ಕಳಸ: (ನ್ಯೂಸ್ ಮಲ್ನಾಡ್ ವರದಿ) ದೇಶಕ್ಕೆ ಆಡಳಿತ ವ್ಯವಸ್ಥೆ ಇದೆ. ಜಿಲ್ಲಾಡಳಿತ, ತಾಲೂಕು ಆಡಳಿತ, ರಾಜಕಾರಣಿಗಳು ಎಲ್ಲರೂ ಇದ್ದಾರೆ. ಆದರೆ, ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕಗ್ಗನಹಳ್ಳ ಗ್ರಾಮಕ್ಕೆ ಮಾತ್ರ ದೇಶದ ಆಡಳಿತ ವ್ಯವಸ್ಥೆ ಸತ್ತು ದಶಕಗಳೇ ಕಳೆದಿದೆ.
ಇದನ್ನೂ ಓದಿ; ಚಾರ್ಮಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಓರ್ವ ಸಾವು, ಹಿಂಬದಿ ಸವಾರನ ಸ್ಥಿತಿ ಗಂಭೀರ
ಯಾಕೆಂದರೆ, ಈ ಗ್ರಾಮಕ್ಕೆ ಓಡಾಡೋಕೆ ರಸ್ತೆಯೇ ಇಲ್ಲ, ರಸ್ತೆ ಈ ದೇಶದ ಎಷ್ಟೋ ಗ್ರಾಮಕ್ಕೆ ಇಲ್ಲ, ಇದೇನು ಮಹಾ ಅನ್ನಬೇಡಿ, ರಸ್ತೆ ಇಲ್ಲ ಅಂದ್ರೆ ಕಲ್ಲು-ಮಣ್ಣಿನ ರಸ್ತೆಯೂ ಇಲ್ಲ. ಇವ್ರಿಗೆ ಭದ್ರ ನದಿಯೇ ರಸ್ತೆ, ನದಿಯಲ್ಲಿ ಎಷ್ಟೇ ವೇಗವಾಗಿ ನೀರು ಹರಿಯುತ್ತಿದ್ದು, ಈ ಗ್ರಾಮದ ಜನ ತೆಪ್ಪದ ಮೂಲಕವೇ ಓಡಾಡಬೇಕು. ಇದು ಇಂದು-ನಿನ್ನೆಯದಲ್ಲ. ಕಳೆದ ಎರಡೂರು ದಶಕದ್ದು, ಡಿಸಿ, ರಾಜಕಾರಣಿಗಳು ಬಂದು ಈ ಗ್ರಾಮಕ್ಕೆ ದಾರಿ ಮಾಡಿಕೊಡುವಲ್ಲಿ ಸೋತಿದ್ದಾರೆ.
ಇದನ್ನೂ ಓದಿ; ಸಿಟ್ಟಿನಲ್ಲಿ ತಮ್ಮನ ಜೀವವನ್ನೇ ತೆಗೆದ ಅಣ್ಣ
ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕಗ್ಗನಹಳ್ಳ ಗ್ರಾಮದಲ್ಲಿ 50 ರಿಂದ 60 ಅಡಿ ಆಳದ ಭದ್ರಾ ನದಿ ಮೇಲೆ ಇವರು ಐದಾರು ದಶಕಗಳಿಂದ ತೇಲಿಕೊಂಡೇ ಬದುಕ್ತಿದ್ದಾರೆ. ಮಳೆಗಾಲದಲ್ಲಿ ಕಟ್ಟಿಕೊಂಡ ಸಂಕ ಕೊಚ್ಚಿ ಹೋಗಿರುತ್ತೆ. ಬೇಸಿಗೆಯಲ್ಲಿ ಮತ್ತೆ ಕಟ್ಟಿಕೊಳ್ಳಬೇಕು ಇದಂರಹ ಪರಿಸ್ಥಿತಿಯಲ್ಲಿ ಈ ಗ್ರಾಮದ ಜನರು.
ಇನ್ನು ಸತ್ತವರನ್ನು ಅಂತ್ಯ ಸಂಸ್ಕಾರ ಮಾಡುವುದಕ್ಕೆ, ಬಾಣಂತಿಯನ್ನ ಆಸ್ಪತ್ರೆಗೆ ಕೊಂಡೊಯ್ಯೋದಕ್ಕೆ, ಮಕ್ಕಳು ಶಾಲೆಗೆ ಹೋಗೋದಕ್ಕೂ ಪ್ರತಿಯೊಂದಕ್ಕೂ ಇವ್ರಿಗೆ ಮಳೆಗಾಲದಲ್ಲಿ ದೋಣಿ, ಬೇಸಿಗೆಯಲ್ಲಿ ಈ ಕಾಲುಸಂಕ ಆಸರೆಯಾಗುತ್ತವೆ. ಮಳೆಗಾಲ ಸಂಧರ್ಬದಲ್ಲಿ ಮಕ್ಕಳು ತಿಂಗಳುಗಟ್ಟಲೆ ಶಾಲೆಗೆ ಹೋಗಲ್ಲ. ಕೆಲ ಮಕ್ಕಳು ಶಾಲೆಯನ್ನೇ ಬಿಟ್ಟಿದ್ದಾರೆ ರಸ್ತೆ ಮಾಡಿ ಕೊಡ್ತೀವಿ ಅಂತ ಅಧಿಕಾರಿಗಳು-ಜನನಾಯಕರು ಬಂದಿದ್ದಾರೆ. ಬಂದ ದಾರಿಗೆ ಸುಂಕವಿಲ್ಲವೆಂಬಂತೆ ಹೋಗಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಶಾರದಾಂಬೆ ದೇಗುಲ
- ಲಾರಿಗೆ ಡಿಕ್ಕಿ ಹೊಡೆದ ಕಾರು, ನಾಲ್ವರು ಯುವಕರು ಸ್ಥಳದಲ್ಲೇ ಸಾವು
- ಸ್ನೇಹಿತರ ಜೊತೆಗೆ ಪಾರ್ಟಿಗೆ ತೆರಳಿದ್ದ ಯುವಕ ಅನುಮಾನಾಸ್ಪದವಾಗಿ ಸಾವು
ರಾಜ್ಯದಲ್ಲಿ ಪೂರ್ಣ ಬಹುಮತದ ಸ್ಪಷ್ಟ ಸರ್ಕಾರವಿದೆ. ಶಾಸಕರು ಆಯ್ಕೆಯಾಗಿದ್ದಾರೆ. ಇನ್ನಾದ್ರು, ಸರ್ಕಾರ, ಜನನಾಯಕರು, ಅಧಿಕಾರಿಗಳು ಇತ್ತ ಗಮನ ಹರಿಸಿ ಮೂಲಭೂತ ಸೌಲಭ್ಯವನ್ನ ಕಲ್ಪಿಸುತ್ತಾರ ಕಾದು ನೋಡಬೇಕು.
ಬಾರ್ ಕ್ಯಾಷಿಯರ್ ನ ಬರ್ಬರ ಕೊಲೆ
ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಬಾರ್ ನ ಕ್ಯಾಷಿಯರ್ ನನ್ನು ಡ್ರ‍್ಯಾಗರ್ ನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಚಿನ್ ಕುಮಾರ್ (27) ಕೊಲೆಯಾದ ವ್ಯಕ್ತಿ.
ಇದನ್ನೂ ಓದಿ; ತರೀಕೆರೆ ಶಾಸಕರ ಅಭಿನಂದನಾ ಸಮಾರಂಭದಲ್ಲೇ ವ್ಯಕ್ತಿಯ ಬರ್ಬರ ಕೊಲೆ
ನಿನ್ನೆ ರಾತ್ರಿ 10.00 ಗಂಟೆಗೆ ಬಾರ್ ಗೆ ಕುಡಿಯಲು ಬಂದಿದ್ದ ಮೂರು ಜನ ಆರೋಪಿಗಳು ರಾತ್ರಿ 11.30 ಆದರೂ ಮದ್ಯ ಸೇವಿಸುತ್ತಿದ್ದರು. “11.30 ಆಗಿದೆ ಬಂದ್ ಮಾಡ್ತೇವೆ ಹೊರಡಿ” ಎಂದು ಕ್ಯಾಶಿಯರ್ ಹೇಳಿದ್ದಕ್ಕೆ ಮೂವರು ಖ್ಯಾತೆ ತೆಗೆದಿದ್ದಾರೆ.
“ನಮ್ದು ಇನ್ನು ಕುಡಿದು ಮುಗಿದಿಲ್ಲ, ನಾವು ಹೋಗಲ್ಲ ಏನ್ ಮಾಡ್ತೀಯಾ” ಅಂತಾ ಆರೋಪಿಗಳು ಗಲಾಟೆ ಮಾಡಿ ಯುವಕನ ಎದೆಗೆ ಡ್ರ‍್ಯಾಗರ್ ನಿಂದ ಚುಚ್ಚಿದ್ದಾರೆ. ಇದೆ ವೇಳೆ 112 ವಾಹನ ಕೂಡ ಬಂದಿದ್ದು, ಪೊಲೀಸರ ಎದುರೆ ಜಗಳ ನಡೆದು ಕೊಲೆಯಾಗಿದೆ. ನಿರಂಜನ, ಸತೀಶ, ಅಶೋಕನಾಯ್ಕ ಕೊಲೆ ಮಾಡಿದ ಆರೋಪಿಗಳು ಎಂದು ಗುರುತಿಸಲಾಗಿದೆ.
ಇದನ್ನೂ ಓದಿ; ಡ್ರೈವಿಂಗ್ ಸ್ಕೂಲ್ ಕುಮಾರಣ್ಣ ಇನ್ನಿಲ್ಲ, ಅನಾರೋಗ್ಯ ಕಾರಣದಿಂದ ನಿಧನ
ಇನ್ನು ಮೃತ ಸಚಿನ್ ಗೆ ಆಯನೂರು ಪ್ರಾಥಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡುವ ಮೊದಲೇ ಸಚಿನ್ ಸಾವನ್ನಪ್ಪಿದ್ದಾನೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ; ಪೈಪ್ ಲೈನ್ ದುರಸ್ತಿ ಕಾಮಗಾರಿಯಿಂದ ತೊಂದರೆ: ಸ್ಥಳೀಯರ ಪ್ರತಿಭಟನೆ