Deepika scholarship: ಅಜೀಂ ಪ್ರೇಮ್‌ಜಿ ಸ್ಕಾಲರ್‌ಶಿಪ್ ದೀಪಿಕಾ ವಿದ್ಯಾರ್ಥಿವೇತನಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರ ಮತ್ತು ಅಜೀಂ ಪ್ರೇಮ್‌ಜಿ ಫೌಂಡೇಶನ್ ಸೆಪ್ಟೆಂಬರ್ 2025 ರಲ್ಲಿ ದೀಪಿಕಾ ವಿದ್ಯಾರ್ಥಿವೇತನವನ್ನು ಪ್ರಾರಂಭಿಸಿದ್ದು, ಈಗ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿನಿಯರಿಂದ ಒಂದು ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಲಾಗಿದೆ.
ಈ ವಿದ್ಯಾರ್ಥಿವೇತನ ನೀಡಲು ಮೂಲ ಉದ್ದೇಶ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 10 ಮತ್ತು 12 ನೇ ತರಗತಿಯ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣವನ್ನು ದೊರೆಕಿಸಲು ಸಹಾಯ ಮಾಡುವುದಾಗಿದೆ. ಇಲಾಖೆ ಮತ್ತು ಎಪಿಎಫ್ ಜನವರಿ 1, 2026 ರಿಂದ ಎರಡನೇ ಬಾರಿ ಅರ್ಜಿ ಆಹ್ವಾನಿಸಲಾಗಿದೆ. ಇದನ್ನು ಜನವರಿ 31 ರವರೆಗೆ ವಿಸ್ತರಿಸಲಾಗಿದ್ದು, ಎರಡನೇ ಬಾರಿಗೂ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸಿದ್ದೇವೆ. ಇದನ್ನುಮೊದಲ ಬಾರಿಗೆ ರಾಜ್ಯದಲ್ಲಿ ಪ್ರಾರಂಭಿಸಲಾಗುತ್ತಿದೆ. ಇದು ಸುಮಾರು 37,000 ವಿದ್ಯಾರ್ಥಿನಿಯರನ್ನು ಬೆಂಬಲಿಸುವ ಉದ್ದೇಶವನ್ನು ಹೊಂದಿದೆ. ನಮ್ಮ ಇಲಾಖೆಯು ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಜನವರಿ 31, 2026 ರವರೆಗೆ ವಿಸ್ತರಿಸಿದೆ.
ಇದನ್ನೂ ಓದಿ: ಆಧಾರ್ ಸೇವಾ ಕೇಂದ್ರದಲ್ಲಿ ಜಾಬ್, ಅರ್ಜಿ ಆಹ್ವಾನ
ಈ ವಿದ್ಯಾರ್ಥಿವೇತನ ಪ್ರಮುಖವಾಗಿ ಸರ್ಕಾರಿ ಶಾಲೆಗಳು, ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಮಾತ್ರ ಸೀಮಿತವಾಗಿದೆ. ಅವರು ಮೊದಲ ಬಾರಿಗೆ ಪದವಿ ಪಡೆಯುತ್ತಿರಬೇಕು ವಿದ್ಯಾರ್ಥಿವೇತನದ ವಿವರಗಳ ಪ್ರಕಾರ, ಆಯ್ಕೆಯಾದ ವಿದ್ಯಾರ್ಥಿಗಳು ತಮ್ಮ ಕೋರ್ಸ್‌ನ ಸಂಪೂರ್ಣ ಅವಧಿಗೆ ವರ್ಷಕ್ಕೆ 30,000 ರೂ.ಗಳನ್ನು ಪಡೆಯುತ್ತಾರೆ.
ಅರ್ಹ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ 30,000 ರೂಗಳನ್ನು ವಿದ್ಯಾರ್ಥಿ ವೇತನ ವಿತರಣೆ ಮಾಡಲಾಗುತ್ತದೆ. ಪದವಿ ಅವಧಿ (3 ವರ್ಷ) ದಲ್ಲಿ ಒಟ್ಟು 90,000 ಹಣ ಸಹಾಯವಾಗಿ ನೀಡಲಾಗುವುದು. ಪ್ರತಿ ವರ್ಷ 2 ಕಂತುಗಳಲ್ಲಿ 15,000+15,000 ರಂತೆ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.ಇದು ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ನೀಡುವ ಗುರಿಯನ್ನು ಹೊಂದಿದ್ದರೂ, ಉನ್ನತ ಶಿಕ್ಷಣದಲ್ಲಿ ಒಟ್ಟು ದಾಖಲಾತಿ ಅನುಪಾತ ಹೆಚ್ಚಿಸಲು ಸಹ ಸಹಾಯ ಮಾಡುತ್ತದೆ.
ಶೈಕ್ಷಣಿಕ ಅರ್ಹತೆ:
* 10ನೇ ಮತ್ತು 12ನೇ ತರಗತಿಯನ್ನು ಸರ್ಕಾರಿ ಶಾಲೆಯಿಂದ ಪೂರ್ಣಗೊಳಿಸಿರಬೇಕು.
* ಮಾನ್ಯತೆ ಪಡೆದ ಸರ್ಕಾರಿ ಅಥವಾ ಖಾಸಗಿ ಕಾಲೇಜಿನಲ್ಲಿ ಪದವಿ ಕೋರ್ಸ್‌ನ ಮೊದಲ ವರ್ಷಕ್ಕೆ ಪ್ರವೇಶ ಪಡೆದಿರಬೇಕು.
ಇದನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ
ಬೇಕಾಗುವ ದಾಖಲಾತಿಗಳು:
* ವಿದ್ಯಾರ್ಥಿನಿಯರ ಭಾವಚಿತ್ರ ಮತ್ತು ಸಹಿ(Student’s photo and signature)
* ಆಧಾರ್ ಕಾರ್ಡ್(Aadhaar card)
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ(Caste and income certificate)
* 10ನೇ ತರಗತಿ ಮಾರ್ಕ್ಸ್ ಕಾರ್ಡ್(10th class mark card)
* 12ನೇ ತರಗತಿ ಮಾರ್ಕ್ಸ್ ಕಾರ್ಡ್(12th class Marks Card)
* ಬ್ಯಾಂಕ್ ಪಾಸ್ ಬುಕ್(Bank pass book)
* ಕಾಲೇಜು ಶುಲ್ಕ ಪಾವತಿಸಿದ ರಶೀದಿ(Receipt of payment of college fees)

Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.
ಇತ್ತೀಚಿನ ಜನಪ್ರಿಯ ಸುದ್ದಿಗಳು (Deepika Scholarship:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





