Wednesday, April 24, 2024
Homeಮಲೆನಾಡುಚಿಕ್ಕಮಗಳೂರುಚಿಕ್ಕಮಗಳೂರು; ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅವರ ತಂದೆ ನಿಧನ

ಚಿಕ್ಕಮಗಳೂರು; ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅವರ ತಂದೆ ನಿಧನ

ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅವರ ತಂದೆ ನಾಗರಾಜು ಅವರು ನಿಧನರಾಗಿದ್ದಾರೆ.

ಇದನ್ನೂ ಓದಿ;  ಶುಭ ಕಾರ್ಯಕ್ಕೆ ಹೊರಟ್ಟಿದ್ದ ವೇಳೆ ಭೀಕರ ಅಪಘಾತ: ಓರ್ವ ಸಾವು

ಇದನ್ನೂ ಓದಿ; ರಸ್ತೆ ಅಪಘಾತ, ಫುಟ್ ಪಾತ್ ಮೇಲೆ ನಿಂತಿದ್ದ ಯುವಕ ಸಾವು

ನಿನ್ನೆ ಬೆಳಿಗ್ಗೆ(ಮೇ.18) ಆಶ್ರಯ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೆ.ಎನ್. ರಮೇಶ್ ಅವರ ತಂದೆ ನಾಗರಾಜು ಅವರಿಗೆ 91 ವರ್ಷ ವಯಸ್ಸಾಗಿತ್ತು.

ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಸೇರಿದಂತೆ ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯ ಕ್ರಿಯೆ ಬೆಂಗಳೂರಿನಲ್ಲಿ ನೇರವೇರಿತು.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಇನ್ನು ಚಿಕ್ಕಮಗಳೂರು ಕ್ಷೇತ್ರದ ಹೆಚ್.ಡಿ ತಮ್ಮಯ್ಯ, ಮಾಜಿ ಶಾಸಕ ಶಾಸಕ ಸಿ.ಟಿ ರವಿ, ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಅಪರ ಜಿಲ್ಲಾಧಿಕಾರಿ ಬಿ.ಆರ್. ರೂಪ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ದೇವೇಂದ್ರ, ಗೌರವಾಧ್ಯಕ್ಷ ಓಂಕಾರ ಸ್ವಾಮಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಕಛೇರಿಯ ಸಿಬ್ಬಂದಿಗಳು ಭೇಟಿ ನೀಡಿ ಪ್ರಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಇದನ್ನೂ ಓದಿ; ಕಾಂಗ್ರೆಸ್ ಗೆದ್ದಿದ್ದಕ್ಕೆ ರಸ್ತೆಯಲ್ಲಿ ಪಟಾಕಿ ಸಿಡಿಸಿದ ದಲಿತ ಯುವಕನಿಗೆ ಹಲ್ಲೆ

ಗಳಿಕೆಯಲ್ಲಿ ಇತಿಹಾಸ ನಿರ್ಮಿಸಿದ ‘ದಿ ಕೇರಳ ಸ್ಟೋರಿ’

ದೇಶಾದ್ಯಂತ ಭಾರೀ ಚರ್ಚೆ ಹುಟ್ಟಾಕ್ಕಿರುವ ‘ದಿ ಕೇರಳ ಸ್ಟೋರಿ’ ನಿಧಾನವಾಗಿ ಸದ್ದು ಮಾಡಲು ಆರಂಭಿಸಿದೆ. ಈಗಾಗಲೇ ಕೆಲವೆಡೆ ಸಿನಿಮಾ ಪ್ರದರ್ಶನ ನಿಲ್ಲಿಸಲಾಗುತ್ತಿದೆ. ಆದರೂ ಕೂಡ ಪ್ರೇಕ್ಷಕರು ಸಿನಿಮಾ ನೋಡಲು ಮುಗಿಬೀಳುತ್ತಿದ್ದಾರೆ. ಇದು ಮತ್ತೊಂದು ‘ಕಾಶ್ಮೀರ್ ಫೈಲ್ಸ್’ ಆಗುವ ಸುಳಿವು ಸಿಗುತ್ತಿದೆ.

ಇದನ್ನೂ ಓದಿ; ಅನಾಥ ಶವದ ಪಕ್ಕದಲ್ಲಿದ್ದ ಬ್ಯಾಗಿನಲ್ಲಿ 6.65 ಲಕ್ಷ ಪತ್ತೆ

ಸುದೀಪ್ತೊ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಅದಾ ಶರ್ಮಾ, ಯೋಗಿತಾ ಬಿಹಾನಿ ಹಾಗೂ ಸೋನಿಯಾ ಬಾಲಾನಿ ಲೀಡ್ ರೋಲ್‌ಗಳಲ್ಲಿ ನಟಿಸಿದ್ದಾರೆ. ರಿಲೀಸ್‌ಗೂ ಮೊದಲೇ ಈ ಸಿನಿಮಾ ಪ್ರದರ್ಶನಕ್ಕೆ ಅವಕಾಶ ಕೊಡಬಾರದು ಎಂದು ಕೇರಳದಲ್ಲಿ ಒತ್ತಡ ಶುರುವಾಗಿತ್ತು. ಸಿನಿಮಾ ಬಿಡುಗಡೆ ವಿರೋಧಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಸಿನಿಮಾ ಬಿಡುಗಡೆಗೆ ಕೋರ್ಟ್ ಅಸ್ತು ಎಂದಿತ್ತು.

ಇದನ್ನೂ ಓದಿ; ಹಣಕ್ಕಾಗಿ ಯುವತಿಯ ಕಿಡ್ನ್ಯಾಪ್

ಮೇ 5ರಂದು ದೇಶಾದ್ಯಂತ ಬಿಡುಗಡೆಗೊಂಡ ಈ ಚಿತ್ರ ೧೦ ದಿನಗಳಲ್ಲಿ ಮೈಲುಗಲ್ಲೊಂದನ್ನು ನೆಟ್ಟಿದೆ. ಸುದೀಪ್ತೋ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ ಸಿನಿಮಾ 135 ಕೋಟಿ ರೂ. ಗಳಿಸಿದೆ. ಈ ಮೂಲಕ ಬಾಕ್ಸ್ ಆಫೀಸ್ ನಲ್ಲಿ ಯಶಸ್ವಿ ಪ್ರದರ್ಶನ ಮುಂದುವರಿಸಿದೆ. ಈ ಮೂಲಕ 2023 ರಲ್ಲಿ ಬಾಲಿವುಡ್ ನಲ್ಲಿ ಅತೀ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾಗಳಲ್ಲಿ ಎರಡನೇ ಸಿನಿಮಾವಾಗಿ ‘ದಿ ಕೇರಳ ಸ್ಟೋರಿ’ ಹೊರಹೊಮ್ಮಿದೆ.

ಕೇರಳದಲ್ಲಿ ಬಲವಂತವಾಗಿ ಯುವತಿಯರನ್ನು ಇಸ್ಲಾಂಗೆ ಮತಾಂತರ ಮಾಡಿ ಅವರನ್ನು ಭಯೋತ್ಪಾದನೆಗೆ ದೂಡಲಾಗುತ್ತಿದೆ ಎನ್ನುವ ವಿಚಾರವನ್ನಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ವ್ಯವಸ್ಥಿತ ಮತಾಂತರ ಸುತ್ತಾ ಸಿನಿಮಾ ಕಥೆ ಸುತ್ತುತ್ತದೆ. ಈ ಸಿನಿಮಾದಲ್ಲಿ ಹೇಳಿರುವುದು ಕಟ್ಟು ಕತೆ, ಇದರಿಂದ ಕೆಟ್ಟ ಸಂದೇಶ ರವಾನೆಯಾಗುತ್ತದೆ. ಹಾಗಾಗಿ ಸಿನಿಮಾ ಬಿಡುಗಡೆ ಮಾಡಲು ಅವಕಾಶ ಕೊಡಬಾರದು ಎಂದು ಕೆಲವರು ಆಗ್ರಹಿಸಿದ್ದರು. ಐಪಿಎಲ್ ಭರಾಟೆ ನಡುವೆಯೂ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರೇಕ್ಷಕರನ್ನು ಥಿಯೇಟರ್‌ಗಳಿಗೆ ಸೆಳೀತಿದೆ.

ಇದನ್ನೂ ಓದಿ; ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಇದನ್ನೂ ಓದಿ; ಮಗಳ ಮೊಬೈಲ್ ಫೋನ್ ನಿಂದಲೇ ಬಂತು 20‌ ಲಕ್ಷ ರೂ.ಗಳ ಬೇಡಿಕೆ

ಫಸ್ಟ್ ವೀಕೆಂಡ್ 35. 25 ಕೋಟಿ ರೂ. ಗಳಿಕೆ:
ಭಾರತದಲ್ಲಿ ಶುಕ್ರವಾರ 8.03 ಕೋಟಿ ರೂ. ಕಲೆಕ್ಷನ್ ಮಾಡಿದ್ದ ಸಿನಿಮಾ ಶನಿವಾರ 11.22 ಕೋಟಿ ರೂ. ಹಾಗೂ ಭಾನುವಾರ 16 ಕೋಟಿ ರೂ. ಗಳಿಕೆ ಕಂಡು ಸಂಚಲನ ಸೃಷ್ಟಿಸಿದೆ. ಒಟ್ಟಾರೆ ಫಸ್ಟ್ ವೀಕೆಂಡ್‌ನಲ್ಲಿ ಸಿನಿಮಾ 35. 25 ಕೋಟಿ ರೂ. ಬಾಚಿ ಗೆಲುವಿನ ಓಟ ಮುಂದುವರೆಸಿದೆ.

Most Popular

Recent Comments