DJ: ಡಿಜೆ ಬಳಕೆ ನಿಷೇಧ: ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್

(DJ:) ಗೌರಿ–ಗಣೇಶ ಹಬ್ಬ, ಈದ್ ಮಿಲಾದ್‌ ಮೆರವಣಿಗೆ ಮತ್ತು ಸಾರ್ವಜನಿಕ ಸಮಾರಂಭಗಳಲ್ಲಿ ಡಿಜೆ ಹಾಗೂ ಸೌಂಡ್ ಸಿಸ್ಟಮ್‌ ಬಳಕೆ ನಿಷೇಧಿಸಿ ಬೆಂಗಳೂರು ಪೊಲೀಸರು ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.


ನ್ನೂ ಓದಿ: ರೇಷನ್‌ ಕಾರ್ಡ್‌ ಹೊಂದಿದ್ರೆ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಿ


ಬೆಂಗಳೂರು ಪಶ್ಚಿಮ ವಿಭಾಗದ ಜಂಟಿ ಆಯುಕ್ತರು ಹೊರಡಿಸಿರುವ ಸುತ್ತೋಲೆಯನ್ನು ಪ್ರಶ್ನಿಸಿ, ‘ಕರ್ನಾಟಕ ಲಘು ಸಂಗೀತ ಮತ್ತು ಸಾಂಸ್ಕೃತಿಕ ಕಲಾವಿದರ ಸಂಘಟನೆ’ ಪದಾಧಿಕಾರಿ ಚಾಮರಾಜಪೇಟೆಯ ಶಂಕರ್‌ ರಿಟ್‌ ಅರ್ಜಿ ಸಲ್ಲಿಸಿದ್ದರು.


ನ್ನೂ ಓದಿ: ಗೃಹಲಕ್ಷ್ಮಿ ಬಾಕಿ ಹಣ ಈ ದಿನ ಜಮೆ!; ಇಲ್ಲಿದೆ ನೋಡಿ ಡಿಟೈಲ್ಸ್


(DJ:) ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಶನಿವಾರ ಅರ್ಜಿ ವಿಚಾರಣೆ ನಡೆಸಿ, ‘ಸಾರ್ವಜನಿಕ ಕಾರ್ಯಕ್ರಮದಲ್ಲಿ ಸೌಂಡ್ ಸಿಸ್ಟಮ್ ಮತ್ತು ಡಿಜೆ ನಿರ್ಬಂಧಿಸಿ ಬೆಂಗಳೂರು ಪೊಲೀಸರು ಹೊರಡಿಸಿರುವ ಸುತ್ತೋಲೆಯಲ್ಲಿ ಯಾವುದೇ ಲೋಪಗಳಿಲ್ಲ. ವಸತಿ ಪ್ರದೇಶದಲ್ಲಿ ಹಗಲು ವೇಳೆ 55 ಡೆಸಿಬಲ್ ಮತ್ತು ರಾತ್ರಿ ವೇಳೆ 45 ಡೆಸಿಬಲ್ ಶಬ್ಧದ ಮಟ್ಟ ನಿಗದಿಪಡಿಸಲಾಗಿದೆ. ಆದ್ದರಿಂದ, ಸಾರ್ವಜನಿಕ ಪ್ರದೇಶಗಳಲ್ಲಿ ಹೆಚ್ಚು ಸದ್ದು ಮಾಡುವ ಡಿಜೆ ಮತ್ತು ಸೌಂಡ್ ಸಿಸ್ಟಮ್‌ನ ಬಳಕೆಯನ್ನು ಒಪ್ಪಿಕೊಳ್ಳುವುದು ನ್ಯಾಯಾಲಯಕ್ಕೆ ಕಷ್ಟ ಎಂದು ನ್ಯಾಯಪೀಠ ಹೇಳಿದೆ.


ನ್ನೂ ಓದಿ:  ರಾಜ್ಯದ ಜನತೆಗೆ ಗುಡ್ ನ್ಯೂಸ್; ಭೂ ಒಡೆತನ ಸೇರಿ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ


(DJ:) ಆಕ್ಷೇಪ ಏನಿತ್ತು?:
ಶಬ್ದ ಮಾಲಿನ್ಯ ನಿಯಮಗಳು-2000ಕ್ಕೆ ಅನುಗುಣವಾಗಿ ಮಾರ್ಗದರ್ಶಿ ಸೂತ್ರ ಹೆಣೆಯುವುದನ್ನು ಬಿಟ್ಟು ಈ ರೀತಿ ವ್ಯಾಪಕ ಕಾರ್ಯಾದೇಶ ಹೊರಡಿಸಿರುವುದು ಸಾಂವಿಧಾನಿಕವಾಗಿ ಕೊಡಮಾಡಿರುವ ನಮ್ಮ ಮೂಲಭೂತ ಹಕ್ಕನ್ನು ಉಲ್ಲಂಘಿಸಿದಂತಾಗುತ್ತದೆ. ಸೌಂಡ್ ಸಿಸ್ಟಂ ಉತ್ಪಾದನೆ ಮತ್ತು ಮಾರಾಟಕ್ಕೆ ಅವಕಾಶವಿದೆ. ಆದರೆ, ಬಳಕೆಯನ್ನು ನಿರ್ಬಂಧಿಸುವುದು ಸಮಂಜಸ ಕ್ರಮವಲ್ಲ’ ಎಂದು ಅರ್ಜಿದಾರರು ಸುತ್ತೋಲೆಯನ್ನು ಆಕ್ಷೇಪಿಸಿದ್ದರು.

DJ: ಡಿಜೆ ಬಳಕೆ ನಿಷೇಧ: ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್
DJ: ಡಿಜೆ ಬಳಕೆ ನಿಷೇಧ: ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್

ನ್ನೂ ಓದಿ: ಈ ಉಚಿತ ತರಬೇತಿಗೆ ಅರ್ಜಿ ಆಹ್ವಾನ


ಇತ್ತೀಚಿನ ಜನಪ್ರಿಯ ಸುದ್ದಿಗಳು (DJ:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ