(drought-relief) ಬರದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕೇಂದ್ರದಿಂದ ಬಿಡುಗಡೆಯಾಗಿರುವ ಬರ ಪರಿಹಾರ ಹಣದಲ್ಲಿ 2,425 ಕೋಟಿ ರು. ಹಣವನ್ನು 27.38 ಲಕ್ಷ ರೈತರಿಗೆ ಅರ್ಹತೆಗೆ ಅನುಗುಣವಾಗಿ ನೇರ ನಗದು ವರ್ಗಾವಣೆ ಮೂಲಕ ವರ್ಗಾವಣೆ ಮಾಡಲಾಗಿದೆ. 2-3 ದಿನಗಳಲ್ಲಿ ಎಲ್ಲ ರೈತರ ಖಾತೆಗಳಿಗೆ ಪರಿಹಾರ ಮೊತ್ತ ಜಮೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಇದನ್ನೂ ಓದಿ: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
2023ರ ಮುಂಗಾರು ಬೆಳೆ ಹಾನಿ ಬರ ಪರಿಹಾರ ವಿತರಣೆಗೆ ಎಲ್ಲ ರೀತಿಯ ಕ್ರಮಗಳನ್ನು ಪೂರ್ಣಗೊಳಿಸಲಾಗಿದೆ. ಸೋಮವಾರವೇ ರೈತರ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಲಾಗಿದೆ. ಆರ್ ಬಿಐನಿಂದ ರೈತರ ಖಾತೆಗೆ ವರ್ಗಾಯಿಸಲು 48 ಗಂಟೆ ಸಮಯ ಅಗತ್ಯ. ಹೀಗಾಗಿ ಎರಡು ಮೂರು ದಿನದಲ್ಲಿ ಎಲ್ಲರಿಗೂ ಹಣ ತಲುಪಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಇದೀಗ ಮೂಡುಬಿದಿರೆಯಲ್ಲೂ ಕ್ರಿಯೇಟಿವ್ ನ ಪುಸ್ತಕ ಮನೆ; ಕನ್ನಡ ಪುಸ್ತಕ ಲೋಕದಲ್ಲಿ ಮತ್ತೊಂದು ಮೈಲುಗಲ್ಲು
2023 ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ರೈತರಿಗೆ ಬೆಳೆಹಾನಿ ಪರಿಹಾರದ ಮೊದಲನೇ ಕಂತಾಗಿ ಅಥವಾ ಎಸ್ಡಿಆರ್ಎಫ್/ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ಬೆಳೆಹಾನಿ ಪರಿಹಾರವಾಗಿ ಅರ್ಹತೆಯ ಅನುಗುಣವಾಗಿ ಪ್ರತಿ ರೈತರಿಗೆ ಗರಿಷ್ಠ 2000 ರೂ.ಗಳ ವರೆಗೆ ರೈತರಿಗೆ ಪಾವತಿಸಲು ಸರ್ಕಾರವು ಅನುಮತಿಯನ್ನು ನೀಡಲಾಗಿರುತ್ತದೆ ಮತ್ತು ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಎನ್ಡಿಆರ್ಎಫ್ ಅನುದಾನ ಬಿಡುಗಡೆಯಾದ ನಂತರ ಎಸ್ಡಿಆರ್ಎಫ್ ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತಕ್ಕೆ ಅರ್ಹತೆಯಿರುವ ರೈತರಿಗೆ ಹೆಚ್ಚುವರಿ ಬೆಳೆಹಾನಿ ಪರಿಹಾರ ಬಿಡುಗಡೆಗೊಳಿಸಲಾಗುವುದು.
ಇದನ್ನೂ ಓದಿ: ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?; ಅಡಿಕೆ ಮಾರುಕಟ್ಟೆ ಹೇಗಿದೆ | ಬೆಟ್ಟೆ, ಗೊರಬಲು, ಸರಕು, ಈಡಿ
ಹೆಚ್ಚಿನ ಮಾಹಿತಿಗಾಗಿ ಹಾಗೂ ಬೆಳೆ ಪರಿಹಾರ ಹಣ ಖಾತೆಗೆ ಜಮಾ ಆಗದೆ ಇರುವ ಬಗ್ಗೆ ದೂರು ಸಲ್ಲಿಸಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿ ಸಹಾಯವಾಣಿಗಳನ್ನು ತೆರೆಯಲಾಗಿದ್ದು, ಸಾರ್ವಜನಿಕರು ದೂರುಗಳನ್ನು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಸಲ್ಲಿಸಿ ಮಾಹಿತಿ ಪಡೆಯಬಹುದಾಗಿರುತ್ತದೆ ಹಾಗೂ ಸಂಬಂಧಪಟ್ಟ ತಾಲ್ಲೂಕು ಕೃಷಿ ಅಧಿಕಾರಿ/ತಹಶೀಲ್ದಾರ್ ರವರ ಕಚೇರಿಗೆ ಖುದ್ದು ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply