Crop Relief: 12 ಸಾವಿರ ರೈತರಿಗೆ ಇಲ್ಲ ಬರ ಪರಿಹಾರದ ಹಣ

(Crop Relief) ಬರಪರಿಹಾರದ ಹಣ ಈಗಾಗಲೇ ಹಲವು ರೈತರ ಖಾತೆಗೆ ಜಮಾ ಮಾಡಿದ್ದು, ಇನ್ನುಳಿದ ರೈತರ ಖಾತೆಗೆ ಜಮಾ ಮಾಡಲಾಗುತ್ತದೆ. ಆದರೆ, ಈ ಜಿಲ್ಲೆಯ 12 ಸಾವಿರ ರೈತರಿಗೆ ತಾಂತ್ರಿಕ ಕಾರಣಗಳಿಂದ ಬರಪರಿಹಾರದ ಹಣದಿಂದ ವಂಚಿತರಾಗಿದ್ದಾರೆ. ಯಾವ ಜಿಲ್ಲೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ರೈತರೇ ಗಮನಿಸಿ; ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ಬೆಳೆಪರಿಹಾರ ಹಣ; ಹಣ ಜಮಾ ಆಗಿದ್ಯಾ ಎಂದು ಹೀಗೆ ಚೆಕ್ ಮಾಡಿ


ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಬರಪರಿಹಾರ ಅನುದಾನದಲ್ಲಿ SDRF, NDRF ನಿಯಮಾನುಸಾರ ಜಮಾ ಮಾಡಲಾಗುತ್ತಿದೆ. ಮಳೆಯಾಶ್ರಿತ ಪ್ರತಿ ಹೆಕ್ಟೇರ್ ಗೆ 8,500, ನೀರಾವರಿಯ ಪ್ರತಿ ಹೆಕ್ಟೇರ್ ಗೆ 17 ಸಾವಿರದಂತೆ ಒಬ್ಬ ರೈತರಿಗೆ ಗರಿಷ್ಠ ಎರಡು ಹೆಕ್ಟೇರ್ ವರೆಗೂ ನೀಡಲಾಗುತ್ತದೆ. ಪರಿಹಾರ ಜಮಾ ಆಗದ ರೈತರು ಆಯಾ ತಾಲೂಕಿನಲ್ಲಿ ಆರಂಭಿಸಿರುವ ಸಹಾಯವಾಣಿ ಕೇಂದ್ರಗಳನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ. ಆದರೆ, ಬಾಗಲಕೋಟೆ ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ತೀವ್ರ ಬರ ಪೀಡಿತ ತಾಲ್ಲೂಕುಗಳೆಂದು ಘೋಷಿಸಿದ್ದು. ಈಗಾಗಲೇ ಸರ್ಕಾರದಿಂದ 1 ರಿಂದ 9 ನೇ ಹಂತದವರೆಗೆ ಜಿಲ್ಲೆಯ 1,69,175 ರೈತರಿಗೆ ತಲಾ 2 ಸಾವಿರದಂತೆ ಫೆಬ್ರುವರಿ ತಿಂಗಳಿನಲ್ಲಿಯೇ 33.53 ಕೋಟಿ ಪರಿಹಾರ ವಿತರಿಸಲಾಗಿದೆ.


ಇದನ್ನೂ ಓದಿ: ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ; ಇಲ್ಲ ಅಂದ್ರೆ ಸಿಗಲ್ಲ ಸರ್ಕಾರದ ಯೋಜನೆ; ಲಿಂಕ್ ಮಾಡುವುದು ಹೇಗೆ? ಇಲ್ಲಿದೆ ಡಿಟೈಲ್ಸ್


12 ಸಾವಿರ ರೈತರ ಖಾತೆಗೆ ಇಲ್ಲ ಬರಪರಿಹಾರದ ಹಣ:
ರೈತರ ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದಂತೆ ವಿವಿಧ ತಾಂತ್ರಿಕ ಕಾರಣಗಳಿಂದ ಜಿಲ್ಲೆಯ 12,406 ರೈತರಿಗೆ ಪರಿಹಾರ ಜಮೆ ಆಗಿಲ್ಲ. ಈ ಕುರಿತು ಈಗಾಗಲೇ ಎಲ್ಲ ತಹಶೀಲ್ದಾರರಿಗೆ ರೈತರ ಪಟ್ಟಿಯನ್ನು ಗ್ರಾಮವಾರು ವಿಂಗಡಿಸಿ ಕಳುಹಿಸಲಾಗಿದ್ದು, ಅಂತಹ ಖಾತೆಗಳನ್ನು ಸರಿಪಡಿಸಲು ಸೂಕ್ತ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ರೈತರ ಖಾತೆಗೂ ಬರಪರಿಹಾರದ ಹಣ ಜಮಾ ಆಗಲಿದೆ.


ಇದನ್ನೂ ಓದಿ: ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆ; ಈ ಜಿಲ್ಲೆಯ ರೈತರಿಗೆ ಆಕ್ಷೇಪಣೆ ಸಲ್ಲಿಸಲು ದಿನಾಂಕ ನಿಗದಿ; ಆಕ್ಷೇಪಣೆ ಸಲ್ಲಿಸುವುದು ಹೇಗೆ? ಇಲ್ಲಿದೆ ಡಿಟೈಲ್ಸ್


ಜಿಲ್ಲೆಯಲ್ಲಿ ಬರದಿಂದ ಕೃಷಿ ಹಾಗೂ ತೋಟಗಾರಿಕೆ ಸೇರಿ 1.93,805 ಹೆಕ್ಟೇರ್ ಕ್ಷೇತ್ರದ ಬೆಳೆ ಹಾನಿಯಿಂದ 1,997 ಕೋಟಿ ನಷ್ಟ ಉಂಟಾಗಿತ್ತು. SDRF, NDRF ನಿಯಮಾವಳಿಗಳನ್ವಯ 264 ಕೋಟಿ ಇನ್ ಪುಟ್ ಸಬ್ಸಿಡಿ, ಬೆಳೆ ಪರಿಹಾರಕ್ಕಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿತ್ತು. ಅದರನ್ವಯ ಈಗ ಪರಿಹಾರ ಬಿಡುಗಡೆಯಾಗುತ್ತಿದೆ.


ಇದನ್ನೂ ಓದಿ: ರಾಜ್ಯದ ರೈತರಿಗೆ ಬಿಗ್ ಶಾಕ್!; ಖಾತೆಗೆ ಬಂದ ಬರಪರಿಹಾರ ಹಣ ಸಾಲಕ್ಕೆ ಜಮಾ!


ದಾಖಲೆ ಸರಿಪಡಿಸಿಕೊಳ್ಳುವಂತೆ ಸೂಚನೆ:
ಖಾತೆ ಬಂದ್ ಆಗಿರುವುದು, ತಪ್ಪಾದ ಖಾತೆ ಸಂಖ್ಯೆ, ಆಧಾರ್ ಜೋಡಣೆ ಸೇರಿದಂತೆ ವಿವಿಧ ಕಾರಣಗಳಿಗಾಗಿ ಬರ ಪರಿಹಾರ ಜಮಾ ಆಗದ ರೈತರು ದಾಖಲೆಗಳನ್ನು ಸರಿಪಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

Crop Relief: 12 ಸಾವಿರ ರೈತರಿಗೆ ಇಲ್ಲ ಬರ ಪರಿಹಾರದ ಹಣ
Crop Relief: 12 ಸಾವಿರ ರೈತರಿಗೆ ಇಲ್ಲ ಬರ ಪರಿಹಾರದ ಹಣ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್