ಮೂಡಿಗೆರೆ/ಬಂಟ್ವಾಳ: (ನ್ಯೂಸ್ ಮಲ್ನಾಡ್ ವರದಿ) ಪ್ರಸಿದ್ಧ ಪ್ರವಾಸಿ ತಾಣವಾದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವರು ಮನೆ ಗುಡ್ಡದ ವ್ಯಾಪ್ತಿಯಲ್ಲಿ ಯುವಕನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಯುವಕನ ಮೃತದೇಹ ಎಂದು ತಿಳಿದು ಬಂದಿದೆ.
ಇದನ್ನೂ ಓದಿ; ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ
ಇದನ್ನೂ ಓದಿ; ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ.ಜೆ ಜಾರ್ಜ್ ನೇಮಕ
ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಕುಕ್ಕಾಜೆ ನಿವಾಸಿ ಸವಾದ್ (35) ಎಂಬವರ ಮೃತದೇಹ ದೇವರು ಮನೆ ಗುಡ್ಡದ ಸಮೀಪದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು. ಮೃತ ಸವಾದ್ 10 ದಿನಗಳಿಂದ ಕಾಣೆಯಾಗಿದ್ದು, ಮೊಬೈಲ್ ಸಂಪರ್ಕಕ್ಕೂ ಸಿಗುತ್ತಿರಲಿಲ್ಲ. ಈ ಹಿಂದೆ ಕೂಡಾ ಈತ ಇದೇ ತರಹ ಸಂಪರ್ಕಕ್ಕೆ ಸಿಗದೆ ಕೆಲವು ದಿನಗಳ ಬಳಿಕ ಮನೆಗೆ ಬರುತ್ತಿದ್ದ ಎನ್ನಲಾಗಿದ್ದು, ಮನೆಯವರು ಈ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ.
ಇದನ್ನೂ ಓದಿ; ಹಾಸ್ಟೆಲ್ ನಲ್ಲಿ ಬಾಲಕಿ ಅನುಮಾನಾಸ್ಪದ ಸಾವು
ಆದರೆ ಈತನ ಅಣ್ಣನಿಗೆ ಸವಾದ್ ನ ಕೊಲೆಯಾಗಿರುವ ಬಗ್ಗೆ ವ್ಯಕ್ತಿಯೊಬ್ಬ ಮಾಹಿತಿ ನೀಡಿದ್ದು, ಮಾಹಿತಿ ಆಧರಿಸಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತ ಶರೀರದ ಗುರುತು ಪತ್ತೆ ಹಚ್ಚಿ, ಸವಾದ್‌ನದೇ ಮೃತದೇಹ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಒಂದೇ ಕೊಠಡಿಯಲ್ಲಿ, 5 ತರಗತಿಗೆ, ಒಬ್ಬರೇ ಮೇಷ್ಟ್ರು
- ಲಗೇಜ್ ಆಟೋಗೆ ಡಿಕ್ಕಿ ಹೊಡೆದ ಬೊಲೆರೋ; ಓರ್ವ ಸಾವು
- ಸೆಂಟ್ರಿಂಗ್ ಶೀಟ್ ಕಳವು ಮಾಡಿದ ಆರೋಪಿಗಳ ಬಂಧನ
ಮೃತ ದೇಹದ ಗುರುತು ಸಿಗದ ರೀತಿಯಲ್ಲಿ ಮುಖಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿದ್ದು, ಮಾದಕ ವ್ಯಸನಿಗಳ ತಂಡ ಈ ಕೃತ್ಯ ಎಸಗಿದ್ದಾರೆ ಎಂದು ದೂರಲಾಗಿದೆ. ಹಂತಕರು ಕಾವಳಕಟ್ಟೆ ವಗ್ಗ ಮೂಲದ ಪೆಡ್ಲರ್ ತಂಡದವರು ಎಂಬ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದ್ದು, ಶೋಧಕಾರ್ಯ ನಡೆಯುತ್ತಿದೆ.
ಗಾಂಜಾ ಹಾವಳಿ ವ್ಯಾಪಕ:
ಕುಕ್ಕಾಜೆ ಸಹಿತ ಗ್ರಾಮಾಂತರ ಭಾಗದಲ್ಲಿ ಗಾಂಜಾ ಹಾವಳಿ ವ್ಯಾಪಕವಾಗಿದ್ದು, ಯುವಜನತೆ ಅದಕ್ಕೆ ಬಲಿ ಬೀಳುತ್ತಿದ್ದಾರೆ. ಸವಾದ್ ಸಾವಿಗೂ ಗಾಂಜಾ ಪ್ರಕರಣವೇ ಕಾರಣವಾಗಿರಬಹುದು. ಕೇರಳ ಗಡಿ ಭಾಗವಾಗಿರುವುದರಿಂದ ಸಾಕಷ್ಟು ಪ್ರಮಾಣದಲ್ಲಿ ಗಾಂಜಾ ಪೂರೈಕೆಯಾಗುತ್ತಿದೆ. ಪೊಲೀಸರು ಹಾಗೂ ಸಂಬಂಧ ಪಟ್ಟ ಇಲಾಖೆಯವರು ಈ ಕುರಿತು ಗಮನ ಹರಿಸಿ, ಗಾಂಜಾ ಹಾವಳಿಯನ್ನು ತಡೆಯಬೇಕು ಎಂದು ಸ್ಥಳೀಯರಾದ ಆಗ್ರಹಿಸಿದ್ದಾರೆ.
ದೇವರು ಮನೆ ಗುಡ್ಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವ ಕಂಡು ಪ್ರವಾಸಿಗಳು ಶಾಕ್
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಪ್ರಸಿದ್ಧ ಪ್ರವಾಸಿ ತಾಣವಾದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ದೇವರು ಮನೆ ಗುಡ್ಡದ ವ್ಯಾಪ್ತಿಯಲ್ಲಿ ಯುವಕನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು.
ಇದನ್ನೂ ಓದಿ; ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ
ಜಿಲ್ಲೆಯಲ್ಲಿ ಚಾರಣಕ್ಕೆ ಹೆಸರುವಾಸಿಯಾಗಿರುವ ಸ್ಥಳವಾದ ದೇವರು ಮನೆ ಗುಡ್ಡದ ಸಮೀಪದ ರಸ್ತೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಗುರುತು ಸಿಗದ ಸ್ಥಿತಿಯಲ್ಲಿ ಶವ ದೊರಕಿತ್ತು. ಯುವಕನನ್ನು ಕೊಲೆ ಮಾಡಿ ಈ ಸ್ಥಳಕ್ಕೆ ತಂದು ಎಸೆದಿರುವ ಶಂಕೆ ಕೂಡ ವ್ಯಕ್ತವಾಗಿತ್ತು. ಘಟನಾ ಸ್ಥಳಕ್ಕೆ ಮೂಡಿಗೆರೆ ತಾಲೂಕಿನ ಬಣಕಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ಆರಂಭಿಸಿದ್ದರು.
ಇದನ್ನೂ ಓದಿ; ಯುವಕನ ಕೊಲೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ
ದಟ್ಟವಾದ ಅರಣ್ಯ ಪ್ರದೇಶವನ್ನು ಹೊಂದಿರುವ ಚಾರ್ಮಾಡಿ ಘಾಟ್ ನ ಸುತ್ತಮುತ್ತಲಿನ ನಿರ್ಜನ ಪ್ರದೇಶಗಳಲ್ಲಿ ಈ ಹಿಂದೆಯೂ ಹಲವಾರು ವ್ಯಕ್ತಿಗಳ ಮೃತದೇಹಗಳು ಕೂಡ ಪತ್ತೆಯಾಗಿದ್ದವು. ಘಟನಾ ಸಂಬಂಧ ಪರಿಶೀಲನೆ ಆರಂಭಿಸಿರುವ ಪೊಲೀಸರು ಹೆಚ್ಚಿನ ಮಾಹಿತಿಯನ್ನು ಕಲೆಹಾಕಲು ಆರಂಭಿಸಿದ್ದರು.