(Crop loan waiver) 2017 ಹಾಗೂ 2018ರಲ್ಲಿ ರಾಜ್ಯ ಸರ್ಕಾರ ಘೋಷಿಸಿದ್ದ ಕೃಷಿ ಸಾಲ ಮನ್ನಾದ ಪ್ರಯೋಜನ 31 ಸಾವಿರ ರೈತರಿಗೆ ಇನ್ನೂ ಸಿಕ್ಕಿಲ್ಲ ಎಂದು ಸಹಕಾರ ಸಚಿವ ರಾಜಣ್ಣ ಹೇಳಿದರು.
ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
ಹೌದು, ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ನ ಎಸ್. ರವಿ, ಬಿಜೆಪಿಯ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡಲಾಗಿದ್ದ 50,000 ಸಾಲ ಮನ್ನಾ ಪ್ರಯೋಜನವನ್ನು 21.57 ಲಕ್ಷ ರೈತರು, 2018ರಲ್ಲಿ ಘೋಷಿಸಿದ್ದ 1 ಲಕ್ಷ ಸಾಲ ಮನ್ನಾ ಪ್ರಯೋಜನವನ್ನು 17.37 ಲಕ್ಷ ರೈತರು ಪಡೆದುಕೊಂಡಿದ್ದರು ಎಂದರು.
ಇದನ್ನೂ ಓದಿ: ಈ ತಾಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ
ಆದರೆ, ತಾಂತ್ರಿಕ ಕಾರಣಗಳಿಂದ 31 ಸಾವಿರ ರೈತರಿಗೆ ಸೌಲಭ್ಯ ಸಿಕ್ಕಿಲ್ಲ. ಅವರಿಗೆ ನೀಡಬೇಕಿರುವ ಮೊತ್ತ 167.51 ಕೋಟಿ, ಅರ್ಹತೆ ಗುರುತಿಸಲು ಬಾಕಿ ಇರುವ ರೈತರ ಬಾಬು 64.49 ಕೋಟಿ ಸೇರಿ ಒಟ್ಟು 232 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಎಲ್ಲರಿಗೂ ಪ್ರಯೋಜನ ದೊರಕಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
ಶೂನ್ಯ ಬಡ್ಡಿದರದಲ್ಲಿ 25 ಸಾವಿರ ಕೋಟಿ ಸಾಲ:
ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಪ್ರಸಕ್ತ ಸಾಲಿನಲ್ಲಿ 35.10 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 25 ಸಾವಿರ ಕೋಟಿ ಅಲ್ಪಾವಧಿ ಕೃಷಿ ಸಾಲ ವಿತರಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
ಕಾಂಗ್ರೆಸ್ ನ ದಿನೇಶ್ ಗೂಳಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2023-24ನೇ ಸಾಲಿನಲ್ಲಿ 29.26 ಲಕ್ಷ ರೈತರಿಗೆ 22,982 ಕೋಟಿ ಬೆಳೆ ಸಾಲ ವಿತರಿಸಲಾಗಿತ್ತು. 2024-25ನೇ ಸಾಲಿನಲ್ಲಿ ಬೆಳೆಸಾಲದ ಜೊತೆಗೆ ಪಶುಸಂಗೋಪನೆಗೆ ದುಡಿಯುವ ಬಂಡವಾಳ ಸಾಲ ಹಾಗೂ 90 ಸಾವಿರ ರೈತರಿಗೆ 2 ಸಾವಿರ ಕೋಟಿ ಮಧ್ಯಮ, ದೀರ್ಘಾವಧಿ ಸಾಲ ವಿತರಿಸಲಾಗುತ್ತಿದೆ ಎಂದರು.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
- ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
- ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
- ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ






