ಶಿವಮೂಗ್ಗ: (ನ್ಯೂಸ್ ಮಲ್ನಾಡ್ ವರದಿ) ಮೂರು ವರ್ಷದ ಮೊಮ್ಮಗನೊಂದಿಗೆ ಜಮೀನಿಗೆ ತೆರಳಿದ್ದ ವ್ಯದ್ಯರೊಬ್ಬರು, ಅಲ್ಲಿಯೇ ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬಿ.ಕೆ ಲೋಕಪ್ಪ (68) ಮೃತಪಟ್ಟ ವೃದ್ಧ.
ಇದನ್ನೂ ಓದಿ; ಮಹಿಳೆ ಮೇಲೆ ಹುಲಿ ದಾಳಿ; ಗಂಭೀರ ಗಾಯ
ಇದನ್ನೂ ಓದಿ; ಮರಕ್ಕೆ ಡಿಕ್ಕಿ ಹೊಡೆದ ಕಾರು; ಚಾಲಕ ಸ್ಥಳದಲ್ಲೇ ಸಾವು
ಇವರು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಪುರಮಠ ನಿವಾಸಿ. ಬಿ.ಕೆ ಲೋಕಪ್ಪ ಅವರು, ತಮ್ಮ ಮೊಮ್ಮಗನೊಂದಿಗೆ ಜಮೀನಿಗೆ ತೆರಳಿದ್ದರು. ಅಲ್ಲಿಯೇ ಬಿಟ್ಟಿದ್ದ ಕವಳಿ ಹಣ್ಣುಗಳನ್ನು ಮೊಮ್ಮಗನಿಗೆ ಕಿತ್ತು ಕೊಟ್ಟು ಮನೆಗೆ ಕಳಿಸಿದ್ದರು. ಆದರೆ ಬಹಳ ಹೊತ್ತಾದರೂ ಮನೆಗೆ ಹಿಂದಿರುಗಿರಲಿಲ್ಲ. ಮನೆಗೆ ಬಾರದ ಲೋಕಪ್ಪ ಕುಟುಂಬಸ್ಥರು ಹುಡುಕಾಡಿದರೆ, ಜಮೀನಿನ ಬಳಿ ಹೋದಾಗ ಹಕ್ಕಲಿನಲ್ಲಿ ಲೋಕಪ್ಪರವರ ಮೃತ ದೇಹ ಪತ್ತೆಯಾಗಿದೆ ಹೃದಯಘಾತದಿಂದ ಕುಸಿದು ಬಿದ್ದು ಸಾವನಪ್ಪಿರಬಹುದು ಎಂಬ ಶಂಕೆ ವ್ಯಕ್ತಪಡಿಸಲಾಗಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ‘ಹೇಳಲು ಮಲೆನಾಡು, ನೋಡೋಕೆ ಎರಡು ಮರ ಕಾಣಿಸ್ತಿಲ್ಲ.. ಏನ್ ಕರ್ಮ ನಮ್ದು’
- ತಾಯಿಯನ್ನೇ ಬಡಿಗೆಯಿಂದ ಹೊಡೆದು ಹತ್ಯೆ
- ಆಡಳಿತ ವ್ಯವಸ್ಥೆ ಸತ್ತು ದಶಕಗಳೇ ಕಳೆದಿದೆ?
ವಿದ್ಯುತ್ ಇಲ್ಲದ ಶವಗಾರ ಸಾರ್ವಜನಿಕರಿಂದ ಆಕ್ರೋಶ:
ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಯ ತಪಾಸಣೆಗೆ ತಂದಾಗ ವೈದ್ಯರು ಮೊಬೈಲ್ ಟಾರ್ಚ್ ಹಾಗೂ ಚಾರ್ಜರ್ ಬ್ಯಾಟರಿ ಹಿಡಿದು ಮರಣೋತ್ತರ ಪರೀಕ್ಷೆ ನಡೆಸಿದರು. ಶವಗಾರದಲ್ಲಿ ವಿದ್ಯುತ್ ಸಂಪರ್ಕ ಇಲ್ಲದಿರುವುದನ್ನು ಕಂಡು ಇಲ್ಲಿನ ಅವ್ಯವಸ್ಥೆಯ ಕುರಿತು ಆಕ್ರೋಶ ವ್ಯಕ್ತಪಡಿಸಿದರು. ಹಗಲು ವೇಳೆಯಲ್ಲಿ ಇಬ್ಬರು ವೈದ್ಯರು ಕಾರ್ಯ ನಿರ್ವಹಿಸುತ್ತಿರುವ ಈ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಯಾವುದೇ ವೈದ್ಯರು ಕರ್ತವ್ಯದಲ್ಲಿ ಇರುವುದಿಲ್ಲ. ಈ ಬಗ್ಗೆ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ವೈದ್ಯಾಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ಚಿಕ್ಕಮಗಳೂರು: ಮದ ಇಳಿಯೋದಕ್ಕೆ-ಇಳ್ಸೋದಕ್ಕೆ ಬಹಳ ಕಾಲ ಬೇಕಾಗಲ್ಲ: ಸಿ.ಟಿ. ರವಿ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಕ್ರವರ್ತಿ ಸೂಲಿಬೆಲೆ ಅಪ್ರತಿಮ ದೇಶಭಕ್ತ, ಅವರ ದೇಶಭಕ್ತಿಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಕಾಗಿಲ್ಲ ಎಂದು ಮಾಜಿ ಶಾಸಕ ಸಿ.ಟಿ. ರವಿ ಹೇಳಿದ್ದರು.
ಇದನ್ನೂ ಓದಿ; ಚಾರ್ಮಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಓರ್ವ ಸಾವು, ಹಿಂಬದಿ ಸವಾರನ ಸ್ಥಿತಿ ಗಂಭೀರ
ಇದನ್ನೂ ಓದಿ; ಚಾರ್ಮಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಓರ್ವ ಸಾವು, ಹಿಂಬದಿ ಸವಾರನ ಸ್ಥಿತಿ ಗಂಭೀರ
ಸೂಲಿಬೆಲೆ ದೇಶಭಕ್ತಿಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಕಾಗಿಲ್ಲ. ಬಹುಶಃ ಕಾಂಗ್ರೆಸ್ ಅವರ ಕಣ್ಣಿಗೆ ಸೂಲಿಬೆಲೆ ಲಾಡೆನ್ ತರ ಕಾಣ್ತಿದ್ದಾರಾ, ಲಾಡೆನ್ ಬಂದ್ರೆ ಒಳಗೆ ಬಿಟ್ಟುಕೊಳ್ತಾರೆ. ಚಕ್ರವರ್ತಿ ಸೂಲಿಬೆಲೆ ಬಂದ್ರೆ ಏನು, ಕಾಂಗ್ರೆಸ್ಸಿಗರಿಗೆ ಅಧಿಕಾರದ ಮದ ಅತಿಯಾಗಿದೆ ಎಂದು ಕಾಣಿಸುತ್ತದೆ. ಹಾಗಾಗಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ; ಸಿಟ್ಟಿನಲ್ಲಿ ತಮ್ಮನ ಜೀವವನ್ನೇ ತೆಗೆದ ಅಣ್ಣ
ಅಧಿಕಾರದ ಅತಿಯಾದ ಮದ ಹೆಚ್ಚು ದಿನ ಉಳಿಯಲು ಸಾಧ್ಯವಿಲ್ಲ ಈ ಹಿಂದೆ ಕಾಂಗ್ರೆಸ್ ಸಂವಿಧಾನವನ್ನೇ ಬುಡಮೇಲು ಮಾಡಿ, ಪ್ರಜಾಪ್ರಭುತ್ವವನ್ನೇ ಹತ್ತಿಕ್ಕಿತ್ತು. ಜನ ಈ ಹಿಂದೆ ಕಾಂಗ್ರೆಸ್ಸಿಗೆ ಬುದ್ಧಿ ಕಲಿಸಿದ್ದನ್ನ ಅವರು ನೆನಪಿಟ್ಟುಕೊಳ್ಳಬೇಕು ಎಂದು ಸಿ.ಟಿ ರವಿ ಹೇಳಿದರು
ಮದ ಇಳಿಯೋದಕ್ಕೆ-ಇಳ್ಸೋದಕ್ಕೆ ಬಹಳ ಕಾಲಬೇಕಾಗಲ್ಲ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿ.ಟಿ.ರವಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ; ಲಾರಿಗೆ ಡಿಕ್ಕಿ ಹೊಡೆದ ಕಾರು, ನಾಲ್ವರು ಯುವಕರು ಸ್ಥಳದಲ್ಲೇ ಸಾವು