(Document Digitization) ಜನವರಿ.01 ರಿಂದ ಭೂ-ಮಂಜೂರು ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲು ಕ್ರಮವಹಿಸಲಾಗಿದೆ ಎಂದು ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ನೀಡಿದರು.
ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್
ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಬಗರ್ ಹುಕುಂ ಯೋಜನೆ ಅಡಿಯಲ್ಲಿ 1999 ರಿಂದ 2004ರ ಅವಧಿಯಲ್ಲಿ ಜಮೀನು ಮಂಜೂರು ಮಾಡಲಾಗಿದ್ದರೂ ಸಾಗುವಳಿ ಚೀಟಿ ನೀಡಿಲ್ಲ, ಕೆಲವರಿಗೆ ಸಾಗುವಳಿ ಚೀಟಿ ನೀಡಿದ್ದರೂ ಖಾತೆ ನೀಡಿಲ್ಲ. ಅಲ್ಲದೆ, ಈ ವರ್ಷ ಬಗರ್ ಹುಕುಂ ಅಡಿಯಲ್ಲಿ ಸಾವಿರಾರು ರೈತರ ಅರ್ಜಿಗಳನ್ನೇ ವಜಾ ಮಾಡಲಾಗಿದೆ. ಪರಿಣಾಮ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದರು. ಈ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಕೃಷ್ಣ ಬೈರೇಗೌಡ ರೈತರಿಗಾಗುತ್ತಿರುವ ಶೋಷಣೆಗಳನ್ನು ತಪ್ಪಿಸುವ ಸಲುವಾಗಿ ಜನವರಿ.01 ರಿಂದ ಈವರೆಗಿನ ಎಲ್ಲಾ ಭೂ-ಮಂಜೂರು ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲು ಕ್ರಮವಹಿಸಲಾಗಿದೆ ಎಂದರು.
ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್
ಈ ಹಿಂದೆ ನಮೂನೆ 50-53 ರ ಅಡಿ ಭೂ ಮಂಜೂರು ಪಡೆಯದವರೂ ಸಹ ನಕಲಿ ದಾಖಲೆ ಸೃಷ್ಟಿ ಮಾಡಿದ್ದಾರೆ. ಕೆಲವರು ದಾಖಲೆ ಬಚ್ಚಿಟ್ಟು ರೈತರಿಗೆ ಸಮಸ್ಯೆ ನೀಡುತ್ತಿದ್ದಾರೆ. ಬಗರ್ ಹುಕುಂ ಯೋಜನೆ ಅಡಿಯಲ್ಲಿ ನಿಜವಾಗಿಯೂ ಭೂ ಮಂಜೂರು ಮಾಡಿರುವವರಿಗೆ ದಾಖಲೆ ಇಲ್ಲದಂತಾಗಿದೆ. ಹೀಗಾಗಿ ಜನವರಿ 01 ರಿಂದ ಎಲ್ಲಾ ತಾಲೂಕು ಕಚೇರಿಯಲ್ಲಿ ಭೂ-ಮಂಜೂರಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸುವ ಯೋಜನೆ ರೂಪಿಸಲಾಗಿದೆ.
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಶೇ.90 ಸಹಾಯಧನ!
ಭೂ ಮಂಜೂರಾತಿ ದಾಖಲೆಗಳನ್ನು ಡಿಜಿಟಲೀಕರಿಸುವಾಗ ಹಲವು ರೈತರಿಗೆ ಸಂಬಂಧಿಸಿದ ಹಳೆಯ ದಾಖಲೆಗಳೂ ಲಭ್ಯವಾಗಲಿವೆ. ಇವುಗಳ ಆಧಾರದಲ್ಲಿ ಈ ಹಿಂದೆ ಭೂ ಮಂಜೂರಾಗಿಯೂ ಸಾಗುವಳಿ ಚೀಟಿ ಹಾಗೂ ಖಾತೆ ಪಡೆಯದ ರೈತರಿಗೆ ಸೂಕ್ತ ದಾಖಲೆಗಳನ್ನು ಒದಗಿಸಬಹುದು. ಅಲ್ಲದೆ ಮುಂದಿನ ದಿನಗಳಲ್ಲಿ ದಾಖಲೆಗಳನ್ನು ತಿದ್ದುವ ಹಾಗೂ ಬಚ್ಚಿಡುವ ಮೂಲಕ ರೈತರನ್ನು ಶೋಷಣೆಗೆ ಒಳಪಡಿಸುವಂತಹ ಕೆಲಸಗಳಿಗೆ ಶಾಶ್ವತ ಪರಿಹಾರವಾಗಲಿದೆ ಎಂದು ಸದನಕ್ಕೆ ಅವರು ಭರವಸೆ ನೀಡಿದರು.

ಇದನ್ನೂ ಓದಿ; ಹೋಂ ಗಾರ್ಡ್ ಹುದ್ದೆಗೆ ಅರ್ಜಿ ಆಹ್ವಾನ; 10th ಪಾಸ್ ಆಗಿರುವವರು ಈಗಲೇ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






