Drought-Relief Fund: ರಾಜ್ಯದ ಅನ್ನದಾತರಿಗೆ ಬರ ಪರಿಹಾರ ಬಿಡುಗಡೆ

(Drought-Relief Fund) ರಾಜ್ಯದಲ್ಲಿ ಕಳೆದ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾದ ಬೆಳೆ ನಷ್ಟ ಪರಿಹಾರ ವಿತರಣೆ ಪ್ರಕ್ರಿಯೆ ಆರಂಭವಾಗಿದೆ. ಕೇಂದ್ರ ಸರಕಾರ NDRF ನಿಂದ ಬಿಡುಗಡೆ ಮಾಡಿರುವ 3,454.22 ಕೋಟಿ ರೂ.ಗಳನ್ನು ಅರ್ಹ ರೈತರಿಗೆ ವಿತರಿಸುವ ಸಂಬಂಧ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಿಗೆ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಇದನ್ನೂ ಓದಿ: ಅನ್ನದಾತರಿಗೆ ಗುಡ್ ನ್ಯೂಸ್;ನ್ಯಾನೋ ಯೂರಿಯಾ ಪ್ಲಸ್ ಮಾರಾಟ ಶುರು


ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಪರಿಹಾರದ ಮೊತ್ತವನ್ನು ನೇರವಾಗಿ ವರ್ಗಾಯಿಸಲು ಅದೇಶಿಸಲಾಗಿದೆ. ಈಗಾಗಲೇ ರಾಜ್ಯ ಸರಕಾರ ಕಳೆದ ಜನವರಿಯಲ್ಲಿ ರೈತರಿಗೆ ಗರಿಷ್ಠ 2 ಸಾವಿರ ರೂ.ವರೆಗೆ ಮಧ್ಯಂತರ ಪರಿಹಾರ ಪಾವತಿಸಿದೆ. ಈಗ ಆ ಮೊತ್ತ ಕಡಿತ ಮಾಡಿಕೊಂಡು SDRF ಮಾರ್ಗಸೂಚಿ ಅನ್ವಯ ನಿಗದಿಯಾದ ಬಾಕಿ ಮೊತ್ತ ಜಮಾ ಮಾಡಲು ಸೂಚಿಸಲಾಗಿದೆ.

ಹಣ ಬಿಡುಗಡೆ ಜೊತೆಗೆ ಕೆಲವೊಂದು ಮಾರ್ಗಸೂಚಿಗಳನ್ನೂ ನೀಡಲಾಗಿದೆ. ಅರ್ಹ ಫಲಾನುಭವಿ ರೈತರಿಗೆ ಈಗಾಗಲೇ ಪಾವತಿಯಾಗಿರುವ ಬೆಳೆ ಹಾನಿ ಪರಿಹಾರದ ವಿವರ ಹಾಗೂ ನಿಯಮಾನುಸಾರ ಪ್ರಸ್ತುತ ಪಾವತಿಸುವ ಮೊತ್ತದ ವಿವರಗಳನ್ನು ಡಿಸಿ, ಎಸಿ, ತಹಸೀಲ್ದಾರ್ ಕಚೇರಿಗಳು ಮತ್ತು ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಬೇಕು. ಜೊತೆಗೆ ಆಯಾ ಜಿಲ್ಲಾಧಿಕಾರಿಗಳ ಅಧಿಕೃತ ವೆಬ್ ಸೈಟ್ ನಲ್ಲಿ ಮಾಹಿತಿ ನೀಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ. ಬೆಳೆ ನಷ್ಟ ಪರಿಹಾರಕ್ಕೆ ಸಂಬಂಧಿಸಿದಂತೆ ರೈತರಿಗೆ ಅಗತ್ಯ ಮಾಹಿತಿ ನೀಡಲು ಡಿಸಿ, ಎಸಿ ಮತ್ತು ತಹಶೀಲ್ದಾರ್ ಕಚೇರಿಗಳಲ್ಲಿ ಹೆಲ್ಪ್ ಡೆಸ್ಕ್ ಗಳನ್ನು ತೆರೆಯಲು ಕೂಡ ರಾಜ್ಯ ಸರಕಾರದಿಂದ ನಿರ್ದೇಶನ ನೀಡಲಾಗಿದೆ.


ಇದನ್ನೂ ಓದಿ: ಮಹಿಳೆಯರೇ ಗಮನಿಸಿ; ಉಚಿತ ಟೂಲ್ ಕಿಟ್ ಜೊತೆಗೆ ಸಿಗಲಿದೆ 15,000 ರೂಪಾಯಿ; ಈ ರೀತಿ ಅರ್ಜಿ ಸಲ್ಲಿಸಿ


ಯಾವ ಬೆಳೆಗೆ ಎಷ್ಟು ಪರಿಹಾರ?
NDRF ಮಾರ್ಗಸೂಚಿಯಂತೆ ಗರಿಷ್ಠ 2 ಹೆಕ್ಟೇರ್ ಪ್ರದೇಶದ ಮಿತಿಗೊಳಪಟ್ಟು ಬೆಳೆ ನಷ್ಟ ಪರಿಹಾರ ನಿಗದಿ ಮಾಡಲಾಗಿದೆ.

ಮಳೆಯಾಶ್ರಿತ ಬೆಳೆಗೆ – 8,500 ರೂ.
ನೀರಾವರಿ ಪ್ರದೇಶದ ಬೆಳೆ – 17,000 ರೂ.
ದೀರ್ಘಾವಧಿ (ತೋಟಗಾರಿಕೆ) ಬೆಳೆ – 22,500 ರೂ.

Drought-Relief Fund: ರಾಜ್ಯದ ಅನ್ನದಾತರಿಗೆ ಬರ ಪರಿಹಾರ ಬಿಡುಗಡೆ
Drought-Relief Fund: ರಾಜ್ಯದ ಅನ್ನದಾತರಿಗೆ ಬರ ಪರಿಹಾರ ಬಿಡುಗಡೆ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
  10. ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ