(Driving License) ಡ್ರೈವಿಂಗ್ ಲೈಸೆನ್ಸ್ ಪಡೆಯುವ ನಿಯಮಗಳನ್ನು ಸರ್ಕಾರ ಬದಲಾಯಿಸಿದೆ. ಈಗ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಸರ್ಕಾರಿ ಪ್ರಾದೇಶಿಕ ಸಾರಿಗೆ ಕಚೇರಿಗೆ (RTO) ಹೋಗಿ ಪರೀಕ್ಷೆಗೆ ಹಾಜರಾಗುವ ಅಗತ್ಯವಿಲ್ಲ. ಬದಲಿಗೆ ಖಾಸಗಿ ಸಂಸ್ಥೆಗಳಿಗೆ ಡ್ರೈವಿಂಗ್ ಪರೀಕ್ಷೆಗಳನ್ನು ನಡೆಸಲು ಮತ್ತು ಪ್ರಮಾಣಪತ್ರಗಳನ್ನು ನೀಡಲು ಅಧಿಕಾರ ನೀಡಲಾಗಿದೆ. ಈ ಹೊಸ ನಿಯಮವು ಜೂನ್ 1 ರಿಂದ ಜಾರಿಗೆ ಬರಲಿದೆ.
ಇದನ್ನೂ ಓದಿ: ರೈತರೇ ಗಮನಿಸಿ; ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ; ಈ ರೀತಿ ಮಾಡಿ
ಹೊಸ ನಿಯಮದಲ್ಲಿ ಏನಿದೆ?:
ಖಾಸಗಿ ಚಾಲನಾ ತರಬೇತಿ ಕೇಂದ್ರಗಳಿಗೆ ಸರ್ಕಾರ ಹೊಸ ನಿಯಮಗಳನ್ನು ತಂದಿದೆ. ಇದರ ಪ್ರಕಾರ ಖಾಸಗಿ ಚಾಲನಾ ತರಬೇತಿ ಕೇಂದ್ರ ನಡೆಸಲು ಕನಿಷ್ಠ 1 ಎಕರೆ ಜಮೀನು ಇರಬೇಕು. 4 ಚಕ್ರದ ಮೋಟರ್ ವಾಹನಗಳಿಗೆ ಡ್ರೈವಿಂಗ್ ಸೆಂಟರ್ ನಲ್ಲಿ ಹೆಚ್ಚುವರಿ 2 ಎಕರೆ ಜಮೀನು ಬೇಕಾಗುತ್ತದೆ.
ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
ಖಾಸಗಿ ಚಾಲನಾ ತರಬೇತಿ ಕೇಂದ್ರ ಸೂಕ್ತವಾದ ಪರೀಕ್ಷಾ ಸೌಲಭ್ಯಗಳನ್ನು ಹೊಂದಿರಬೇಕಾಗುತ್ತದೆ. ತರಬೇತುದಾರರು ಕನಿಷ್ಠ ಪ್ರೌಢಶಾಲಾ ಶಿಕ್ಷಣ ಪಡೆದಿರಬೇಕು. ಇದಲ್ಲದೆ ಅವರು ಕನಿಷ್ಠ 5 ವರ್ಷಗಳ ಚಾಲನಾ ಅನುಭವವನ್ನು ಹೊಂದಿರಬೇಕು. ಬಯೋಮೆಟ್ರಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ವ್ಯವಸ್ಥೆಗಳ ಮೂಲಭೂತ ಅಂಶಗಳನ್ನು ತರಬೇತುದಾರರು ತಿಳಿದಿರಬೇಕಾಗುತ್ತದೆ.
ಇದನ್ನೂ ಓದಿ: ವಾಹನಗಳಿಗೆ HSRP ಅಳವಡಿಕೆ; ಗಡುವು ಮತ್ತೆ ವಿಸ್ತರಿಸುತ್ತಾ ಸರ್ಕಾರ…?
ಲಘು ವಾಹನ ತರಬೇತಿಯನ್ನು 4 ವಾರಗಳಲ್ಲಿ ಎಂದರೆ ಕನಿಷ್ಠ 29 ಗಂಟೆಗಲ್ಲಿ ಪೂರ್ಣಗೊಳಿಸಬೇಕು. ತರಬೇತಿಯನ್ನು ಥಿಯರಿ ಹಾಗೂ ಪ್ರಾಯೋಗಿಕ ಎಂಬ ಕನಿಷ್ಠ ಎರಡು ವಿಭಾಗಗಳಾಗಿ ವಿಂಗಡಿಸಬೇಕು. ಇದರಲ್ಲಿ, ಥಿಯರಿ ವಿಭಾಗ 8 ಗಂಟೆಗಳಿದ್ದರೆ ಪ್ರಾಯೋಗಿಕ 21 ಗಂಟೆಗಳಿರಬೇಕು.
ಇದನ್ನೂ ಓದಿ: ಐಟಿಐ ತರಬೇತಿಗೆ ಪ್ರವೇಶಾತಿ ಪ್ರಾರಂಭ; ಮಲೆನಾಡಿನ ವಿದ್ಯಾರ್ಥಿಗಳಿಗೆ ಇಲ್ಲಿದೆ ಅವಕಾಶ
ಭಾರೀ ಮೋಟಾರು ವಾಹನಗಳಿಗೆ 38 ಗಂಟೆಗಳ ತರಬೇತಿ ಇರುತ್ತದೆ. ಇದರಲ್ಲಿ 8 ಗಂಟೆ ಥಿಯರಿ ಮತ್ತು 31 ಗಂಟೆಗಳ ಪ್ರಾಯೋಗಿಕ ತಯಾರಿ ಇರುತ್ತದೆ. ಈ ತರಬೇತಿಯನ್ನು 6 ವಾರಗಳಲ್ಲಿ ಪೂರ್ಣಗೊಳಿಸಲಾಗುತ್ತದೆ. ಖಾಸಗಿ ಚಾಲನಾ ತರಬೇತಿ ಕೇಂದ್ರಗಳು ಲಘು ಮತ್ತು ಭಾರೀ ವಾಹನಗಳ ಚಾಲಕರಿಗೆ ಉನ್ನತ ಗುಣಮಟ್ಟವನ್ನು ಕಾಯ್ದುಕೊಳ್ಳುವುದನ್ನು ಖಚಿತಪಡಿಸಿಕೊಳ್ಳುವುದು ಈ ನಿಯಮಗಳ ಉದ್ದೇಶವಾಗಿದೆ.
ಇದನ್ನೂ ಓದಿ: ನಿಮ್ಮ ಖಾತೆಗೆ ಬರ ಪರಿಹಾರ ಹಣ ಬಂತಾ..?; ಈಗಲೇ ಈ ರೀತಿ ಚೆಕ್ ಮಾಡಿಕೊಳ್ಳಿ
ಡ್ರೈವಿಂಗ್ ಲೈಸೆನ್ಸ್ ಗಳಿಗೆ ವಿವಿಧ ಶುಲ್ಕ:
ವಿವಿಧ ರೀತಿಯ ಡ್ರೈವಿಂಗ್ ಲೈಸೆನ್ಸ್ ಗಳಿಗೆ ವಿವಿಧ ಶುಲ್ಕಗಳನ್ನು ವಿಧಿಸಲಾಗಿದೆ. ಕಲಿಕಾ ಪರವಾನಗಿ 200 ರೂ., ಕಲಿಕಾ ಪರವಾನಗಿ ನವೀಕರಣಕ್ಕೆ 200 ರೂ., ಅಂತಾರಾಷ್ಟ್ರೀಯ ಪರವಾನಗಿ 1000 ರೂ. ಹಾಗೂ ಶಾಶ್ವತ ಪರವಾನಗಿ 200 ರೂ. ಇದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್







Leave a Reply