CSU Recruitment 25: ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಜಾಬ್

(CSU Recruitment 25:) ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯ (CSU) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ನ್ನೂ ಓದಿ: ನಿವೃತ್ತಿ ಹೊಂದುವ ನೌಕರರಿಗೆ ಪಿಂಚಣಿ ಸೌಲಭ್ಯ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ


ಹುದ್ದೆಗಳ ವಿವರ:
* ಸಹಾಯಕ ಪ್ರಾಧ್ಯಾಪಕ
* ಗ್ರಂಥಪಾಲಕ ಹುದ್ದೆ

ಆಸಕ್ತ ಅಭ್ಯರ್ಥಿಗಳು CSU ನ ಅಧಿಕೃತ ವೆಬ್‌ಸೈಟ್ sanskrit.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 20. ವಿಶ್ವವಿದ್ಯಾನಿಲಯವು ಒಟ್ಟು 59 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.


ನ್ನೂ ಓದಿ: 10 HP ವರೆಗಿನ ಕೃಷಿ ಪಂಪ್ ಸೆಟ್ ಗಳಿಗೆ ಸಿಗಲಿದೆ ಸಬ್ಸಿಡಿ


ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳು ಯಾವುವು?
* ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಶೆ.50 ಅಂಕಗಳೊಂದಿಗೆ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
* UGC ಅಥವಾ CSIR ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET) ಅಥವಾ SLET/SET ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ PhD ಪದವಿ ಪಡೆದಿರಬೇಕು.
* ಕಾಲೇಜು ಗ್ರಂಥಪಾಲಕ ಹುದ್ದೆಗೆ, ಅಭ್ಯರ್ಥಿಗಳು ಗ್ರಂಥಾಲಯ ವಿಜ್ಞಾನದಲ್ಲಿ ಶೇ.55 ಅಂಕಗಳೊಂದಿಗೆ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ?:
ಸಂಸ್ಕೃತ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ sanskrit.nic.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ: ವಾಹನ ಸವಾರರ ಗಮನಕ್ಕೆ: ನಿಮ್ಮ ಬಾಕಿ ದಂಡವನ್ನು ಶೇ.50 ರ ರಿಯಾಯಿತಿಯೊಂದಿಗೆ ಪಾವತಿಸಲು ಡಿ.12 ಕೊನೆಯ ದಿನ


ಆಯ್ಕೆ ಹೇಗೆ?:
ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಅಭ್ಯರ್ಥಿಗಳು ಸಂದರ್ಶನಕ್ಕೆ ಎಲ್ಲಾ ದಾಖಲೆಗಳನ್ನು ತಮ್ಮೊಂದಿಗೆ ತರಬೇಕು. ಇದರ ನಂತರ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ತಿಂಗಳಿಗೆ 57,700 ರಿಂದ 1,82,400 ರೂ. ರವರೆಗೆ ವೇತನವನ್ನು ಪಡೆಯುತ್ತಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.‌

CSU Recruitment 25: ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಜಾಬ್
CSU Recruitment 25: ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಜಾಬ್

ಇತ್ತೀಚಿನ ಜನಪ್ರಿಯ ಸುದ್ದಿಗಳು (CSU Recruitment 25:) 

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ