Drought Relief: ಕೇಂದ್ರ ಸರ್ಕಾರದಿಂದ ಬರ ಪರಿಹಾರ (Drought Relief: )ಬರುವವರೆಗೂ ಕಾಯುವುದಿಲ್ಲ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಕಂತಿನಲ್ಲಿ 2 ಸಾವಿರ ರೂ.ವರೆಗೂ ಬೆಳೆ ಪರಿಹಾರ ನೀಡಲು ಮುಂದಾಗಿದ್ದು, ಇನ್ನು ನಾಲ್ಕೈದು ದಿನದಲ್ಲಿ ಬಿಡುಗಡೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಮೊದಲ ಹಂತದಲ್ಲಿ 2 ಸಾವಿರ ರೂ ಪರಿಹಾರ:
ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ 2 ಸಾವಿರ ರೂ.ವರೆಗೂ ಪರಿಹಾರ ನೀಡಲಾಗುವುದು ಎಂದು ಹೇಳಿದರು.
ಕೇಂದ್ರಕ್ಕೆ ಬರೆದ ಪತ್ರಗಳಿಗೂ ಪ್ರತಿಕ್ರಿಯೆ ಇಲ್ಲ:
ಕೇಂದ್ರಕ್ಕೆ ಬರೆದ ಪತ್ರಗಳಿಗೂ ಪ್ರತಿಕ್ರಿಯೆ ಇಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಕೇಂದ್ರದಿಂದ ಸಿಕ್ಕಿಲ್ಲ. ಇನ್ನು ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನ ಉದ್ಯೋಗ ಕೊಡಲು ಅನುಮತಿ ಕೋರಲಾಗಿತ್ತು. ಕೇಂದ್ರ ಇನ್ನೂ ಅನುಮತಿ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಬೆಳೆ ನಷ್ಟ ಕುರಿತು ಸಿಎಂ ಹೇಳಿದ್ದೇನು?:
ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ (Drought Relief: ) ಎಂದು ಮೂರು ಹಂತದಲ್ಲಿ ಘೋಷಿಸಿದ್ದೇವೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. 18171.44 ಕೋಟಿ ರೂ. ಪರಿಹಾರದ ಆರ್ಥಿಕ ನೆರವು ನೀಡಲು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ನಮ್ಮ ತೆರಿಗೆ ಹಣದ ಪಾಲನ್ನು ನಮಗೆ ವಾಪಾಸ್ ಕೊಟ್ಟರೂ ಸಾಕು. 21-9-2023 ರಂದು ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೆವು. ಕೇಂದ್ರದ ತಂಡ 4/10 ರಿಂದ 9/10 ರ ವರೆಗೆ ರಾಜ್ಯ ಪ್ರವಾಸ ಮಾಡಿ ಬರ ಸಮೀಕ್ಷೆ ನಡೆಸಿ, ವರದಿ ನೀಡಿದೆ. ನಾವೆಲ್ಲಾ ಕೇಂದ್ರ ತಂಡವನ್ನು ಭೇಟಿ ಮಾಡಿ ಚರ್ಚಿಸಿ ಬರದ ಸ್ಥಿತಿ ವಿವರಿಸಿದ್ದೇವೆ .ದೇಶದಲ್ಲಿ 12 ರಾಜ್ಯಗಳಲ್ಲಿ ಬರಗಾಲದ ಸ್ಥಿತಿ ಇದೆ. 4663 ಕೋಟಿ ರೂ. ಬೆಳೆ ನಷ್ಟ ಪರಿಹಾರ ಕೇಂದ್ರಕ್ಕೆ ಕೇಳಿದ್ದೆವು. ಆದರೆ, ಇವತ್ತಿನವರೆಗೂ ಕೇಂದ್ರ ಸಭೆಯನ್ನೇ ನಡೆಸಿಲ್ಲ. ಸಮಯ ಕೇಳಿದರೂ ಭೇಟಿಗೆ ಅವಕಾಶ ಕೊಟ್ಟಿಲ್ಲ ಎಂದು ಅಸಮಾಧಾನ ಹೊರಹಾಕಿದರು.
ಇದನ್ನೂ ಓದಿ; ಸೆಂಟ್ ಬ್ಯಾಂಕ್ ನಲ್ಲಿ ಉದ್ಯೋಗ; 60 ಹುದ್ದೆಗಳಿಗೆ ಅರ್ಜಿ ಆಹ್ವಾನ
Drought Relief: ವಿಮೆಗೆ 460 ಕೋಟಿ ರೂ. ಬಿಡುಗಡೆ:
ಬಿತ್ತನೆ ವೈಫಲ್ಯ ಮತ್ತು ಮಧ್ಯಂತರ ವಿಮೆ ಪರಿಹಾರಕ್ಕೆ ರಾಜ್ಯ ಸರ್ಕಾರ ಈಗಾಗಲೇ 6.5 ಲಕ್ಷ ರೈತರಿಗೆ 460 ಕೋಟಿ ರೂ, ಹಣವನ್ನು ನಮ್ಮ ಸರ್ಕಾರ ಬಿಡುಗಡೆ ಮಾಡಿದೆ. ಕುಡಿಯುವ ನೀರು, ಮೇವಿಗೆ 327 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, 780 ಕೋಟಿ ರೂಪಾಯಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿದೆ. ಅವರೂ ತಹಶೀಲ್ದಾರ್ ಗಳಿಗೆ ಬಿಡುಗಡೆ ಮಾಡಿದ್ದಾರೆ. ಯಾವ ತಾಲ್ಲೂಕುಗಳಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಇಲ್ಲದಂತೆ ನಿರ್ವಹಿಸಿದ್ದೇವೆ. ಹಲವು ತಾಲ್ಲೂಕುಗಳ 60 ಹಳ್ಳಿಗಳಲ್ಲಿ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಿದ್ದೇವೆ. ಹೊರ ರಾಜ್ಯಕ್ಕೆ ಮೇವು ಹೋಗದಂತೆ ತಡೆದಿದ್ದೇವೆ. ಮೇವಿನ ಬೀಜ ವಿತರಣೆ ಮಾಡಿದ್ದೇವೆ ಎಂದು ವಿವರಿಸಿದರು.
ಪ್ರಮುಖ ಸುದ್ದಿಗಳನ್ನು ಓದಿ
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರು; ಇಷ್ಟು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ; ಈ ಜಿಲ್ಲೆಗೆ ನಿರಾಸೆ ಮೂಡಿಸಿದ ಮಳೆರಾಯ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ಈ ವರ್ಗದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?
- ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
- ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
- ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
- 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
- ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
- ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
- ಯುಸಿಐಎಲ್ ನಿಂದ ಉದ್ಯೋಗಾವಕಾಶ; ಟ್ರೇಡ್ ಅಪ್ರೆಂಟಿಸ್ ಪೋಸ್ಟ್ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
- ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
- ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
- ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply