Friday, June 9, 2023
Homeಮಲೆನಾಡುಚಿಕ್ಕಮಗಳೂರುಚಿಕ್ಕಮಗಳೂರು; ಸೋಲಿನ ಬಗ್ಗೆ ಮೊದಲ ಪ್ರತಿಕ್ರಿಯೆ ಕೊಟ್ಟ ಸಿ.ಟಿ.ರವಿ

ಚಿಕ್ಕಮಗಳೂರು; ಸೋಲಿನ ಬಗ್ಗೆ ಮೊದಲ ಪ್ರತಿಕ್ರಿಯೆ ಕೊಟ್ಟ ಸಿ.ಟಿ.ರವಿ

ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ) 20 ವರ್ಷಗಳಿಂದ ಶಾಸಕರಾಗಿದ್ದು ಮೊದಲ ಬಾರಿಗೆ ಸೋಲಿನ ಕಹಿ ಕಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಜನಾದೇಶಕ್ಕೆ ತಲೆಬಾಗುತ್ತೇನೆ. ಇದು ಸಿದ್ಧಾಂತದ ಸೋಲಲ್ಲ. ವೈಯಕ್ತಿಕ ಸೋಲು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ; ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ

ಇದನ್ನೂ ಓದಿ; ತಾಲೂಕು ಕಚೇರಿ ಕಟ್ಟಡದ ಸೀಲಿಂಗ್ ನ ಸಿಮೆಂಟ್ ಬಿದ್ದು ಸಿಬ್ಬಂದಿಗೆ ತೀವ್ರ ಗಾಯ

ಆರಂಭದಿಂದಲೂ ತೀವ್ರ ಕುತೂಹಲ ಮೂಡಿಸಿದ್ದ ಫಲಿತಾಂಶ ಅಂತಿಮವಾಗಿ ಸಿ.ಟಿ.ರವಿ ಸೋಲು ಎಂದು ರಿಸಲ್ಟ್ ಹೊರಬರುತ್ತಿದ್ದಂತೆ ಶಾಸಕ ಸಿ.ಟಿ.ರವಿ ಸಾಮಾಜಿಕ ಜಾಲತಾಣದಲ್ಲಿ ಕಾರ್ಯಕರ್ತರಿಗೆ ಧೈರ್ಯ ತುಂಬಿದ್ದಾರೆ. ಬಿಜೆಪಿ ಭದ್ರಕೋಟೆಯಾಗಿದ್ದ ಚಿಕ್ಕಮಗಳೂರು 1999ರಲ್ಲೂ ಜಿಲ್ಲೆಯಲ್ಲಿ ಐದಕ್ಕೆ ಐದು ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿದ್ದವು. ಆ ಬಳಿಕ ಈಗ ಮತ್ತೆ ಐದಕ್ಕೆ ಐದು ಕ್ಷೇತ್ರಗಳು ಕೈ ಪಾಲಾಗಿವೆ.

ಸೋಲಿನ ಬಗ್ಗೆ ಪ್ರತಿಕ್ರಿಯೆ ಕೊಟ್ಟ ಸಿ.ಟಿ ರವಿ:
ಚಿಕ್ಕಮಗಳೂರಲ್ಲಿ, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಎಲ್ಲ ಪ್ರಯತ್ನವನ್ನು ಮಾಡುತ್ತೇವೆ, ನನ್ನನ್ನು ಸೋಲಿಸಲು ಕಾಂಗ್ರೆಸ್ ಗೆ ಜೆಡಿಎಸ್ ಬೆಂಬಲ ನೀಡಿತ್ತು. ನೇರವಾಗಿ ನನ್ನ ಸೋಲಿಸಲು ಜೆಡಿಎಸ್ ಟಾರ್ಗೆಟ್ ಮಾಡಿ ಕಾಂಗ್ರೆಸ್ ಗೆ ಬೆಂಬಲಿಸಿತ್ತು. ಹಲವು ನಾಯಕರ ಕೆಂಗಣ್ಣಿಗೆ ನಾನು ಗುರಿಯಾಗಿದೆ. ಪಕ್ಷ ನಮ್ಮ ಸಿದ್ಧಾಂತದ ಕಾರಣಕ್ಕೆ ನಾನು ಹಲವರಿಗೆ ಗುರಿಯಾಗಿದೆ ಎಂದು ಹೇಳಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಆದರೆ ಸೋತ ಕ್ಷಣದಿಂದ ಜನ ನಮ್ಮ ಮನೆಗೆ ಬಂದು ಬೇಸರ ವ್ಯಕ್ತಪಡಿಸುತ್ತಾ ಇದ್ದರೆ. ಆ ಕ್ಷಣಕ್ಕೆ ಚಿಕ್ಕಮಗಳೂರು ಜಿಲ್ಲೆಗೆ, ಜನತೆಗೆ, ನಮಗೆ ನಾವೇ ತೊಂದರೆ ಮಾಡಿಕೊಂಡಿದ್ದೇವೆ.

ನನ್ನ ತಪ್ಪುಗಳಿದ್ದರೆ ಸರಿಪಡಿಸಿಕೊಳ್ಳುವುದು ನನ್ನ ಜವಾಬ್ದಾರಿ. ಸಂಘಟನೆಯ ಲೋಪಗಳಿದ್ದರೇ, ಸಮಲೋಚನೆ ಮಾಡಿ ಸರಿಪಡಿಸುತ್ತೇವೆ ಎಂದು ಸಿ.ಟಿ ರವಿ ಹೇಳಿದರು.

ಬೇಸರ ವ್ಯಕ್ತ ಪಡಿಸಿದ ಬೆಂಬಲಿಗರಿಗೆ ಸಮಾಧನ ಪಡಿಸಿದ ಸಿ.ಟಿ ರವಿ:
ಫಲಿತಾಂಶ ಹೊರಬೀಳುತ್ತಿದ್ದಂತೆ ಸಿ.ಟಿ ರವಿ ನಿವಾಸಕ್ಕೆ ಹಲವು ಬೆಂಬಲಿಗರು ಬಂದು ಬೇಸರ ವ್ಯಕ್ತ ಪಡಿಸಿದ್ದಾರೆ. ಇದಕ್ಕೆ ಸಿ.ಟಿ ರವಿ ಮನೆ ಬಳಿ ಬಂದು ಬೇಸರ ವ್ಯಕ್ತ ಪಡಿಸಿದ್ದ ಬೆಂಬಲಿಗರಿಗೆ ಧೈರ್ಯ ತುಂಬಿದರು.

ಇದನ್ನೂ ಓದಿ; ಎರಡು ಬಸ್ ಮಧ್ಯೆ ಭೀಕರ ಅಪಘಾತ; ಇಬ್ಬರು ಸಾವು

ಭೀಕರ ಅಪಘಾತ, ಅತ್ತೆ-ಸೊಸೆ ಸಾವು

ಹಾಸನ: ದಾವಣೆಗೆರೆಯಿಂದ ಮನೆಯ ಗೃಹ ಪ್ರವೇಶ ಮುಗಿಸಿಕೊಂಡು ವಾಪಸ್ ಬರುವಾಗ ಟಿಪ್ಪರ್ ಲಾರಿಯೊಂದು ಓವರ್ ಟೇಕ್ ಮಾಡಲು ಹೋಗಿ ಚಲಿಸುತ್ತಿದ್ದ ಕಾರಿಗೆ ಟಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ಕು ಜನರಲ್ಲಿ ಅತ್ತೆ ಮತ್ತು ಸೊಸೆ ಇಬ್ಬರು ಸಾವನಪ್ಪಿದ ಘಟನೆ ಚನ್ನಗಿರಿ ಬಳಿ ನಡೆದಿದೆ.

ಇದನ್ನೂ ಓದಿ; ಎಸ್.ಎಸ್.ಎಲ್.ಸಿ ಫಲಿತಾಂಶ: ಚಿಕ್ಕಮಗಳೂರು ಜಿಲ್ಲೆಗೆ ಎಷ್ಟನೇ ಸ್ಥಾನ?

ಬಾಳುಪೇಟೆಯ ಕಾಫಿ ಪ್ಲಾಂಟರ್ ಮತ್ತು ಸಹ್ಯಾದ್ರಿ ಥೀಯೇಟರ್ ಮಾಲೀಕರಾಗಿದ್ದ ಬಿ.ಎಸ್. ಗುರುನಾಥ್ ಅವರ ಪತ್ನಿ ಮೈತ್ರಿದೇವಿ 70 ವರ್ಷ ಹಾಗೂ ಸೊಸೆ ಸೌಜನ್ಯ (48) ಎಂಬುವರೇ ರಸ್ತೆ ಅಪಘಾಶದಲ್ಲಿ ಸಾವನಪ್ಪಿದ ದುರ್ದೈವಿಗಳು.

ನಗರದ ಮಲ್ಲಿಗೆ ಹೊಟೇಲ್ ಬಳಿಯಿರುವ ಮನೆಯಲ್ಲಿ ವಾಸವಿರುವ ಬಿ.ಎಸ್. ಗುರುನಾಥ್ ಅವರ ಮಗಳ ಹೊಸ ಮನೆ ಗೃಹ ಪ್ರವೇಶಕ್ಕೆಂದು ಕಾರಿನಲ್ಲಿ ಹಾಸನದಿಂದ ದಾವಣಗೆರೆಗೆ ತೆರಳಿದ್ದರು ಎನ್ನಲಾಗಿದೆ.

ಕಾರ್ಯಕ್ರಮ ಮುಗಿಸಿಕೊಂಡು ಹಾಸನಕ್ಕೆ ವಾಪಸ್ ತೆರಳುವಾಗ ಚನ್ನಗಿರಿ ಬಳಿ ಟಿಪ್ಸರ್‌ಲಾರಿ ವಾಹನದ ಚಾಲಕ ಅತೀ ವೇಗದಲ್ಲಿ ಓವರ್ ಟೇಕ್ ಮಾಡುವ ಅವಸರದಲ್ಲಿ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿ ರಸ್ತೆಗೆ ಉರುಳಿದೆ.

ಇದನ್ನೂ ಓದಿ; ಕಾಫಿ ತೋಟದ ಗೇಟ್‌ ಮುರಿದು, ಬೆಳೆ ಹಾನಿ

ಈ ವೇಳೆ ಕಾರಿನಲ್ಲಿ ಮುಂಭಾಗ ಕುಳಿತ್ತಿದ್ದ ಬಿ.ಎಸ್. ಗುರುನಾಥ್ ಹಾಗೂ ಪುತ್ರ ರಾಜೇಶ್ ಇಬ್ಬರೂ ಸೇಫ್ಟಿ ಬೆಲ್ಟ್ ಹಾಕಿಕೊಂಡಿದ್ದರು. ಇನ್ನು ಕಾರು ಚಾಲನೆ ಮಾಡುತ್ತಿದ್ದ ರಾಜೇಶ್ ಅವರಿಗೂ ಕೂಡ ಗಾಯಗಳಾಗಿವೆ. ಗುರುನಾಥ್ ಅವರಿಗೆ ಗಾಯಗಳಾಗಿದ್ದು, ಹಿಂಬದಿ ಕುಳಿತಿದ್ದ ಗುರುನಾಥ್ ಪತ್ನಿ ಮೈತ್ರಿದೇವಿ ಮತ್ತು ಸೊಸೆ ಸೌಜನ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

Most Popular

Recent Comments