drought-relief Money: ಬರಪರಿಹಾರದ ಹಣ ಕುರಿತು ಬಿಗ್ ಅಪ್ಡೇಟ್

(drought-relief Money) ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಿರುವ ಬರ ಪರಿಹಾರದ ಹಣ ರೈತರ ಸಾಲದ ಖಾತೆಗೆ ಹಣ ಹೊಂದಾಣಿಕೆ ಮಾಡದಿರುವಂತೆ ಈಗಾಗಲೇ ಸಾಕಷ್ಟು ಬಾರಿ ಎಲ್ಲಾ ಬ್ಯಾಂಕ್ ಗಳಿಗೆ ತಿಳಿಸಲಾಗಿದೆ. ಆದರೂ ಕೆಲವು ಕಡೆ ಬ್ಯಾಂಕ್ ಗಳು ಪರಿಹಾರ ಹಣವನ್ನು ರೈತರ ಸಾಲಕ್ಕೆ ಹೊಂದಿಸುತ್ತಿರುವ ಕುರಿತು ದೂರು, ವರದಿಗಳು ಬರುತ್ತಿವೆ. ಈ ವಿಷಯದಲ್ಲಿ ಸರ್ಕಾರ ಮತ್ತು ಜಿಲ್ಲಾಡಳಿತ ನೀಡಿರುವ ನಿರ್ದೇಶನ ಉಲ್ಲಂಘಿಸಿದರೆ ಅಂತಹ ಬ್ಯಾಂಕ್ ಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಬರ ಪರಿಹಾರ; ನಿಮ್ಮ ಖಾತೆಗೆ ಹಣ ಜಮಾ ಆಗಿಲ್ವಾ?; ಹೀಗೆ ಚೆಕ್ ಮಾಡಿ


2024 ರ ಮುಂಗಾರು ವಿಫಲವಾಗಿದ್ದರಿಂದ ರಾಜ್ಯ ಸರ್ಕಾರ ಬರಪಡೀತ ತಾಲೂಕುಗಳೆಂದು ಘೋಷಣೆ ಮಾಡಿ ಸರ್ಕಾರದ ನಿಯಮಾವಳಿಗಳ ಪರಿಹಾರ ಹಣ ಬಿಡುಗಡೆ ಮಾಡುತ್ತಿದೆ. ಮುಖ್ಯವಾಗಿ ಈಗ ಪ್ರಸಕ್ತ ಸಾಲಿನ ಮುಂಗಾರು ಹಂಗಾಮು ಆರಂಭವಾಗುತ್ತಿರುವುದರಿಂದ ರೈತರು ಭೂಮಿ ಉಳುಮೆ ಮಾಡಿ ಬಿತ್ತನೆಗೆ ಸಿದ್ದಗೊಳಿಸಬೇಕು, ಬೀಜ, ಗೊಬ್ಬರ ಖರೀದಿಸಬೇಕು. ಅವರ ನೆರವಿಗಾಗಿ ರಾಜ್ಯ ಸರ್ಕಾರವು ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ನೇರವಾಗಿ ಬರಪರಿಹಾರ ಜಮೆ ಮಾಡುತ್ತಿದೆ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; hsrp number plate ಬಗ್ಗೆ ಬಂದೇ ಬಿಡ್ತು ಮತ್ತೊಂದು ಮಹತ್ವದ ಮಾಹಿತಿ; ಏನದು? ಇಲ್ಲಿದೆ ನೋಡಿ


ರೈತರಿಗೆ ಸರ್ಕಾರಗಳಿಂದ ನೀಡುವ ಸಹಾಯಧನ, ಸಬ್ಸಿಡಿ, ಬರಪರಿಹಾರ ಮುಂತಾದವುಗಳನ್ನು ರೈತರ ಬ್ಯಾಂಕ್ ಸಾಲದ ಖಾತೆಗೆ ಹೊಂದಾಣಿಕೆ ಮಾಡದಂತೆ ರಾಜ್ಯ ಸರ್ಕಾರ ಮತ್ತು ರಾಜ್ಯಮಟ್ಟದ ಬ್ಯಾಂಕರ್ಸ್ ಕಮೀಟಿ ಸೂಚಿಸಿವೆ.


ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?; ಅಡಿಕೆ ಮಾರುಕಟ್ಟೆ ಹೇಗಿದೆ| ಬೆಟ್ಟೆ, ಗೊರಬಲು, ಸರಕು, ಈಡಿ


ರೈತರ ಸಹಮತ ಪಡೆಯದೇ ಅವರ ಬರ ಪರಿಹಾರದ ಹಣವನ್ನು ಅವರ ಸಾಲದ ಖಾತೆಗೆ ಜಮೆ ಮಾಡಿಕೊಂಡರೆ ಆಯಾ ಬ್ಯಾಂಕ್ ಮುಖ್ಯಸ್ಥರನ್ನು ಮತ್ತು ಬ್ಯಾಂಕ್ ಶಾಖಾ ವ್ಯವಸ್ಥಾಪಕರನ್ನು ಜವಾಬ್ದಾರರನ್ನಾಗಿಸಿ, ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕಾಗುತ್ತದೆ. ಬ್ಯಾಂಕ್ ಗಳು ರೈತರಿಗೆ ಸಹಕಾರ ನೀಡಬೇಕು. ಬರಗಾಲದಿಂದ ನೊಂದಿರುವ ರೈತರಿಗೆ ಪ್ರಸಕ್ತ ಮುಂಗಾರು ಉತ್ತಮ ಫಸಲಿನ ಭರವಸೆ ಮೂಡಿಸಿದ್ದು, ರೈತ, ಕೃಷಿ ಅಭಿವೃದ್ಧಿಯಲ್ಲಿ ಬ್ಯಾಂಕ್ ಗಳು ಕೈ ಜೋಡಿಸಬೇಕು.


ಇದನ್ನೂ ಓದಿ: ರೇಷನ್‌ ಕಾರ್ಡ್‌ಗೆ ಕಾಯುತ್ತಿದ್ದವರಿಗೆ ಸಿಹಿ ಸುದ್ದಿ;  ಅರ್ಜಿ ಸಲ್ಲಿಕೆ ಕುರಿತು ಮಹತ್ವದ ಮಾಹಿತಿ ಇಲ್ಲಿದೆ;  ಮಿಸ್ ಮಾಡ್ದೆ ಈ ಸುದ್ದಿ ಓದಿ


ಜಿಲ್ಲೆಯ ಎಲ್ಲಾ ಬ್ಯಾಂಕ್ ಗಳ ಮುಖ್ಯಸ್ಥರು ಮತ್ತು ಎಲ್ಲಾ ಬ್ಯಾಂಕ್ ಗಳ ಶಾಖಾ ವ್ಯವಸ್ಥಾಪಕರು ಗಮನಹರಿಸಿ, ರೈತರಿಗೆ ತೊಂದರೆ ಆಗದಂತೆ ಮತ್ತು ಬರಪರಿಹಾರ ಮೊತ್ತ ರೈತರ ಒಪ್ಪಿಗೆ ಇಲ್ಲದೆ ಅವರ ಸಾಲದ ಖಾತೆಗೆ ತೆಗೆದುಕೊಳ್ಳದೆ ರೈತರ ಕೈಗೆ ನೇರವಾಗಿ ಬರ ಪರಿಹಾರ ಹಣ ಸಿಗುವಂತೆ ಕ್ರಮವಹಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

drought-relief Money: ಬರಪರಿಹಾರದ ಹಣ ಕುರಿತು ಬಿಗ್ ಅಪ್ಡೇಟ್
drought-relief Money: ಬರಪರಿಹಾರದ ಹಣ ಕುರಿತು ಬಿಗ್ ಅಪ್ಡೇಟ್

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್