Dinesh Gundu Rao: ಮಂಗನ ಕಾಯಿಲೆಗೆ ಹೊಸ ಲಸಿಕೆ ಶೀಘ್ರ

Dinesh Gundu Rao: ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ಕುರಿತು ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದ್ದು, ವ್ಯಾಕ್ಸಿನ್ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ ಸೂಚಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ

ಉಡುಪಿಯಲ್ಲಿ ಇಂದು ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಆರೋಗ್ಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಗಾಲ ಆರಂಭ ಮತ್ತು ಅಂತ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಳವಾಗುತ್ತದೆ. ಮಾರ್ಚ್ ವರೆಗೆ ಜನ ಬಹಳ ಎಚ್ಚರಿಕೆಯಿಂದ ಇರಬೇಕು. ಲಕ್ಷಣಗಳು ಬಂದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಲು ಮುಂದಾಗಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಮಂಗನ ಕಾಯಿಲೆಗೆ ಎಬಿಎಆರ್ ಕೆ ಫಂಡ್ ನಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ಈಗಾಗಲೇ ಸೂಚಿಸಲಾಗಿದೆ. ಅಲ್ಲದೇ ಕೆಎಫ್‌ಡಿ ಪಾಸಿಟಿವ್ ಬಂದವರನ್ನು ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ; ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ

ಸಾವಿಗೀಡಾದ ಕುಟುಂಬಗಳಿಗೆ ಪರಿಹಾರ ನೀಡುವ ಚರ್ಚೆ:
ರಾಜ್ಯದಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಒಟ್ಟು 70 ಕೆ.ಎಫ್.ಡಿ ಪ್ರಕರಣ ದಾಖಲಾಗಿವೆ. ಹಲವರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 20 ಸಕ್ರಿಯ ಪ್ರಕರಣಗಳು ಇದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿಗೀಡಾದ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡುವುದಾಗಿ (Dinesh Gundu Rao: ) ಹೇಳಿದರು.

ಇದನ್ನೂ ಓದಿ; ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?

ಹೈದರಾಬಾದ್ ನಲ್ಲಿ ವ್ಯಾಕ್ಸಿನ್ ತಯಾರಿಕೆ:
ಹಿಂದೆ ಇರುವ ವ್ಯಾಕ್ಸಿನ್ ಬಳಕೆ ಮಾಡಬೇಡಿ ಎಂದು ಸೂಚಿಸಲಾಗಿದ್ದು, ಹೊಸ ವ್ಯಾಕ್ಸಿನ್ ಬಗ್ಗೆ ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದೆ. ಐಸಿಎಂಆರ್ ನವರು ವ್ಯಾಕ್ಸಿನ್ ತಯಾರಿಕೆಗೆ ಒಪ್ಪಿಗೆ ನೀಡಿದ್ದು, ಹೈದರಾಬಾದ್ ಸಂಸ್ಥೆ ಸಂಶೋಧನೆ ಮಾಡಿ ವ್ಯಾಕ್ಸಿನ್ ತಯಾರಿಸುತ್ತದೆ. ಮುಂದಿನ ವರ್ಷಕ್ಕೆ ಮಂಗನ ಕಾಯಿಲೆಗೆ ಒಳ್ಳೆಯ ಚುಚ್ಚುಮದ್ದು ಸಿಗಬಹುದು ಎಂದು ಭರವಸೆ ನೀಡಿದರು.

ಇದನ್ನೂ ಓದಿ; ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್

ವಿಡಿಎಲ್ ಶಿವಮೊಗ್ಗ ಮತ್ತು ಎಮ್.ಐ.ವಿ ಮಣಿಪಾಲದಲ್ಲಿನ ಪ್ರಯೋಗಾಲಯಗಳನ್ನು ಕೆ.ಎಫ್.ಡಿ ಪರೀಕ್ಷೆಗೆ ಗುರುತಿಸಲಾಗಿದ್ದು, ಶೀಘ್ರವಾಗಿ ಮಾದರಿಗಳನ್ನು ಸಂಸ್ಕರಿಸಿ ಪರೀಕ್ಷೆ ನಡೆಸಿ ವರದಿ ನೀಡಲಾಗುತ್ತಿದೆ. ಕೆ.ಎಫ್.ಡಿ ಪಾಸಿಟಿವ್ ಪ್ರಕರಣಗಳನ್ನು ಮನೆಯಿಂದ ಆಸ್ಪತ್ರೆಗೆ ಸಾಗಿಸಲು ಮತ್ತು ಅಗತ್ಯವಿದ್ದರೆ, ಉನ್ನತ ರೆಫರಲ್ ಸೆಂಟರ್ ಸಾಗಿಸಲು ಉಚಿತ ಅಂಬುಲೆನ್ಸ್ ಸೌಲಭ್ಯ ಒದಗಿಸಿದೆ.

Dinesh Gundu Rao: ಮಂಗನ ಕಾಯಿಲೆಗೆ ಹೊಸ ಲಸಿಕೆ ಶೀಘ್ರ
Dinesh Gundu Rao: ಮಂಗನ ಕಾಯಿಲೆಗೆ ಹೊಸ ಲಸಿಕೆ ಶೀಘ್ರ

ಇದನ್ನೂ ಓದಿ; ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?

ರೋಗ ಪ್ರಸರಣಾ ಋತುವಿನಲ್ಲಿ ತಾಲೂಕು ಆಸ್ಪತ್ರೆಗಳಾದ ಜಿಸಿಎಚ್ ತೀರ್ಥಹಳ್ಳಿ, ಸಾಗರ, ಸಿದ್ದಾಪುರ ಮತ್ತು ಹೊನ್ನಾವರ ಉಪ ವಿಭಾಗೀಯ ಆಸ್ಪತ್ರೆಗಳಲ್ಲಿ ಕೆ.ಎಫ್.ಡಿ ಗೆ ಚಿಕಿತ್ಸೆ ನೀಡಲು ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ಐಸಿಯುನಲ್ಲಿ ದಾಖಲಾಗಿರುವ ರೋಗಿಗಳ ಆರೋಗ್ಯ ಸ್ಥಿತಿಗತಿಯನ್ನು ಪ್ರತಿದಿನ ಪರೀಶೀಲಿಸಲು ಟೆಲಿ-ಐಸಿಯುಸೇವೆಯನ್ನು ಕೆ.ಎಫ್.ಡಿ ಗೂ ವಿಸ್ತರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಕೈಗೊಂಡ ಕ್ರಮಗಳ ಕುರಿತು ಗುಂಡೂರಾವ್ (Dinesh Gundu Rao: ) ವಿವರಿಸಿದರು.

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ