(Cylinder Booking:) ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಎಲ್ಪಿಜಿ (LPG) ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಆತಂಕ ಸಾರ್ವಜನಿಕರಲ್ಲಿ ಮೂಡಿದೆ. ಆದರೆ ಈ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ದೇಶದಲ್ಲಿ ಅಡುಗೆ ಅನಿಲದ ದಾಸ್ತಾನು ಸಮರ್ಪಕವಾಗಿದ್ದು ಯಾವುದೇ ಕೊರತೆ ಉಂಟಾಗುವುದಿಲ್ಲ ಎಂದು ತಿಳಿಸಿದೆ.
ಇದನ್ನೂ ಓದಿ: ವಾಹನ ಮಾಲೀಕರ ಗಮನಕ್ಕೆ; ಇನ್ಮುಂದೆ ಗಾಡಿ FC ಗೆ ಸಾರಿಗೆ ಇಲಾಖೆಯಿಂದ ಹೊಸ ರೂಲ್ಸ್
ಬುಕಿಂಗ್ ಅವಧಿಯಲ್ಲಿ ಬದಲಾವಣೆ
ಸರ್ಕಾರವು ಇತ್ತೀಚೆಗೆ ಎಲ್ಪಿಜಿ ಸಿಲಿಂಡರ್ ಬುಕಿಂಗ್ ಅವಧಿಯಲ್ಲಿ ಬದಲಾವಣೆ ಮಾಡಿದೆ. ಮೊದಲಿಗೆ ಒಂದು ಸಿಲಿಂಡರ್ ಪಡೆದ ನಂತರ 21 ದಿನಗಳ ಬಳಿಕ ಮುಂದಿನ ಬುಕಿಂಗ್ ಮಾಡಲು ಅವಕಾಶವಿತ್ತು. ಈಗ ಈ ಅವಧಿಯನ್ನು 25 ದಿನಗಳಿಗೆ ಹೆಚ್ಚಿಸಲಾಗಿದೆ. ಈ ಹೊಸ ನಿಯಮದಿಂದ ಕೆಲವು ಕಡೆ ವಿತರಣೆಯಲ್ಲಿ ಗೊಂದಲ ಉಂಟಾಗಿರುವ ಸಾಧ್ಯತೆ ಇದೆ. ಆದರೆ, ಡೀಲರ್ಗಳು ಉದ್ದೇಶಪೂರ್ವಕವಾಗಿ ವಿಳಂಬ ಮಾಡಿದರೆ ಅಥವಾ ಹೆಚ್ಚುವರಿ ಹಣ ಕೇಳಿದರೆ ಗ್ರಾಹಕರು ದೂರು ನೀಡಬಹುದು.
ದೂರು ಸಲ್ಲಿಸಲು ಗ್ಯಾಸ್ ಕಂಪನಿಗಳ ಸಂಖ್ಯೆಗಳು
ಇಂಡೇನ್ ಗ್ಯಾಸ್ (Indane Gas)
ಟೋಲ್ ಫ್ರೀ ಸಂಖ್ಯೆ: 1800-2333-555
ಬುಕಿಂಗ್ ಮತ್ತು ದೂರುಗಳಿಗಾಗಿ: 7718955555
ಇದನ್ನೂ ಓದಿ: ನಿಮ್ಮ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದೀರಾ?; ಅಂತಹವರು ಈ ಸ್ಟೋರಿ ಓದಲೇಬೇಕು?
ಭಾರತ್ ಗ್ಯಾಸ್ (Bharat Gas)
ಟೋಲ್ ಫ್ರೀ ಸಂಖ್ಯೆ: 1800-22-4344
ಬುಕಿಂಗ್ ಸಂಖ್ಯೆ: 7715012345
ಹೆಚ್ಪಿ ಗ್ಯಾಸ್ (HP Gas)
ಟೋಲ್ ಫ್ರೀ ಸಂಖ್ಯೆ: 1800-2333-555
HP: 9493602222
ದೇಶದಲ್ಲಿ ಎಲ್ಪಿಜಿ ಪೂರೈಕೆ ಸಮರ್ಪಕವಾಗಿದೆ ಎಂದು ತಜ್ಞರು ಹೇಳಿದ್ದಾರೆ. ವಿತರಣೆಯಲ್ಲಿ ತೊಂದರೆ ಎದುರಾದರೆ ಗಾಬರಿ ಪಡುವ ಅಗತ್ಯವಿಲ್ಲ. ಗ್ರಾಹಕರು ತಮ್ಮ ಹಕ್ಕುಗಳನ್ನು ಬಳಸಿಕೊಂಡು ಕಂಪನಿಯ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು.
ಗಮನಿಸಿ: ಯಾವುದೇ ಕಾರಣಕ್ಕೂ ಸಿಲಿಂಡರ್ ವಿತರಣೆಗೆ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣವನ್ನು ನೀಡಬಾರದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Cylinder Booking:)
-
- ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
- ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
- ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
- ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
- ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್
- ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
- ಯುವಕರಿಗೆ ʼಗ್ರಾಮ ಒನ್ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
- ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
- 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
- ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿ ಆಹ್ವಾನ





