ಸಂಪಾಜೆ/ಮಡಿಕೇರಿ: (ನ್ಯೂಸ್ ಮಲ್ನಾಡ್ ವರದಿ) ಸ್ವಿಫ್ಟ್ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿರುವ ಘಟನೆ ಮಡಿಕೇರೆ ಠಾಣಾ ವ್ಯಾಪ್ತಿಯ ಸಂಪಾಜೆಯಲ್ಲಿ ಶುಕ್ರವಾರ ವರದಿಯಾಗಿದೆ.
ಮಡಿಕೇರಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಹಾಗೂ ಮಂಗಳೂರು ಕಡೆಯಿಂದ ಮಡಿಕೇರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ. ಬಸ್ ನಲ್ಲಿದ್ದವರು ಪ್ರಾರಣಾಪಾಯದಿಂದ ಪಾರಾಗಿದ್ದಾರೆ.
ಕಾರಿನಲ್ಲಿ ಮಂಡ್ಯ ಮೂಲದ 8 ಮಂದಿ ಪ್ರಯಾಣಿಸುತ್ತಿದ್ದು, ಕಾರಿನಲ್ಲಿದ್ದ 3 ಮಕ್ಕಳು, ಎರಡು ಮಹಿಳೆಯರು ಹಾಗು ಒಬ್ಬರು ಪುರುಷ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಇಬ್ಬರು ತೀವ್ರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿವರ ಲಭ್ಯವಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟವರ ಹೆಸರು ಇನ್ನಷ್ಟೇ ತಿಳಿಯಬೇಕಿದೆ.
ಮೂಲಭೂತ ಸೌಕರ್ಯ ವ್ಯವಸ್ಥೆಯಿಂದ ವಂಚಿತ; ಮತದಾನ ಬಹಿಷ್ಕಾರಕ್ಕೆ ಮುಂದಾದ ಗ್ರಾಮಸ್ಥರು
ಕೊಪ್ಪ/ಹರಿಹರಪುರ: ಕಳೆದ 30 ವರ್ಷಗಳಿಂದ ಗ್ರಾಮದಲ್ಲಿ ಅಭಿವೃದ್ಧಿಯಾಗದೆ, ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವುದರಿಂದ ಈ ಬಾರಿ ರಾಜ್ಯ ವಿಧಾನಸಭಾ ಚುನಾವಣೆಯನ್ನು ಬಹಿಷ್ಕಾರಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರದ ಯಡದಂಟೆ, ಕೆಳದೇವರ ಮನೆಯಲ್ಲಿ ನಡೆದಿದೆ.
ದೇವರಮನೆಯಿಂದ ಮತ್ವಾನಿಗೆ ಸಂಪರ್ಕ ಕಲ್ಪಿಸುವ 3 ಕಿ.ಮೀ ಉದ್ದದ ರಸ್ತೆಯನ್ನು ಸರ್ವಋತು ರಸ್ತೆಯಾಗಿ ಮಾರ್ಪಾಡಿಸಲು ಮನವಿ ಸಲ್ಲಿಸುತ್ತಾ ಬಂದಿದ್ದಾರೆ.
ಇನ್ನೂ ಈಗಿರುವ ಟ್ರಾನ್ಸ್ ಫಾರ್ಮ್ ನಿಂದ ಬೆಳೆ ಹಾಳಾಗುತ್ತಿದ್ದು ಕೂಡಲೆ ಹೆಚ್ಚುವರಿ ಟ್ರಾನ್ಸ್ ಫಾರ್ಮ್ ಅನ್ನು ಅಳವಡಿಸುವಂತೆ ಹಾಗೂ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದ್ದು ಇದರಿಂದಾಗಿ ಊರಿಗೆ ತುಂಗಾ ನದಿಯಿಂದ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ರಫೀಕ್, ಸಮೀರ್, ಮಾನಪ್ಪ, ಸುಧಾಕರ ಶೆಟ್ಟಿ, ಮಹೇಶ್ ಭಟ್, ಸುಬ್ರಮಣ್ಯ, ಶಿವಶಂಕರ್ ಮುಂತಾದವರು ಇದ್ದರು.