DEADLINE; 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ

(DEADLINE;) ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ಡಿ. 31 ವರೆಗೆ ವಿಸ್ತರಿಸಲಾಗಿದೆ. ಇದರಿಂದ ಕೊನೆಯ ದಿನಾಂಕದೊಳಗಾಗಿ ಆಧಾ‌ರ್ ಕಾರ್ಡ್ ಸಂಖ್ಯೆಯನ್ನು ಲಿಂಕ್ ಮಾಡಲು ಸೂಚಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!


2023-24 ಮತ್ತು 2024-25ನೇ ಸಾಲಿನ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ ಮೂಲಕ ಸಲ್ಲಿಸುವ ಅವಧಿಯನ್ನು 31-12-2024ರ ವರೆಗೆ ವಿಸ್ತರಿಸಲಾಗಿದೆ.


ಇದನ್ನೂ ಓದಿ; ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?


ಡಿಸೆಂಬರ್‌ 31 ರೊಳಗೆ ಆಧಾ‌ರ್ ಕಾರ್ಡ್ ಸಂಖ್ಯೆಯನ್ನು ಲಿಂಕ್ ಮಾಡಲು ಸೂಚಿಸಲಾಗಿದೆ. ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿ ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸುವುದು ಕಡ್ಡಾಯವಾಗಿದೆ.

https://kbocwwb. karnataka.gov.in ವೆಬ್‌ ಸೈಟ್‌ ಗೆ ಭೇಟಿ ನೀಡಿ (Registration Number) ಮತ್ತು ಉಲ್ಲೇಖ ಸಂಖ್ಯೆ (Reference Number) ಯನ್ನು ನಮೂದಿಸಿ ಆಧಾರ್ ಕಾರ್ಡ್ ಸಂಖ್ಯೆಯನ್ನು ಲಿಂಕ್ ಮಾಡಲು ಸೂಚಿಸಿದೆ.


ಇದನ್ನೂ ಓದಿ; ಅಂದು ಚಿಕ್ಕಮಗಳೂರು ಎಸಿ, ಇಂದು ಮಠದ ಸ್ವಾಮೀಜಿ!


ಈ ಹಿಂದೆ ಫ್ರೀ ಮೆಟ್ರಿಕ್ (1 ರಿಂದ 10ನೇ ತರಗತಿ) ತರಗತಿಗಳಲ್ಲಿ ಶೈಕ್ಷಣಿಕ ಧನಸಹಾಯಕ್ಕಾಗಿ ಎಸ್. ಎಸ್. ಪಿ ತಂತ್ರಾಂಶದ ಮೂಲಕ ಕರ್ನಾಟಕ ಸರ್ಕಾರದ ಯಾವುದಾದರೂ ಇಲಾಖೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆದಿದ್ದಲ್ಲಿ ಅಂತಹ ವಿದ್ಯಾರ್ಥಿಗಳ ಅರ್ಜಿಗಳನ್ನು ಮುಂದಿನ ವರ್ಷ ಸ್ವಯಂ ಚಾಲಿತ ನವೀಕರಣದ ಮೂಲಕ ಎಸ್.ಎಸ್‌.ಪಿ ತಂತ್ರಾಂಶದಲ್ಲಿ ಸ್ವೀಕರಿಸುವುದರಿಂದ ಪುನಃ ಪ್ರಿ ಮೆಟ್ರಿಕ್ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

DEADLINE; 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ
DEADLINE; 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು