Darshan Thoogudeepa: ದರ್ಶನ್​ ಸೇರಿ 7 ಆರೋಪಿಗಳಿಗೆ ಜಾಮೀನು

(Darshan Thoogudeepa:) ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ʼಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.


ಇದನ್ನೂ ಓದಿ; ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ


ದರ್ಶನ್​ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್ ಗೌಡ, ಪ್ರದೋಶ್, ಅನುಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ.


ಇದನ್ನೂ ಓದಿ; ಪಂಚಾಯತಿ ರಾಜ್ ನಿಂದ ಸ್ಕಾಲರ್‌ ಶಿಪ್‌; ತಿಂಗಳಿಗೆ ಸಿಗಲಿದೆ 7,000, ಹೀಗೆ ಅರ್ಜಿ ಸಲ್ಲಿಸಿ


ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್​ನಿಂದ ಮಧ್ಯಂತರ ಜಾಮೀನು ಪಡೆದಿದ್ದ ನಟ ದರ್ಶನ್ ಈಗ ಜಾಮೀನು ಮಂಜೂರಾಗಿದ್ದು, ತಾತ್ಕಾಲಿಕ ನಿರಾಳತೆ ದೊರಕಿದೆ.


ಇದನ್ನೂ ಓದಿ; B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ


ದರ್ಶನ್ ಪರ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರು, ರೇಣುಕಾ ಸ್ವಾಮಿ ಕೊಲೆಯಲ್ಲಿ ದರ್ಶನ್ ಅವರದ್ದು ಪಾತ್ರವಿಲ್ಲ. ಪೊಲೀಸರು ಕೆಲವು ಉತ್ಪ್ರೇಕ್ಷಿತ ಆರೋಪಗಳನ್ನು ದರ್ಶನ್ ವಿರುದ್ಧ ಮಾಡಿದ್ದಾರೆ ಎಂದು ವಾದಿಸಿದ್ದರು. ದರ್ಶನ್ ಪರ ವಕೀಲರ ವಾದವನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರು ದರ್ಶನ್​’ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

Darshan Thoogudeepa: ದರ್ಶನ್​ ಸೇರಿ 7 ಆರೋಪಿಗಳಿಗೆ ಜಾಮೀನು
Darshan Thoogudeepa: ದರ್ಶನ್​ ಸೇರಿ 7 ಆರೋಪಿಗಳಿಗೆ ಜಾಮೀನು

ಇತ್ತೀಚಿನ ಜನಪ್ರಿಯ ಸುದ್ದಿಗಳು