(Drought Compensation Tips) ಕಳೆದ ವರ್ಷ ಮಳೆ ಕೈ ಕೊಟ್ಟ ಪರಿಣಾಮ ಕರ್ನಾಟಕದಲ್ಲಿ ಬರ ಆವರಿಸಿದೆ. 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ SDRF/NDRF ಮಾರ್ಗಸೂಚಿಯಂತೆ ಅರ್ಹತೆಯ ಅನುಗುಣವಾಗಿ ಪರಿಹಾರವನ್ನು ರೈತರಿಗೆ ನೀಡಲಾಗುತ್ತಿದೆ. ಈಗಾಗಲೇ ಮೊದಲ ಹಂತದಲ್ಲಿ ಅರ್ಹ ರೈತರಿಗೆ ಗರಿಷ್ಟ ರೂ. 2000 ವರೆಗೆ ಅರ್ಹತೆಯಂತೆ ಪಾವತಿಸಿರುವ ಬೆಳೆಹಾನಿ ಪರಿಹಾರ ಮೊತ್ತವನ್ನು ಪರಿಗಣನೆಗೆ ತೆಗೆದುಕೊಂಡು ಅರ್ಹತೆಯಂತೆ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ ಮೊತ್ತವನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶಿಸಿದೆ.
ಇದನ್ನೂ ಓದಿ: ರೈತರೇ ಗಮನಿಸಿ; ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ಬೆಳೆಪರಿಹಾರ ಹಣ; ಹಣ ಜಮಾ ಆಗಿದ್ಯಾ ಎಂದು ಹೀಗೆ ಚೆಕ್ ಮಾಡಿ
ಹಲವು ರೈತರು ಬರ ಪರಿಹಾರ ಹಣ ಜಮಾ ಆಗಿಲ್ಲ ಎಂದು ವಿಚಾರಿಸುತ್ತಿದ್ದಾರೆ. ಆದ್ದರಿಂದ ಸ್ಪಷ್ಟನೆಯನ್ನು ನೀಡಲಾಗಿದ್ದು, ಏಕೆ ಪರಿಹಾರ ಬಂದಿಲ್ಲ ಎಂದು ವಿವರಣೆಯನ್ನು ನೀಡಲಾಗಿದೆ.
ಒಂದು ವೇಳೆ ನಿಮ್ಮ ಹೆಸರು, ಆಧಾರ್ ಮತ್ತು FID (FRUITS ID) ಐಡಿಗೆ ಹೊಂದಿಕೆ ಆಗದೇ ಇರುವುದು. ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಆಗದೇ ಇರುವುದು. ನಿಮ್ಮ ಬ್ಯಾಂಕ್ ನ IFSC ಕೋಡ್ ಸರಿ ಇರದೇ ಇರುವುದು. ನಿಮ್ಮ ಬ್ಯಾಂಕ್ ಖಾತೆ ನಿಷ್ಕ್ರಿಯ ಆಗಿರುವುದು ಮತ್ತು ಇತರೆ ಕಾರಣಗಳಿಗೆ ಪರಿಹಾರ ಜಮೆ ಆಗಿರುವುದಿಲ್ಲ ಎಂದು ತಿಳಿಸಲಾಗಿದೆ.
* ರೈತರು ಮೊದಲು ಜಮೀನಿನ ಪಹಣಿಗೆ ತಮ್ಮ FRUITS ID ಸಂಖ್ಯೆ ಇದೆಯೋ?, ಇಲ್ಲವೋ? ಎಂಬುದನ್ನು ಪರಿಶೀಲಿಸಿ.
* ತಮ್ಮ ಬ್ಯಾಂಕ್ ಖಾತೆಗೆ NPCI ಲಿಂಕ್ ಆಗಿದೆಯೇ, ಇಲ್ಲವೇ ಎಂಬುದನ್ನು ಪರಿಶೀಲಿಸಿ.
* NPCI ಲಿಂಕ್ ಇದ್ದಲ್ಲಿ FID (FRUITS ID)ಯಲ್ಲಿ ಇರತಕ್ಕಂತಹ ಬ್ಯಾಂಕ್ ಖಾತೆ, ಖಾತೆ ಸಂಖ್ಯೆಗೂ NPCI ಲಿಂಕ್ ಇರುವ ಸಂಖ್ಯೆಯೂ ಒಂದೇ ಇದೆಯೋ?, ಇಲ್ಲವೋ? ಎಂಬುದನ್ನು ಪರಿಶೀಲಿಸಿ.
* NPCI ಲಿಂಕ್ ಹಾಗೂ FRUITS ID ಯಲ್ಲಿ ಇರುವ ಬ್ಯಾಂಕ್ ಖಾತೆ ಸಂಖ್ಯೆ ಬೇರೆ ಬೇರೆ ಇದ್ದಲ್ಲಿ FID ಯಲ್ಲಿ ಇರುವ ಬ್ಯಾಂಕ್ ಖಾತೆ ಸಂಖ್ಯೆಯನ್ನು ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಬದಲಾವಣೆ ಮಾಡಿಸಿ.
* ಆಧಾರ್ ಕಾರ್ಡ್‌ನಲ್ಲಿ ಇರುವ ಹೆಸರೂ ಬ್ಯಾಂಕ್ ಖಾತೆಯಲ್ಲಿ ಇರುವ ಹೆಸರೂ ಒಂದೇ ಆಗಿರಬೇಕು.
* ಅಕೌಂಟ್ ಇನ್-ವ್ಯಾಲಿಡ್, ಕ್ಲೋಸ್, ಬ್ಲಾಕ್, ಆಧಾರ್ ಸೀಡಿಂಗ್ ಹಾಗೂ ಇತರೆ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಳ್ಳುತ್ತಿದ್ದು, ಪರಿಶೀಲಿಸಿಕೊಂಡು ಚಾಲ್ತಿ ಮಾಡಿಸಿಕೊಳ್ಳುವುದು.
ಇದನ್ನೂ ಓದಿ: ರಾಜ್ಯದ ರೈತರಿಗೆ ಬಿಗ್ ಶಾಕ್!; ಖಾತೆಗೆ ಬಂದ ಬರಪರಿಹಾರ ಹಣ ಸಾಲಕ್ಕೆ ಜಮಾ!
ಬರ ಪರಿಹಾರದ ಕುರಿತು ಯಾವುದೇ ಮಾಹಿತಿಯು ತಮಗೆ ಅರ್ಥವಾಗದೇ, ಗೊಂದಲಗಳು ಇದ್ದಲ್ಲಿ ಕೂಡಲೇ ಸಮೀಪದ ಕೃಷಿ ಇಲಾಖೆ ಅಥವಾ ತಾಲ್ಲೂಕು ಕಛೇರಿಯ ಸಹಾಯವಾಣಿ ಕೇಂದ್ರವನ್ನು ಸಂಪರ್ಕಿಸಲು ಕೋರಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್







Leave a Reply