(Divya Vasantha:) ಸ್ಪಾ ಮಾಲೀಕನೊಬ್ಬನಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿದ ಪ್ರಕರಣದಲ್ಲಿ ಕನ್ನಡ ಸುದ್ದಿವಾಹಿನಿ ನಿರೂಪಕಿ ದಿವ್ಯಾ ವಸಂತ (Divya Vasantha) ಅರೆಸ್ಟ್ ಆಗಿದ್ದಾರೆ.
ಇದನ್ನೂ ಓದಿ: ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು ಎಂದು ಹೇಳಿ ವೈರಲ್ ಆಗಿ, ಬ್ಲ್ಯಾಕ್‌ಮೇಲ್ ಮಾಡಿ ಹಲವು ಕಡೆ ಹಣ ಸುಲಿಗೆ ಮಾಡಿರುವ ಆರೋಪದ ಬೆನ್ನಲ್ಲೇ ಕಾಣೆಯಾಗಿದ್ದರು ದಿವ್ಯಾ ವಸಂತ. ಇದೀಗ ಜೀವನ್ ಭೀಮಾನಗರ ಪೊಲೀಸರು ತಮಿಳುನಾಡಿನಿಂದ ಕೇರಳದಲ್ಲಿ ತಲೆ ಮರೆಸಿಕೊಂಡಿದ್ದ ದಿವ್ಯಾ ವಸಂತನನ್ನು ಬಂಧಿಸಿ ಪೊಲೀಸರು ಕರೆತಂದಿದ್ದಾರೆ. ಸದ್ಯ ಇದೀಗ ಕೇಸ್ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಅನರ್ಹ BPL ರೇಷನ್ ಕಾರ್ಡ್ ರದ್ದು; ರಾಜ್ಯ ಸರ್ಕಾರ ಖಡಕ್ ಆದೇಶ..!; ನಿಮ್ಮ ಕಾರ್ಡ್ ರದ್ದಾಗಿದೆಯೇ ಚೆಕ್ ಮಾಡಿ
ಏನಿದು ಪ್ರಕರಣ?:
ದಿವ್ಯ ವಸಂತ್ ಹಾಗೂ ತಂಡ ಸೇರಿಕೊಂಡು ವ್ಯಾಟ್ಸಾಪ್ ನಲ್ಲಿ ʼಸ್ಪೈ ರಿಸರ್ಚ್ ಟೀಂ’ ಹೆಸರಿನ ಗ್ರೂಪ್ ನ್ನು ಮಾಡಿಕೊಂಡಿದ್ದರು. ಇದರಲ್ಲಿ ಹಣವುಳ್ಳ ಸಿರಿವಂತರನ್ನು ಗುರಿಯಾಗಿಸಿಕೊಂಡು ಅವರನ್ನು ಬ್ಲ್ಯಾಕ್ ಮೇಲ್ ಅವರಿಂದ ಸುಲಿಗೆ ಮಾಡುವುದು ಹೇಗೆನ್ನುವ ಯೋಜನೆಯ ಬಗ್ಗೆ ಚರ್ಚೆ ನಡೆಯುತ್ತಿತ್ತು.
ಇಂದಿರಾನಗರದ ‘ಸ್ಪಾ’ ವೊಂದಕ್ಕೆ ವೆಂಕಟೇಶ್ ಹಾಗೂ ದಿವ್ಯಾ ತಂಡ ಈಶಾನ್ಯ ರಾಜ್ಯದ ಯುವತಿಯನ್ನು ಕೆಲಸಕ್ಕೆ ಸೇರಿಸಿದ್ದರು. ಈ ಸ್ಪಾಗೆ ಗ್ರಾಹಕನಂತೆ ದಿವ್ಯ ಸಹೋದರ ಸಂದೇಶ ರಹಸ್ಯ ಕ್ಯಾಮೆರಾವೊಂದನ್ನು ಹಿಡಿದುಕೊಂಡು ಮಸಾಜ್ ಗೆಂದು ಹೋಗಿದ್ದ. ಆ ಬಳಿಕ ಅದೇ ಯುವತಿಯೊಂದಿಗೆ ಸಲುಗೆಯಿಂದ ಇರುವ ವಿಡಿಯೋವೊಂದನ್ನು ರೆಕಾರ್ಡ್ ಮಾಡಿದ್ದ. ಇದನ್ನು ಸ್ಪಾ ಮಾಲೀಕನಿಗೆ ಕಳುಹಿಸಿ ನಿಮ್ಮ ಸ್ಪಾದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಇದನ್ನು ಟಿವಿಯಲ್ಲಿ ಪ್ರಸಾರ ಮಾಡುತ್ತೇವೆ ಎಂದು ಬೆದರಿಸಿದ್ದರು. 15 ಲಕ್ಷ ರೂ. ಕೊಡಿ ಇಲ್ಲದಿದ್ರೆ ನೇರ ಟಿವಿಯಲ್ಲಿ ಈ ದೃಶ್ಯವನ್ನು ಪ್ರಸಾರ ಮಾಡುತ್ತೇವೆ ಎಂದು ಬೆದರಿಕೆ ಹಾಕಿ ಸುಲಿಗೆಗೆ ಯತ್ನಿಸಿದ್ದರು.
ಇದನ್ನೂ ಓದಿ: ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಇವರ ಸುಲಿಗೆಯ ಬಲೆಗೆ ಬಿದ್ದ ʼಸ್ಪಾʼ ಮಾಲೀಕನಿಂದ ಗ್ಯಾಂಗ್ 1 ಲಕ್ಷ ರೂ. ಸುಲಿಗೆ ಮಾಡಿದ್ದು, ಈ ಸಂಬಂಧ ಸ್ಪಾ ಮಾಲೀಕ ದೂರಿನ ಮೇರೆಗೆ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡು ವೆಂಕಟೇಶ್ ಹಾಗೂ ಸಂದೇಶ್ ಅವರನ್ನು ಬಂಧಿಸಿದ್ದರು.
ಇದಾದ ಬಳಿಕ ಪ್ರಕರಣದ ಮತ್ತೊಂದು ಆರೋಪಿ ದಿವ್ಯ ವಸಂತ್ ಅವರನ್ನು ಪೊಲೀಸರು ಹುಡುಕಲು ಶುರು ಮಾಡಿದ್ದರು. ಆದರೆ ದಿವ್ಯ ಪರಾರಿ ಆಗಿದ್ದರು. ತಮಿಳುನಾಡಿನಿಂದ, ಕೇರಳಕ್ಕೆ ಹೋಗಿರುವ ಮಾಹಿತಿ ಪಡೆದ ಪೊಲೀಸರು ಕೇರಳದಲ್ಲಿ ದಿವ್ಯರನ್ನು ಬಂಧಿಸಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
- ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
- ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
- ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ






