Cylinder Booking:LPG ಗ್ರಾಹಕರಿಗೆ ಕೇಂದ್ರದಿಂದ ಹೊಸ ಮಾರ್ಗಸೂಚಿ

(Cylinder Booking:) ದೇಶದಲ್ಲಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ಕೃತಕ ಅಭಾವ ಮತ್ತು ಕಾಳಸಂತೆಯನ್ನು ತಡೆಯಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಗ್ಯಾಸ್ ಪೂರೈಕೆ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತಂದಿದ್ದು, ಸಿಲಿಂಡರ್ ದಾಸ್ತಾನು (Hoarding) ಮಾಡುವುದನ್ನು ನಿಯಂತ್ರಿಸಲು ಎರಡು ಬುಕ್ಕಿಂಗ್‌ಗಳ ನಡುವಿನ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ.


ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ರಿಲೀಫ್; ಏನದು, ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇತ್ತೀಚೆಗೆ ಯುದ್ಧದ ಭೀತಿ ಮತ್ತು ಸರಬರಾಜಿನ ಬಗ್ಗೆ ಉಂಟಾದ ಆತಂಕದ ಹಿನ್ನೆಲೆಯಲ್ಲಿ ಕೆಲವರು ಮುಂಚಿತವಾಗಿ ಗ್ಯಾಸ್ ಸಿಲಿಂಡರ್ ಬುಕ್ ಮಾಡುತ್ತಿರುವುದು ಕಂಡುಬಂದಿದೆ. ಮೊದಲು ಸುಮಾರು 55 ದಿನಗಳಿಗೊಮ್ಮೆ ಬುಕ್ಕಿಂಗ್ ಮಾಡುತ್ತಿದ್ದ ಗ್ರಾಹಕರು ಈಗ ಕೇವಲ 15 ದಿನಗಳಲ್ಲೇ ಬುಕ್ಕಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಇದರಿಂದ ಕೃತಕ ಅಭಾವ ಸೃಷ್ಟಿಯಾಗುವ ಸಾಧ್ಯತೆ ಇರುವುದರಿಂದ ಸರ್ಕಾರ ಹೊಸ ನಿಯಮ ಜಾರಿಗೆ ತಂದಿದೆ.


ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಇನ್ಮುಂದೆ ಮೊಬೈಲ್‌ ನಲ್ಲೇ ಸಿಗಲಿದೆ ಹಳೆಯ ಪಹಣಿ


ಇದರಿಂದಾಗಿ ವಾಣಿಜ್ಯ ಬಳಕೆಯ (Commercial) ಸಿಲಿಂಡರ್‌ಗಳಿಗಿಂತ ಮನೆ ಬಳಕೆಯ (Domestic) ಗ್ರಾಹಕರಿಗೆ ಮೊದಲ ಆದ್ಯತೆ ನೀಡುವಂತೆ ಸರ್ಕಾರ ಸೂಚಿಸಿದೆ. “ಮನೆ ಬಳಕೆಯ ಗ್ರಾಹಕರ ಹಿತವೇ ನಮಗೆ ಮುಖ್ಯ” ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಇದೇ ವೇಳೆ ದೇಶೀಯ ರಿಫೈನರಿಗಳಿಗೆ ಎಲ್‌ಪಿಜಿ ಉತ್ಪಾದನೆಯನ್ನು ಗರಿಷ್ಠ ಮಟ್ಟಕ್ಕೆ ಹೆಚ್ಚಿಸುವಂತೆ ಸರ್ಕಾರ ಸೂಚಿಸಿದೆ. ಗ್ಯಾಸ್ ಪೂರೈಕೆಯಲ್ಲಿ ಸ್ವಾವಲಂಬನೆ ಸಾಧಿಸಲು ಹಾಗೂ ಕೊರತೆಯನ್ನು ತಪ್ಪಿಸಲು ಹೊಸ ದೇಶಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಅಲ್ಜೀರಿಯಾ, ಆಸ್ಟ್ರೇಲಿಯಾ, ಕೆನಡಾ ಮತ್ತು ನಾರ್ವೆ ದೇಶಗಳು ಭಾರತಕ್ಕೆ ಎಲ್‌ಪಿಜಿ ಪೂರೈಕೆ ಮಾಡಲು ಮುಂದಾಗಿವೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಎಲ್​ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ; ಗ್ರಾಹಕರಿಗೆ ಬಿಗ್ ಶಾಕ್


Cylinder Booking:LPG ಗ್ರಾಹಕರಿಗೆ ಕೇಂದ್ರದಿಂದ ಹೊಸ ಮಾರ್ಗಸೂಚಿ
Cylinder Booking:LPG ಗ್ರಾಹಕರಿಗೆ ಕೇಂದ್ರದಿಂದ ಹೊಸ ಮಾರ್ಗಸೂಚಿ

ಇತ್ತೀಚಿನ ಜನಪ್ರಿಯ ಸುದ್ದಿಗಳು (Cylinder Booking:)

    1. ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
    2. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
    3. ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
    4. ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
    5. ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್‌
    6. ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
    7. ಯುವಕರಿಗೆ ʼಗ್ರಾಮ ಒನ್‌ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
    8. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    9. 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
    10. ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್‌ ಹುದ್ದೆಗೆ ಅರ್ಜಿ ಆಹ್ವಾನ