CT Ravi: ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಮಾತು ಕೇಳಿಬಂದಿತ್ತು. ಇದೀಗ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದೆ.
ಇದನ್ನೂ ಓದಿ; ಮಲೆನಾಡಲ್ಲಿ ಪತ್ರೋಡೆ ಘಮ; ಮಳೆಗಾಲದ ಸ್ಪೆಷಲ್ ಮರಗೆಸು ಎಲೆಯ ಪತ್ರೋಡೆ
ಆ ಪ್ರಕಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್ ನೀಡಲಾಗಿದೆ. ತೆಲಂಗಾಣದ ಬಂಡಿ ಸಂಜಯ್ ಸೇರಿದಂತೆ 8 ಜನರನ್ನು ಪ್ರಧಾನ ಕಾರ್ಯದರ್ಶಿಗಳನ್ನಾಗಿ ಮಾಡಲಾಗಿದೆ. 13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಇದನ್ನೂ ಓದಿ; ಮಲೆನಾಡಿನ ಜನತೆಗೆ ಗುಡ್ ನ್ಯೂಸ್; ವಿಮಾನ ಹಾರಾಟದ ದಿನಾಂಕ ಪ್ರಕಟಿಸಿದ ಇಂಡಿಗೋ ಸಂಸ್ಥೆ


ಇದನ್ನೂ ಓದಿ; ನಿಮಗೆ ಮೈಗ್ರೇನ್ ತಲೆನೋವಿನ ಸಮಸ್ಯೆ ಇದೆಯಾ?; ಪದೇ ಪದೇ ಕಾಡೋ ಮೈಗ್ರೇನ್ ಸಮಸ್ಯೆ ಇಲ್ಲಿದೆ ಸರಳ ಪರಿಹಾರ
CT Ravi: ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಬಿ.ಎಲ್. ಸಂತೋಷ್ ಅವರನ್ನು ಮುಂದುವರೆಸಲಾಗಿದೆ. ಸಂಘಟನಾ ಕಾರ್ಯದರ್ಶಿಗಳು, ಸಹ ಸಂಘಟನಾ ಕಾರ್ಯದರ್ಶಿಗಳು ಕೋಶಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.
ಬಿಹಾರದ ಲೋಕಸಭಾ ಸಂಸದ, ಮಾಜಿ ಕೇಂದ್ರ ಸಚಿವ ರಾಧಾ ಮೋಹನ್ ಸಿಂಗ್ ಅವರನ್ನು ಪಕ್ಷದ ಉಪಾಧ್ಯಕ್ಷ ಸ್ಥಾನದಿಂದ ಕೈಬಿಡಲಾಗಿದೆ. ಹಿರಿಯ ಕಾಂಗ್ರೆಸ್ ನಾಯಕ ಎ.ಕೆ ಆಂಟನಿ ಅವರ ಪುತ್ರ ಅನಿಲ್ ಆಂಟೋನಿ ಅವರನ್ನು ರಾಷ್ಟ್ರೀಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಬೆಳೆವಿಮೆ ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿ; ಕೊನೆ ದಿನ ಯಾವಾಗ? ಯಾವ ಬೆಳೆಗಳಿಗೆ ವಿಮೆ ಹಣ ಬರುತ್ತದೆ?
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-28.07.2023
- ಸಿಂಪಲ್ ಆಗಿ ಬೇಳೆ ಕಟ್ಟಿನ ಸಾರು; ಹೇಗೆ ಮಾಡುವುದು? ಇಲ್ಲಿದೆ ನೋಡಿ


ಸಿ.ಟಿ ರವಿಗೆ ರಾಜ್ಯಾಧ್ಯಕ್ಷ ಹುದ್ದೆ ನೀಡುವ ಸಾಧ್ಯತೆ:
ಕೇಂದ್ರೀಯ ಪದಾಧಿಕಾರಿ ಹುದ್ದೆಯಿಂದ ಸಿ.ಟಿ ರವಿ ಅವರನ್ನು ಕೆಳಗಿಳಿಸಿದ ಹಿಂದೆ ರಾಜ್ಯಾಧ್ಯಕ್ಷ ಹುದ್ದೆ ಕೊಡುವ ಉದ್ದೇಶವಿದೆ ಎನ್ನಲಾಗಿದೆ. ಕಳೆದೆರಡು ತಿಂಗಳಿನಿಂದ ಚರ್ಚೆಯ ವಿಷಯವಾಗಿರುವ ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕ ಹುದ್ದೆ ಸಮಸ್ಯೆ ಸದ್ಯದಲ್ಲೇ ಬಗೆಹರಿಯುವ ಲಕ್ಷಣ ಗೋಚರಿಸುತ್ತಿದೆ.
ಇದನ್ನೂ ಓದಿ; ಮೂಡಿಗೆರೆಯಲ್ಲಿ ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಆಯೋಜನೆ





Leave a Reply