Deadline: ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್

(Deadline) 2023-24 ಮತ್ತು 2024-25ನೇ ಸಾಲಿನ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ ಮೂಲಕ ಸಲ್ಲಿಸುವ ಅವಧಿಯನ್ನು 31-12-2024ರ ವರೆಗೆ ವಿಸ್ತರಿಸಲಾಗಿದೆ.


ಇದನ್ನೂ ಓದಿ; SC/ST ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ; ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ


ಇ-ಕಾರ್ಡ್ ಪಡೆಯಲು ಡಿಸೆಂಬರ್‌ 31 ರೊಳಗೆ ಆಧಾ‌ರ್ ಕಾರ್ಡ್ ಸಂಖ್ಯೆಯನ್ನು ಲಿಂಕ್ ಮಾಡಲು ಸೂಚಿಸಲಾಗಿದೆ. ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿ ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸುವುದು ಕಡ್ಡಾಯವಾಗಿದೆ.


ಇದನ್ನೂ ಓದಿ; ಶಾಲೆಗಳ ಶೈಕ್ಷಣಿಕ ಪ್ರವಾಸ ರದ್ದು!; ಇಲ್ಲಿದೆ ಮಹತ್ವದ ಮಾಹಿತಿ…


ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು ಇ-ಕಾರ್ಡ್ https://kbocwwb. karnataka.gov.in ವೆಬ್‌ ಸೈಟ್‌ ಗೆ ಭೇಟಿ ನೀಡಿ (Registration Number) ಮತ್ತು ಉಲ್ಲೇಖ ಸಂಖ್ಯೆ (Reference Number) ಯನ್ನು ನಮೂದಿಸಿ ಕಡ್ಡಾಯವಾಗಿ 31-12-2024 ರೊಳಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಲಿಂಕ್ ಮಾಡಲು ಸೂಚಿಸಿದೆ. ಅಲ್ಲದೇ ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ಆಧಾ‌ರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿ ಎನ್‌.ಪಿ.ಸಿ.ಐ ಮ್ಯಾಪಿಂಗ್ ಮಾಡಿಸುವುದು ಕಡ್ಡಾಯವಾಗಿರುತ್ತದೆ.


ಇದನ್ನೂ ಓದಿ; ಆಧಾರ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಓದಿ; ಈ ಕೆಲಸ ಮಾಡಲು ಇಂದು ಕೊನೆಯ ದಿನ


ಈ ಹಿಂದೆ ಫ್ರೀ ಮೆಟ್ರಿಕ್ (1 ರಿಂದ 10ನೇ ತರಗತಿ) ತರಗತಿಗಳಲ್ಲಿ ಶೈಕ್ಷಣಿಕ ಧನಸಹಾಯಕ್ಕಾಗಿ ಎಸ್.ಎಸ್.ಪಿ ತಂತ್ರಾಂಶದ ಮೂಲಕ ಕರ್ನಾಟಕ ಸರ್ಕಾರದ ಯಾವುದಾದರೂ ಇಲಾಖೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆದಿದ್ದಲ್ಲಿ ಅಂತಹ ವಿದ್ಯಾರ್ಥಿಗಳ ಅರ್ಜಿಗಳನ್ನು ಮುಂದಿನ ವರ್ಷ ಸ್ವಯಂ ಚಾಲಿತ ನವೀಕರಣದ ಮೂಲಕ ಎಸ್.ಎಸ್‌.ಪಿ ತಂತ್ರಾಂಶದಲ್ಲಿ ಸ್ವೀಕರಿಸುವುದರಿಂದ ಪುನಃ ಪ್ರಿ ಮೆಟ್ರಿಕ್ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

Deadline: ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್
Deadline: ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್

ಇದನ್ನೂ ಓದಿ; ರೇಷನ್‌ ಕಾರ್ಡ್‌ ಹೊಂದಿರುವ ಯುವಕ – ಯುವತಿಯರಿಗೆ ಸಿಹಿಸುದ್ದಿ; ಈ ತರಬೇತಿಗೆ ಅರ್ಜಿ ಆಹ್ವಾನ


ಇತ್ತೀಚಿನ ಜನಪ್ರಿಯ ಸುದ್ದಿಗಳು