Sunday, September 24, 2023
Homeಮಲೆನಾಡುಚಿಕ್ಕಮಗಳೂರುತರೀಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಗೆ ಬಂಡಾಯದ ಬಿಸಿ

ತರೀಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಗೆ ಬಂಡಾಯದ ಬಿಸಿ

ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ದಿನಗಣನೆ ಪ್ರಾರಂಭವಾಗಿದ್ದು, ಎಲ್ಲಾ ಪಕ್ಷಗಳಲ್ಲೂ ಬಂಡಯಾದ ಬಿಸಿ ಮುಟ್ಟಿದೆ. ಇದೀಗ ತರೀಕೆರೆ ಕೈ ಅಭ್ಯರ್ಥಿ ವಿರುದ್ಧ ಆಕಾಂಕ್ಷಿಗಳು ಬಂಡಾಯದ ಬಾವುಟ ಹಾರಿಸಿದ್ದಾರೆ

ಇದನ್ನೂ ಓದಿ; ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ

ಇದನ್ನೂ ಓದಿ; ವಿವಿಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಮನೆ ಕಳ್ಳತನದ ಆರೋಪಿ ಬಂಧನ

ರಾಜ್ಯ ವಿಧಾನಸಭಾ ಚುನಾವಣೆಗೆ ಈ ಬಾರಿ ತರೀಕೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೇಸ್ ಟಿಕೆಟ್ ಆಕಾಂಕ್ಷಿಯಾಗಿ ಜಿ ಹೆಚ್ ಶ್ರೀನಿವಾಸ್ ಗೆ ನೀಡಿತ್ತು. ಈ ಹಿನ್ನಲೆಯಲ್ಲಿ ಗೋಪಿಕೃಷ್ಣ ಸೇರಿದಂತೆ 10 ಮಂದಿ ಟಿಕೆಟ್ ಆಕಾಂಕ್ಷಿಗಳಿಗೆ ನಿರಾಸೆಯಾದ ಕಾರಣ ಬೆಂಬಲಿಗರ ಜೊತೆ ಸೇರಿ ಸಬೆ ನಡೆಸಿದ್ದಾರೆ. ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಅಜ್ಜಂಪುರ ತಾಲೂಕಿನ ಗಡಿಹಳ್ಳಿಯಲ್ಲಿ 10 ಮಂದಿ ಅಕಾಂಕ್ಷಿಗಳೊಂದಿಗೆ ಎಸ್ ಎಮ್ ನಾಗರಾಜ್, ಟಿ ಹರಚ್ ಶಿವಶಂಕರಪ್ಪ ನೇತೃತ್ವದಲ್ಲಿ ಸಬೆ ನಡೆಸಿದರು. ಇನ್ನು ಈ ಬಾರಿ ಗೋಪಿಕೃಷ್ಣ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸಾದ್ಯತೆ ಇದೆ ಎನ್ನುವ ಮಾತು ಕೇಳಿ ಬರುತ್ತಿದೆ. ಹಲವಾರು ಜನ ಮುಖಂಡರು ಸಾವಿರಾರು ಜನ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದು ಗೋಪಿಕೃಷ್ಣಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ದೋರಾನಾಳು ಪರಮೇಶ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ದಿಸುವ ಸಾದ್ಯತೆ;

ಲಿಂಗಾಯಿತ ನಾಯಕ ದೋರನಾಳು ಪರಮೇಶ್ ಕೂಡ ತರೀಕೆರೆ ಕಾಂಗ್ರೆಸ್ ಟಿಕೆಟ್ ನ ಪ್ರಭಲ ಆಕಾಂಕ್ಷಿಯಾಗಿದ್ದರು. ದೋರನಾಳು ಪರಮೇಶ್ ಗೆ ಟಿಕೆಟ್ ನೀಡುವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೈರ್ ಸುಟ್ಟು ಕೈ ಹೈಕಮಾಂಡ್ ಗೆ ಆಗ್ರಹಿಸಿದ್ದರು. ಆದರೆ ಅಂತಿಮವಾಗಿ ಕಾಂಗ್ರೆಸ್ ಶ್ರೀನಿವಾಸ್ ಗೆ ಟಿಕೆಟ್ ಘೋಷಣೆ ಮಾಡಿತ್ತು. ಇದರಿಂದ ಕೆರಳಿದ ದೋರನಾಳು ಪರಮೇಶ್ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ. ಒಂದುವೇಳೆ ಇಬ್ಬರು ಬಂಡಾಯ ನಿಂತಲ್ಲಿ ಮಡಿವಾಳ ಸಮುದಾಯದ ಗೋಪಿಕೃಷ್ಣ, ಲಿಂಗಾಯಿತ ಸಮುದಾಯದ ಪರಮೇಶ್ ಬಂಡಾಯ ಕಾಂಗ್ರೆಸ್ ನ ಮತಗಳಿಗೆ ಪ್ರಭಾವ ಬೀರುವ ಸಾಧ್ಯತೆಗಳಿವೆ.

ಬಾಳೆಬರೆ ಘಾಟಿ; ವಾಹನ ಸಂಚಾರ ಆರಂಭ

ಶಿವಮೊಗ್ಗ: ಕರಾವಳಿ ಹಾಗೂ ಮಲೆನಾಡನ್ನು ಬೆಸೆಯುವ ಬಾಳೆಬರೆ (ಹುಲಿಕಲ್‌) ಘಾಟಿಯ ಕಾಂಕ್ರಿಟೀಕರಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಶನಿವಾರ ರಾತ್ರಿಯಿಂದ ವಾಹನ ಸಂಚಾರ ಮತ್ತೆ ಆರಂಭಗೊಂಡಿದೆ.

ಇದನ್ನೂ ಓದಿ; ಶಾಸಕ ಸಿ. ಟಿ ರವಿ ಆಸ್ಪತ್ರೆಗೆ ದಾಖಲು.. ಪತ್ನಿ ಪಲ್ಲವಿ ಸಿಟಿ ರವಿ ಕಣ್ಣೀರು!

ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ, ಚರಂಡಿ ಮತ್ತಿತರ ಕಾಮಗಾರಿಗಳಾಗಿ ಫೆ.5ರಿಂದ ಎ. 5ರ ವರೆಗೆ ಈ ಘಾಟಿಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು. ಆ ಬಳಿಕ ಎ. 5ರಂದು ಕಾಮಗಾರಿ ಪೂರ್ಣಗೊಳ್ಳದ ಕಾರಣ ಮತ್ತೆ 10 ದಿನಗಳ ವರೆಗೆ ಸಂಚಾರ ನಿಷೇಧಿಸಲಾಗಿತ್ತು. ಈಗ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

3.5 ಕಿ.ಮೀ. ಕಾಮಗಾರಿ:

ಕುಂದಾಪುರ – ತೀರ್ಥಹಳ್ಳಿ ರಾಜ್ಯ ಹೆದ್ದಾರಿ ಹಾದುಹೋಗುವ ಬಾಳೆಬರೆ ಘಾಟಿಯ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ 3 ಕೋಟಿ.ರೂ. ವೆಚ್ಚದಲ್ಲಿ ಅಂದಾಜು 1 ಕಿ.ಮೀ. ಹಾಗೂ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ 10 ಕೋಟಿ.ರೂ. ವೆಚ್ಚದಲ್ಲಿ 2.5 ಕಿ.ಮೀ. ಸೇರಿದಂತೆ ಒಟ್ಟು 3.5 ಕಿ.ಮೀ. ದೂರದವರೆಗೆ ರಸ್ತೆ ಅಗಲ, ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ ನಿರ್ಮಾಣ ಕಾರ್ಯ ನಡೆದಿದೆ.

3.5 ಕಿ.ಮೀ. ಅಭಿವೃದ್ಧಿ ಬಾಕಿ:
ಬಾಳೆಬರೆ ಘಾಟಿಯು ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆ ಸೇರಿ ಹುಲಿಕಲ್‌ ಚೆಕ್‌ ಪೋಸ್ಟ್‌ನಿಂದ ಹೊಸಂಗಡಿಯ ಘಾಟಿಯ ಬುಡದ ವರೆಗೆ 14.5 ಕಿ.ಮೀ. ದೂರವಿದೆ. ಶಿವಮೊಗ್ಗ ಜಿಲ್ಲೆಯ 8 ಕಿ.ಮೀ. ಪೈಕಿ ಈ ಹಿಂದೆ ಸ್ವಲ್ಪ ಕಾಂಕ್ರಿಟೀಕರಣ ಆಗಿದ್ದು, ಈಗ ಬಾಕಿಯಿದ್ದ 2.5 ಕಿ.ಮೀ.ನೊಂದಿಗೆ ಕಾಂಕ್ರಿಟೀಕರಣಗೊಂಡಿದೆ. ಉಡುಪಿ ಜಿಲ್ಲೆಯ 6.5 ಕಿ.ಮೀ. ಘಾಟಿಯ ಪೈಕಿ ಈ ಹಿಂದೆ 2 ಕಿ.ಮೀ., ಈಗ 1 ಕಿ.ಮೀ. ಸೇರಿದಂತೆ ಒಟ್ಟು 3 ಕಿ.ಮೀ. ಕಾಂಕ್ರಿಟೀಕರಣಗೊಂಡಂತಾಗಿದೆ. ಇನ್ನು ಜಿಲ್ಲೆಯ ವ್ಯಾಪ್ತಿಯಲ್ಲಿ 3.5 ಕಿ.ಮೀ. ಘಾಟಿ ರಸ್ತೆ ಕಾಂಕ್ರಿಟೀಕರಣ ಬಾಕಿ ಇದೆ.

ಇದನ್ನೂ ಓದಿ; ಒಳಮೀಸಲಾತಿ ಕಿಚ್ಚು: ತರ್ಲಘಟ್ಟ ತಾಂಡಾದಲ್ಲಿ ವಿಜಯೇಂದ್ರಗೆ ಪ್ರತಿಭಟನೆಯ ಸ್ವಾಗತ

Most Popular

Recent Comments