D Boss Darshan ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರು ಮಾಧ್ಯಮದವರಿಗೆ ಕ್ಷಮೆಯಾಚಿಸಿದ್ದಾರೆ. ಹೌದು, ಕನ್ನಡದ ಮಾಧ್ಯಮಗಳು ಹಾಗೂ ನಟ ದರ್ಶನ ತೂಗುದೀಪ (Actor Darshan Thoogudeepa) ಅವರ ನಡುವೆ ಮನಸ್ತಾಪ ಉಂಟಾಗಿ, ದರ್ಶನ ಅವರ ಯಾವುದೇ ಸುದ್ದಿಗಳನ್ನು ಬಿತ್ತರಿಸದೇ ಬಹಿಷ್ಕಾರ ಹಾಕಿದ್ದವು. ಇದೀಗ ದರ್ಶನ್ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಕ್ಚಮೆಯಾಚನೆಯ ಬಗ್ಗೆ ಹಾಕಿಕೊಂಡಿದ್ದಾರೆ.
ಇದನ್ನೂ ಓದಿ; ಚಂದ್ರಯಾನ-3 ಯಶಸ್ವಿ; ಚಿಕ್ಕಮಗಳೂರಿನಲ್ಲಿ ಬಿಜೆಪಿ ಸಂಭ್ರಮಾಚರಣೆ
D Boss Darshan ಏನೆಂದು ಕ್ಷಮೆಯಾಚಿಸಿದ್ದಾರೆ:
ಸಮಸ್ತ ಕರ್ನಾಟಕ ಜನತೆಗೆ ನನ್ನ ಸೆಲೆಬ್ರಿಟಿಗಳಿಗೆ ಹಾಗೂ ಹಿರಿಯ ಪತ್ರಕರ್ತರಿಗೆ, ಮಾಧ್ಯಮ ಮಿತ್ರರಿಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು. ಕಳೆದ ಸುಮಾರು ಎರಡು ವರ್ಷಗಳಿಂದ ನನ್ನ ಹಾಗೂ ಕನ್ನಡ ಮಾಧ್ಯಮ ಮಿತ್ರರ ನಡುವೆ ಒಂದು ಕಂದಕ ಉಂಟಾಗಿತ್ತು. ಈ ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ, ಮಿತ್ರ ರಾಕ್ ಲೈನ್ ವೆಂಕಟಕೇಶ್ ನೇತೃತ್ವದಲ್ಲಿ ನನ್ನ ಹಾಗೂ ಕನ್ನಡದ ಪ್ರಮುಖ ಮಾಧ್ಯಮಗಳ ಸಂಪಾದಕರ ನಡುವೆ ಮಾತುಕತೆ ನಡೆದು ಇಡೀ ಪ್ರಕರಣ ಸುಖಾಂತ್ಯಗೊಂಡಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಚಿಕ್ಕಮಗಳೂರು ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಖಾಸಗಿಯವರಿಗೆ ಪರಭಾರೆ ಮಾಡಿದ ತಹಸಿಲ್ದಾರ್; ಕ್ರಿಮಿನಲ್ ಮೊಕದ್ದಮೆ ದಾಖಲು
- ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ-24.08.2023
- ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?; ಈ ಅಡಿಕೆ ತಳಿಗಳು ಹಾಕಿದ್ರೆ ಆದಾಯ ಅಂತೂ ಗ್ಯಾರಂಟಿ
ಕೆಲ ವರ್ಷಗಳ ಹಿಂದಿನ ನನ್ನ ಆಡಿಯೋ ಒಂದು ದುರುದ್ದೇಶಪೂರ್ವಕವಾಗಿ ವೈರಲ್ ಆಗಿ ಇಡೀ ವಿವಾದಕ್ಕೆ ಕಾರಣವಾಗಿತ್ತು. ಅದು ಯಾವುದೋ ವಿಷಮ ಘಳಿಗೆಯಲ್ಲಿ ಒಬ್ಬ ವ್ಯಕ್ತಿಯ ಮಾತಿಗೆ ಪ್ರತಿಕ್ರಿಯೆಯಾಗಿತ್ತು. ಅದು ಮಾಧ್ಯಮದ ಇತರ ವ್ಯಕ್ತಿಗಳನ್ನು ಕುರಿತು ಆಡಿದ ಮಾತಾಗಿರಲಿಲ್ಲ. ಆ ವ್ಯಕ್ತಿ ಯಾವ ದುರುದ್ದೇಶದಿಂದ ಮಾಡಿದರು ಗೊತ್ತಿಲ್ಲ ಆದರೂ ಆ ವ್ಯಕ್ತಿಗೆ ಒಳ್ಳೆಯದಾಗಲಿ ಮುಂದೆ ಆ ವ್ಯಕ್ತಿ ಈ ರೀತಿಯ ದುರುದ್ದೇಶವನ್ನು ಮರುಕಳಿಸದಿರಲಿ, ಆದರೂ ಅಂತಹ ಮಾತಿನಿಂದ ನೋವುಂಟಾಗಿದ್ದರೆ ಮಾಧ್ಯಮದ ಹಿರಿಯರಿಗೆ ಕ್ಷಮೆ ಕೋರುವುದರಲ್ಲಿ ತಪ್ಪಿಲ್ಲ.
D Boss Darshan ಈ ಅಯಾಚಿತ ಘಟನೆಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ರಂಗದ ಕ್ಷಮೆ ಇರಲಿ. ಒಂದು ಉತ್ತಮವಾದ ಸಮಾಜಕ್ಕೆ ಒಳ್ಳೆಯ ಮಾಧ್ಯಮಗಳ ಅಗತ್ಯವಿದೆ. ನನಗೂ ಮಾಧ್ಯಮಗಳ ಬಗ್ಗೆ ಗೌರವವಿದೆ. ಚಿತ್ರರಂಗದ ನನ್ನ ಬೆಳವಣಿಗೆಯಲ್ಲಿ ಮಾಧ್ಯಮಗಳು ಪ್ರೀತಿಯಿಂದ ನೀಡಿದ ಪ್ರಚಾರದ ಪಾಲೂ ಸಾಕಷ್ಟಿದೆ. ಈ ಹಿಂದೆ ಆಗಿರುವ ಕಹಿ ಘಟನೆಯನ್ನು ಮರೆತು ನಾವೆಲ್ಲ ಮುಂದೆ ಸಾಗೋಣ. ಕನ್ನಡ, ಕನ್ನಡಿಗರು, ಕನ್ನಡ ನೆಲ ಜಲ, ಕನ್ನಡ ಚಿತ್ರರಂಗದ ಪ್ರಗತಿಗೆ ಜೊತೆಯಾಗಿ ಕೆಲಸ ಮಾಡೋಣ. ಪ್ರೀತಿಯಿರಲಿ, ನನ್ನ ಪ್ರೀತಿಯ ಸೆಲೆಬ್ರಿಟಿಗಳು ನನ್ನ ಭಾವನೆಯನ್ನು ಗೌರವಿಸುತ್ತಾರೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದಾರೆ.
D Boss Darshan ನನ್ನು ಅಘೋಷಿತ ಬ್ಯಾನ್ ಮಾಡಿದ್ದ ಮಾಧ್ಯಮಗಳು
ಕೆಲ ವರ್ಷದ ಹಿಂದೆ ಮಾಧ್ಯಮದವರ ಕುರಿತಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ (challenging star darshan) ಮಾತನಾಡಿದ್ದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು. ಇದು ಮಾಧ್ಯಮದವರಿಗೆ ನೋವುಂಟು ಮಾಡಿತ್ತು. ದರ್ಶನ್ ಮಾತನಾಡಿದ್ದಾರೆ ಎನ್ನಲಾಗಿದ್ದ ಆ ಆಡಿಯೋದಲ್ಲಿ ಮಾಧ್ಯಮದವರ ಕುರಿತಂತೆ ಅವಾಚ್ಯ ಶಬ್ದಗಳಿಂದ ಬೈದಿದ್ದರು. ಇದರಿಂದ ಮಾಧ್ಯಮಗಳು ದರ್ಶನ್ ಅವರನ್ನು ಅಘೋಷಿತವಾಗಿ ಬ್ಯಾನ್ ಮಾಡಿದ್ದರು. ಡಿ ಬಾಸ್ ಕುರಿತಂತೆ ಯಾವುದೇ ಸುದ್ದಿ ಮಾಡದಿರಲು ತೀರ್ಮಾನಿಸಿದ್ದವು. ಕಳೆದ ಒಂದು ವರ್ಷದಿಂದು ರಾಜ್ಯದ ಪ್ರಮುಖ ಮಾಧ್ಯಮಗಳಲ್ಲಿ ದರ್ಶನ್ ಕುರಿತಾದ ಯಾವುದೇ ಸ್ಪೆಷಲ್ ಪ್ರೋಗ್ರಾಂ ಗಳೂ ಪ್ರಸಾರವಾಗಿರಲಿಲ್ಲ. ಇದರಿಂದ ದರ್ಶನ್ ಸಿನಿಮಾಗಳ (Kranthi movie) ಪ್ರಮೋಶನ್ ಗೂ ಸಹ ಬಾರೀ ಮಟ್ಟದ ಹಿನ್ನಡೆ ಉಂಟಾಗಿತ್ತು. ಕೊನೆಗೂ ದರ್ಶನ್ ಮಾಧ್ಯಮದ ನಡುವಿನ ಮುನಿಸಿಗೆ ಬ್ರೇಕ್ ಹಾಕಿದ್ದಾರೆ.
ಈ ಹಿಂದೆ ಖಾಸಗಿ ಸುದ್ದಿ ಮಾಧ್ಯಮ ಝೀ ಕನ್ನಡ ನ್ಯೂಸ್ ಕಛೇರಿಗೆ ದರ್ಶನ್ ಕ್ಷಮೆ ಕೇಳಿ ಬರೆದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದರೆ ಡಿ ಬಾಸ್ ದರ್ಶನ್ ಈ ಕುರಿತು ಎಲ್ಲೂ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತಂತೆ ಹೇಳಿಕೊಂಡಿರಲಿಲ್ಲ. ಆದರೆ ಇಂದು ಬಹಿರಂಗವಾಗಿ ತಮ್ಮ ಫೇಸ್ಬುಕ್ ಖಾತೆಯಲ್ಲಿ ಕ್ಷಮೆ ಕೇಳಿದ್ದಾರೆ. ಇನ್ನಾದರೂ ಮಾಧ್ಯಮಗಳು ದರ್ಶನ್ ಸುದ್ದಿಗಳನ್ನು ಪ್ರಸಾರ ಮಾಡಲಿವೆಯಾ ಎನ್ನೋದನ್ನು ಕಾದುನೋಡಬೇಕಿದೆ.






Leave a Reply