Thursday, June 8, 2023
Homeಮಲೆನಾಡುಕೊಡಗುಕಾಡಾನೆ ದಾಳಿಗೊಳಗಾಗಿದ್ದ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೇ ಸಾವು

ಕಾಡಾನೆ ದಾಳಿಗೊಳಗಾಗಿದ್ದ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೇ ಸಾವು

ಕೊಡಗು: (ನ್ಯೂಸ್ ಮಲ್ನಾಡ್ ವರದಿ) ಕಾಡಾನೆ ದಾಳಿಯಿಂದ ಗಾಯಗೊಂಡು ಮೈಸೂರಿನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೂಲಿ ಕಾರ್ಮಿಕ ಬಾಬಿ ಗುರುವಾರ ಮೃತಪಟ್ಟಿದ್ದಾರೆ.

ಪಾಲಿಬೆಟ್ಟ, ಸಮೀಪದ ಮಸ್ಕಲ್ ಬಳಿಯ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಬಾಬಿ ಮೇಲೆ ಮಂಗಳವಾರ ಕಾಡಾನೆ ದಾಳಿ ನಡೆಸಿತ್ತು.

ಇದನ್ನೂ ಓದಿ; ದತ್ತಪೀಠ ಮಾರ್ಗದಲ್ಲಿ ಭೀಕರ ಅಪಘಾತ; ಪ್ರಪಾತಕ್ಕೆ ಉರುಳಿದ ಕಾರು

ಇದನ್ನೂ ಓದಿ; ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಬ್ಬ ಸಾವು, ಮತ್ತೊಬ್ಬ ಗಂಭೀರ

ಗಂಭೀರವಾಗಿ ಗಾಯಗೊಂಡ ಅವರನ್ನ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆದರೆ ಗುರುವಾರ ಅವರು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಿಂದ ಸ್ಥಳೀಯರು ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಬಂದ ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಸಮಾಧಾನಪಡಿಸಲು ಯತ್ನಿಸಿದರು.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಒಟ್ಟು ಮೂರು ಆನೆಗಳು ಕಳೆದ ವಾರ ತಿತಿಮತಿ ಅರಣ್ಯ ವಲಯದಿಂದ ಹೊರಬಂದಿದ್ದವು. ಅದರಲ್ಲಿ ಒಂದು ಆನೆ ಪ್ರತ್ಯೇಕಗೊಂಡಿದ್ದು, ಇಬ್ಬರ ಮೇಲೆ ದಾಳಿ ನಡೆಸಿದೆ.

ಮಡಿಕೇರಿ: ಕಾಫಿ ತೋಟಗಳಲ್ಲಿ ಕಾಡಾನೆ ಹಿಂಡು ಪತ್ತೆ;
ರಾಜ್ಯದಲ್ಲಿ ಬುಧವಾರದಿಂದ ಆನೆ ಗಣತಿ ಆರಂಭವಾಗಿದ್ದು, ಕೊಡಗಿನ ಕಾಫಿತೋಟಗಳಲ್ಲಿ ಕಾಡಾನೆ ಹಿಂಡುಗಳು ಪತ್ತೆಯಾಗಿವೆ. ಈ ಕಾರ್ಯದಲ್ಲಿ ಸುಮಾರು 150ಕ್ಕೂ ಅಧಿಕ ಸಿಬ್ಬಂದಿ ಭಾಗಿಯಾಗಿದ್ದು, ಇನ್ನೆರಡು ದಿನಗಳ ಕಾಲ ಗಣತಿ ನಡೆಯಲಿದೆ.

ವಿರಾಜಪೇಟೆ ವಿಭಾಗದ ಮಾಕುಟ್ಟ, ಮುಂಡ್ರೋಟ್ ಅರಣ್ಯದಲ್ಲಿ ಆನೆಗಳ ಗಣತಿ ಬಿರುಸಿನಿಂದ ಸಾಗಿದೆ. ವಿರಾಜಪೇಟೆ, ತಿತಿಮತಿ ಹe ಫೊನ್ನಂಪೇಟೆ ಭಾಗಗಳಲ್ಲಿ ಕಾಫಿ ಎಸ್ಟೇಟ್, 480 ಕಾಡು ಆಗ ದೇವರಕಾಡುಗಳಲ್ಲಿ ಮೂರು ಕಾಡಾನೆ
ಹಿಂಡುಗಳು ಹಾಗೂ ಎರಡು ಒಂಟಿ ಸಲಗಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ; ಮಡಿಕೇರಿಯ ಈ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧ

ಕುಶಾಲನಗರ ವಲಯದಲ್ಲಿ 12 ಬ್ಲಾಕ್ ರಚಿಸಲಾಗಿದ್ದು, ಒಂದೊಂದು ಬ್ಲಾಕ್‌ನಲ್ಲೂ ಕನಿಷ್ಠ 3-4 ಜನರು ಗಣತಿ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ವಲಯ ಅರಣ್ಯಾಧಿಕಾರಿ ಶಿವರಾಂ ತಿಳಿಸಿದರು.

ವಿರಾಜಪೇಟೆ ವಿಭಾಗದಲ್ಲಿ 39 ಬೀಟ್‌ಗಳಿದ್ದು, ಪ್ರತಿ ಬೀಟ್‌ನಲ್ಲೂ ಕನಿಷ್ಠ ಮೂರು ಮಂದಿ ಭಾಗಿಯಾಗಿದ್ದಾರೆ ಎಂದು ವಿರಾಜಪೇಟೆ ವಿಭಾಗದ ಡಿಸಿಎಫ್ ಶರಣ ಬಸಪ್ಪ ತಿಳಿಸಿದರು.

ಇದನ್ನೂ ಓದಿ; ಕಾಫಿನಾಡಲ್ಲಿ ಹೆಚ್ಚಾದ ದಲಿತ ಸಿಎಂ ಕೂಗು

 

ಗಳಿಕೆಯಲ್ಲಿ ಇತಿಹಾಸ ನಿರ್ಮಿಸಿದ ‘ದಿ ಕೇರಳ ಸ್ಟೋರಿ’

ದೇಶಾದ್ಯಂತ ಭಾರೀ ಚರ್ಚೆ ಹುಟ್ಟಾಕ್ಕಿರುವ ‘ದಿ ಕೇರಳ ಸ್ಟೋರಿ’ ನಿಧಾನವಾಗಿ ಸದ್ದು ಮಾಡಲು ಆರಂಭಿಸಿದೆ. ಈಗಾಗಲೇ ಕೆಲವೆಡೆ ಸಿನಿಮಾ ಪ್ರದರ್ಶನ ನಿಲ್ಲಿಸಲಾಗುತ್ತಿದೆ. ಆದರೂ ಕೂಡ ಪ್ರೇಕ್ಷಕರು ಸಿನಿಮಾ ನೋಡಲು ಮುಗಿಬೀಳುತ್ತಿದ್ದಾರೆ. ಇದು ಮತ್ತೊಂದು ‘ಕಾಶ್ಮೀರ್ ಫೈಲ್ಸ್’ ಆಗುವ ಸುಳಿವು ಸಿಗುತ್ತಿದೆ.

ಇದನ್ನೂ ಓದಿ; ಅನಾಥ ಶವದ ಪಕ್ಕದಲ್ಲಿದ್ದ ಬ್ಯಾಗಿನಲ್ಲಿ 6.65 ಲಕ್ಷ ಪತ್ತೆ

ಸುದೀಪ್ತೊ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಅದಾ ಶರ್ಮಾ, ಯೋಗಿತಾ ಬಿಹಾನಿ ಹಾಗೂ ಸೋನಿಯಾ ಬಾಲಾನಿ ಲೀಡ್ ರೋಲ್‌ಗಳಲ್ಲಿ ನಟಿಸಿದ್ದಾರೆ. ರಿಲೀಸ್‌ಗೂ ಮೊದಲೇ ಈ ಸಿನಿಮಾ ಪ್ರದರ್ಶನಕ್ಕೆ ಅವಕಾಶ ಕೊಡಬಾರದು ಎಂದು ಕೇರಳದಲ್ಲಿ ಒತ್ತಡ ಶುರುವಾಗಿತ್ತು. ಸಿನಿಮಾ ಬಿಡುಗಡೆ ವಿರೋಧಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಸಿನಿಮಾ ಬಿಡುಗಡೆಗೆ ಕೋರ್ಟ್ ಅಸ್ತು ಎಂದಿತ್ತು.

ಇದನ್ನೂ ಓದಿ; ಹಣಕ್ಕಾಗಿ ಯುವತಿಯ ಕಿಡ್ನ್ಯಾಪ್

ಮೇ 5ರಂದು ದೇಶಾದ್ಯಂತ ಬಿಡುಗಡೆಗೊಂಡ ಈ ಚಿತ್ರ ೧೦ ದಿನಗಳಲ್ಲಿ ಮೈಲುಗಲ್ಲೊಂದನ್ನು ನೆಟ್ಟಿದೆ. ಸುದೀಪ್ತೋ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ ಸಿನಿಮಾ 135 ಕೋಟಿ ರೂ. ಗಳಿಸಿದೆ. ಈ ಮೂಲಕ ಬಾಕ್ಸ್ ಆಫೀಸ್ ನಲ್ಲಿ ಯಶಸ್ವಿ ಪ್ರದರ್ಶನ ಮುಂದುವರಿಸಿದೆ. ಈ ಮೂಲಕ 2023 ರಲ್ಲಿ ಬಾಲಿವುಡ್ ನಲ್ಲಿ ಅತೀ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾಗಳಲ್ಲಿ ಎರಡನೇ ಸಿನಿಮಾವಾಗಿ ‘ದಿ ಕೇರಳ ಸ್ಟೋರಿ’ ಹೊರಹೊಮ್ಮಿದೆ.

ಕೇರಳದಲ್ಲಿ ಬಲವಂತವಾಗಿ ಯುವತಿಯರನ್ನು ಇಸ್ಲಾಂಗೆ ಮತಾಂತರ ಮಾಡಿ ಅವರನ್ನು ಭಯೋತ್ಪಾದನೆಗೆ ದೂಡಲಾಗುತ್ತಿದೆ ಎನ್ನುವ ವಿಚಾರವನ್ನಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ವ್ಯವಸ್ಥಿತ ಮತಾಂತರ ಸುತ್ತಾ ಸಿನಿಮಾ ಕಥೆ ಸುತ್ತುತ್ತದೆ. ಈ ಸಿನಿಮಾದಲ್ಲಿ ಹೇಳಿರುವುದು ಕಟ್ಟು ಕತೆ, ಇದರಿಂದ ಕೆಟ್ಟ ಸಂದೇಶ ರವಾನೆಯಾಗುತ್ತದೆ. ಹಾಗಾಗಿ ಸಿನಿಮಾ ಬಿಡುಗಡೆ ಮಾಡಲು ಅವಕಾಶ ಕೊಡಬಾರದು ಎಂದು ಕೆಲವರು ಆಗ್ರಹಿಸಿದ್ದರು. ಐಪಿಎಲ್ ಭರಾಟೆ ನಡುವೆಯೂ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರೇಕ್ಷಕರನ್ನು ಥಿಯೇಟರ್‌ಗಳಿಗೆ ಸೆಳೀತಿದೆ.

ಇದನ್ನೂ ಓದಿ; ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಇದನ್ನೂ ಓದಿ; ಮಗಳ ಮೊಬೈಲ್ ಫೋನ್ ನಿಂದಲೇ ಬಂತು 20‌ ಲಕ್ಷ ರೂ.ಗಳ ಬೇಡಿಕೆ

ಫಸ್ಟ್ ವೀಕೆಂಡ್ 35. 25 ಕೋಟಿ ರೂ. ಗಳಿಕೆ:
ಭಾರತದಲ್ಲಿ ಶುಕ್ರವಾರ 8.03 ಕೋಟಿ ರೂ. ಕಲೆಕ್ಷನ್ ಮಾಡಿದ್ದ ಸಿನಿಮಾ ಶನಿವಾರ 11.22 ಕೋಟಿ ರೂ. ಹಾಗೂ ಭಾನುವಾರ 16 ಕೋಟಿ ರೂ. ಗಳಿಕೆ ಕಂಡು ಸಂಚಲನ ಸೃಷ್ಟಿಸಿದೆ. ಒಟ್ಟಾರೆ ಫಸ್ಟ್ ವೀಕೆಂಡ್‌ನಲ್ಲಿ ಸಿನಿಮಾ 35. 25 ಕೋಟಿ ರೂ. ಬಾಚಿ ಗೆಲುವಿನ ಓಟ ಮುಂದುವರೆಸಿದೆ.

Most Popular

Recent Comments