್ತಿಯ ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳ ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುತ್ತದೆ. ಇನ್ನು ಹೆಚ್ಚಿನ ಮಾಹಿತಿಗಾಗಿ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್






