(Dog Attack:) ಬೆಂಗಳೂರು ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡ ಅಥವಾ ಸಾವನ್ನಪ್ಪಿದ ಜನರಿಗೆ ಪರಿಹಾರ ಮಾರ್ಗಸೂಚಿಗಳನ್ನು ಪರಿಷ್ಕರಿಸಿ ಕರ್ನಾಟಕ ಸರ್ಕಾರ ನವೀಕರಿಸಿದ ಆದೇಶವನ್ನು ಬಿಡುಗಡೆ ಮಾಡಿದೆ.
ಇದನ್ನೂ ಓದಿ: ಆಸ್ತಿ ಮಾಲೀಕರಿಗೆ ಜಿಬಿಎ ಗುಡ್ನ್ಯೂಸ್; ಮಧ್ಯವರ್ತಿಗಳ ಹಾವಳಿ ಸೇರಿ ಭ್ರಷ್ಟಾಚಾರಕ್ಕೂ ಬ್ರೇಕ್
ನಾಯಿ ಕಚ್ಚಿದ ಗಾಯ, ಮೂಗೇಟುಗಳು ಮತ್ತು ರಕ್ತಸ್ರಾವದ ಸಮಸ್ಯೆ, ಸೀಳುವಿಕೆ, ಇಂತಹ ಗಾಯಗಳು ಕಂಡು ಬಂದರೆ 5 ಸಾವಿರ ರೂ. ವರೆಗೆ ಪರಿಹಾರವನ್ನು ನೀಡಲಾಗುವುದು. 2023ರಲ್ಲಿ ನಾಯಿಗಳ ದಾಳಿಯಿಂದ ಗಾಯಗೊಂಡ ಅಥವಾ ಸಾವನ್ನಪ್ಪಿದವರಿಗೆ ವಿಶೇಷ ಯೋಜನೆಯನ್ನು ಮಾಡಲಾಗಿತ್ತು. ಇದೀಗ ಆ ಯೋಜನೆಯನ್ನೇ ಮುಂದುವರಿಸಲಾಗುವುದು. ಆದರೆ ಇದರಲ್ಲಿ ಕೆಲವೊಂದನ್ನು ಬದಲಾವಣೆ ಮಾಡಲಾಗಿದೆ. ಈ 5,000 ರೂ.ಗಳಲ್ಲಿ 3,500 ರೂ.ಗಳನ್ನು ನಗರಾಭಿವೃದ್ಧಿ ಇಲಾಖೆ ನೀಡುತ್ತದೆ. ಉಳಿದ 1,500 ರೂ. ಅನ್ನು ಆರೋಗ್ಯ ಇಲಾಖೆಯ ಅಡಿಯಲ್ಲಿ ಬರುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ಗೆ ವರ್ಗಾಯಿಸಲಾಗುತ್ತದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.
ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ನಾಯಿ ಕಚ್ಚಿದ ವ್ಯಕ್ತಿಗೆ ತಕ್ಷಣದ ವೈದ್ಯಕೀಯ ಆರೈಕೆ ಸಿಗುವಂತೆ ನೋಡಿಕೊಳ್ಳುವುದು ಈ ನಿಧಿಯ ಉದ್ದೇಶವಾಗಿದೆ. ಪರಿಹಾರದ ಒಂದು ಭಾಗವನ್ನು ಆರೋಗ್ಯ ಟ್ರಸ್ಟ್‌ಗೆ ನೀಡಲಾಗುವುದು. ಸರ್ಕಾರವು ಆರಂಭಿಕ ಚಿಕಿತ್ಸಾ ವೆಚ್ಚವನ್ನು ಮುಂಗಡವಾಗಿ ಭರಿಸುವ ಯೋಜನೆಯನ್ನು ಕೂಡ ಹೊಂದಿದೆ.
ಇದನ್ನೂ ಓದಿ: PM ಕಿಸಾನ್ ಯೋಜನೆಯಿಂದ 35 ಲಕ್ಷ ರೈತರ ಹೆಸರು ಡಿಲೀಟ್
ಇನ್ನು ಬೀದಿ ನಾಯಿ ದಾಳಿಯಿಂದ ಅಥವಾ ರೇಬೀಸ್‌ನಿಂದ ವ್ಯಕ್ತಿ ಸಾವನ್ನಪ್ಪಿದರೆ, ಅವರ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು. ಇದರಿಂದ ಆರ್ಥಿಕ ಒತ್ತಡವನ್ನು ಎದುರಿಸುತ್ತಿರುವ ಕುಟುಂಬಗಳಿಗೆ ಸಹಾಯವಾಗುತ್ತದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Dog Attack:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





