(Damaged Crops 25:) ಬೆಳೆಹಾನಿಗೊಳಗಾದ ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ಮೊತ್ತ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಹುಟ್ಟೂರು ಶೃಂಗೇರಿಯನ್ನ ಕೊಂಡಾಡಿದ ವಜ್ರಕಾಯ ಬೆಡಗಿ; ನಾನು ಶೃಂಗೇರಿಯವಳು ಎನ್ನಲು ಈ ಕಾರಣಕ್ಕೆ ಹೆಮ್ಮೆ ನಭಾ ನಟೇಶ್..
ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ಮೊತ್ತ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಐದು ವರ್ಷದ ಬಳಿಕ ಪರಿಹಾರಧನ ಪರಿಷ್ಕರಣೆ ಮಾಡಲಿದ್ದು, ಹೆಚ್ಚುವರಿ ಮೊತ್ತವನ್ನು ರಾಜ್ಯ ಸರ್ಕಾರ ಭರಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ: ಬಿಗ್ ಬಾಸ್ ಕನ್ನಡ ಸೀಸನ್ 12ರ ಕುರಿತು ಬಿಗ್ ಅಪ್ಡೇಟ್
(Damaged Crops 25:) ರಾಜ್ಯದಲ್ಲಿ ಅಂದಾಜು 5.20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿರುವ ಅಂದಾಜಿದ್ದು, ಎಸ್.ಡಿ.ಆರ್.ಎಫ್. ಮಾರ್ಗಸೂಚಿಯ ಪ್ರಕಾರ ನೀಡುವ ಪರಿಹಾರ ಏನೇನೂ ಸಾಲದು ಎನ್ನುವ ಅಭಿಪ್ರಾಯದ ಹಿನ್ನೆಲೆಯಲ್ಲಿ ಐದು ವರ್ಷದ ನಂತರ ಬೆಳೆ ನಷ್ಟ ಪರಿಹಾರ ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ ಮೊತ್ತ ಹೆಚ್ಚಳ ಮಾಡಲಾಗಿತ್ತು.
ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಹಾನಿ ಬಗ್ಗೆ ಪ್ರಾಥಮಿಕ ಸಮೀಕ್ಷೆ ನಡೆಸಲಾಗಿದ್ದು, 480256 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 40407 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದ್ದು, ಒಟ್ಟು 520663 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಮಳೆಗೆ ಸಂಬಂಧಿಸಿದಂತೆ ಎಪ್ರಿಲ್ ತಿಂಗಳಿನಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 111 ಮಂದಿ ಸಾವನ್ನಪ್ಪಿದ್ದು ಎಲ್ಲಾ ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದ್ದು, ಒಟ್ಟು 5.55ಕೋಟಿ ಪರಿಹಾರ ನೀಡಲಾಗಿದೆ ಎಂದರು.

ಇದನ್ನೂ ಓದಿ: ಬಿಗ್ ಬಾಸ್ ಕನ್ನಡ ಸೀಸನ್ 12ರ ಕುರಿತು ಬಿಗ್ ಅಪ್ಡೇಟ್
ಇತ್ತೀಚಿನ ಜನಪ್ರಿಯ ಸುದ್ದಿಗಳು (Damaged Crops 25:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





