Drone Pilot Training: ಡ್ರೋನ್ ಪೈಲಟ್ ಆಗುವ ಸುವರ್ಣಾವಕಾಶ.

Drone Pilot Training: ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಇಂದಿರಾ ಗಾಂಧಿ ವೃತ್ತಿ ಅಭಿವೃದ್ದಿ ಕೇಂದ್ರದ ವತಿಯಿಂದ ಆಸಕ್ತ ಯುವಕರಿಗೆ ಉಚಿತ ಸುಧಾರಿತ ಡ್ರೋನ್ ಪೈಲಟ್ ತರಬೇತಿಯನ್ನು ಆಯೋಜನೆ ಮಾಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಈ ತರಬೇತಿಯಲ್ಲಿ ಭಾಗವಹಿಸಲು ಮುಂಚಿತವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದೆ.

ಪ್ರಸ್ತುತ ದಿನಗಳಲ್ಲಿ ಕೃಷಿಯಿಂದ ಹಿಡಿದು ಬಹುತೇಕವಾಗಿ ಎಲ್ಲಾ ಕ್ಷೇತ್ರಗಳಲ್ಲೂ ಡ್ರೋನ್ ಬಳಕೆಯ ಹೆಚ್ಚುತ್ತಿದ್ದು, ಇದರ ಕಾರಣದಿಂದಾಗಿ ಡ್ರೋನ್ ಪೈಲಟ್ ಉದ್ಯೋಗಕ್ಕೆ ಉತ್ತಮ ಅವಕಾಶಗಳಿದೆ. ಈ ಕ್ಷೇತ್ರದಲ್ಲಿ ಉದ್ಯೋಗವನ್ನು ಮಾಡಲು ಆಸಕ್ತಿಯನ್ನು ಹೊಂದಿರುವವರಿಗೆ ಉಚಿತ ತರಬೇತಿಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ

ಈ ಲೇಖನದಲ್ಲಿ ಉಚಿತ ಡ್ರೋನ್ ಪೈಲಟ್ ತರಬೇತಿಯನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಡ್ರೋನ್ ಪೈಲಟ್ ತರಬೇತಿಯಲ್ಲಿ ಯಾವೆಲ್ಲ ವಿಷಯಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತದೆ? ಎನ್ನುವ ಮಾಹಿತಿ ಸೇರಿದಂತೆ ಇನ್ನಿತರೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಕೆಳಗೆ ವಿಸ್ತರಿಸಲಾಗಿದೆ.

ಅರ್ಹತೆ ಕಡ್ಡಾಯ:
* ಅರ್ಜಿದಾರ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

* ಪರಿಶಿಷ್ಠ ಜಾತಿಯ(SC) ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

* ಅಭ್ಯರ್ಥಿಯು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದೊಳಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಪಡೆದಿರಬೇಕು.

* ಅರ್ಜಿದಾರ ಅಭ್ಯರ್ಥಿಯ ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು.

* ಅರ್ಜಿದಾರ ಕುಟುಂಬದ ವಾರ್ಷಿಕ ಆದಾಯು 8.0 ಲಕ್ಷದ ಒಳಗಿರಬೇಕು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸುಧಾರಿತ ಡ್ರೋನ್ ಪೈಲಟ್ ತರಬೇತಿಯನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 31 ಮಾರ್ಚ್ 2026 ಕೊನೆಯ ದಿನಾಂಕವಾಗಿದೆ.

ನ್ನೂ ಓದಿ: ಆಧಾರ್‌ ಸೇವಾ ಕೇಂದ್ರದಲ್ಲಿ ಜಾಬ್‌, ಅರ್ಜಿ ಆಹ್ವಾನ

-ತರಬೇತಿಯಲ್ಲಿ ಯಾವ ವಿಷಯಗಳ ಬಗ್ಗೆ ಮಾಹಿತಿ:

ಉಚಿತ ಸುಧಾರಿತ ಡ್ರೋನ್ ಪೈಲಟ್ ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ತರಬೇತಿಯಲ್ಲಿ ಯಾವೆಲ್ಲ ವಿಷಯಗಳ ಬಗ್ಗೆ ಮಾಹಿತಿ ತಿಳಿಸಲಾಗುತ್ತದೆ ಎನ್ನುವ ವಿವರ ಹೀಗಿದೆ:
* ಡ್ರೋನ್ ಕುರಿತು ಪ್ರಾಥಮಿಕ ಮಾಹಿತಿ.
* ಎಲ್ಲಾ ಬಗ್ಗೆಯ ಸುಧಾರಿತ ಡ್ರೋನ್ ಬಗ್ಗೆ ಮಾಹಿತಿ.
* ಪ್ರಾಯೋಗಿಕವಾಗಿ ಡ್ರೋನ್ ಅನ್ನು ಚಲಾವಣೆ ಮಾಡುವ ಬಗ್ಗೆ ವಿವರಣೆ.
* ಡ್ರೋನ್ ಉಪಕರಣವನ್ನು ಹೇಗೆ ನಿರ್ವಹಣೆ ಮಾಡಬೇಕು ಎಂಬುದರ ಕುರಿತು ಮಾಹಿತಿ.
* ಇನ್ನಿತರೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಅಭ್ಯರ್ಥಿಗಳು ಈ ತರಬೇತಿಯಲ್ಲಿ ತಿಳಿಯಬಹುದು.

Drone Pilot Training: ಡ್ರೋನ್ ಪೈಲಟ್ ಆಗುವ ಸುವರ್ಣಾವಕಾಶ.
Drone Pilot Training: ಡ್ರೋನ್ ಪೈಲಟ್ ಆಗುವ ಸುವರ್ಣಾವಕಾಶ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಇತ್ತೀಚಿನ ಜನಪ್ರಿಯ ಸುದ್ದಿಗಳು (Drone Pilot Training:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ