drought relief money: NDRFನಿಂದ ಬಂದ ಹಣ ರೈತರ ಖಾತೆಗೆ ಜಮೆ

(drought relief money) ಕಳೆದ ವರ್ಷ ಮಳೆ ಕೈಕೊಟ್ಟ ಕಾರಣ ರೈತರು ಬೆಳೆದ ಬೆಳೆಗಳು ನಾಶವಾಗಿ ರೈತರು ಸಂಕಷ್ಟದಲ್ಲಿ ಇರುವಂತೆ ಆಗಿತ್ತು. ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರಿಗೆ ನೇರವಾಗಿ ಹಣ ಜಮಾ ಮಾಡುವ ಮೂಲಕ ನೇರವಾಗಿದೆ. ಇದೀಗ ndrf ಮೂಲಕ ಬಂದ ಹಣದ ಕುರಿತು ಸಿಎಂ ಹೇಳಿಕೆ ನೀಡಿದ್ದು, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು


ರೈತರಿಗೆ ಬರ ಪರಿಹಾರ ಹಣ ನೀಡುವ ವಿಚಾರವಾಗಿ ಈಗಾಗಲೆ ರಾಜ್ಯ ಸರ್ಕಾರದಿಂದಲೇ ರೈತರಿಗೆ ತಲಾ 2 ಸಾವಿರ ರೂಪಾಯಿ ನೀಡಿದೆ. ಅಲ್ಲದೆ NDRF ನಿಂದಲೂ ಹಣ ಬಂದಿದೆ. ಇದನ್ನು ಕೂಡ ರೈತರಿಗೆ ತಲುಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ ಆಗುತ್ತದೆ. ಕೆಲವು ಕಡೆ ಹೆಚ್ಚು ಮಳೆ ಆಗುವ ಸಾಧ್ಯತೆ ಇದೆ ಎಂದರು.


ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ


ಪ್ರವಾಹ ಬಂದರೆ ಎದುರಿಸಲು ಜಿಲ್ಲಾಡಳಿತ ಸನ್ನದ್ಧರಾಗಿರಬೇಕು. ಅಗತ್ಯ ಕ್ರಮ ಕೈಗೊಳ್ಳುವಂತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸೂಚಿಸಲಾಗಿದೆ. ಒಂದು ವೇಳೆ ಪ್ರವಾಹ ಬಂದರೆ ಸನ್ನದ್ಧರಾಗುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಜಂಟಿ ಸುದ್ದಿಗೋಷ್ಠಿಯಲ್ಲಿ ಡಿಸಿ ಹಾಗೂ ಸಿಇಒ ಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಬಳಿಕ ಹೇಳಿಕೆ ನೀಡಿದರು.


ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಉದ್ಯೋಗ; 40,000ಕ್ಕೂ ಅಧಿಕ ಹುದ್ದೆಗೆ ನೇಮಕಾತಿ; 10th ಪಾಸಾದವರು ಅರ್ಜಿ ಸಲ್ಲಿಸಿ


ಕೆರೆಗಳಲ್ಲಿ ಹುಳು ನದಿಗಳಲ್ಲಿ ಅಡಚಣೆಗಳು ಇದ್ದರೆ ತೆರವುಗೊಳಿಸಲು ಸೂಚನೆ ನೀಡಿದ್ದೇನೆ. ಯಾವುದೇ ಕಾರಣಕ್ಕೂ ಬಿತ್ತನೆ ಬೀಜ ರಸಗೊಬ್ಬರ ಕೊರತೆ ಆಗಬಾರದು. ಬಿತ್ತನೆ ಬೀಜ ರಸಗೊಬ್ಬರ ಬೇಡಿಕೆಗಿಂತ ಹೆಚ್ಚು ದಾಸ್ತಾನು ಮಾಡಲಾಗಿದೆ. ಇದಕ್ಕಾಗಿ ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಸಿದ್ಧರಾಗಿರಬೇಕು. ಯಾವುದೇ ಕಾರಣಕ್ಕೂ ಕುಡಿಯುವ ನೀರು ಹಾಗೂ ಮೇವಿಗೆ ಸಮಸ್ಯೆ ಆಗಬಾರದು ಎಂದರು.


ಇದನ್ನೂ ಓದಿ: ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ; ರಾಜ್ಯಾದ್ಯಂತ ವಸತಿ ಬಡಾವಣೆ, ಕೈಗೆಟುಕುವ ದರದಲ್ಲಿ ಸೈಟ್; 50:50 ಅನುಪಾತದಲ್ಲಿ ನಿವೇಶನ ಹಂಚಿಕೆ


ಜನರ ಜೀವಕ್ಕೆ ತೊಂದರೆ ಆಗದ ರೀತಿ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಈ ಹಿಂದೆ ಪ್ರವಾಹ ಬಂದ ಗ್ರಾಮಗಳಲ್ಲಿ ಸೂಕ್ತ ಕ್ರಮಕ್ಕೆ ಸೂಚಿಸಿದ್ದೇನೆ. ಹವಾಮಾನ ಇಲಾಖೆ ಅಧಿಕಾರಿಗಳ ಜೊತೆಗೆ ನಿರಂತರ ಸಂಪರ್ಕದಲ್ಲಿ ಇರಬೇಕು. ನಿರ್ಲಕ್ಷ ವಹಿಸಿದರೆ ನೀತಿ ಸಂಹಿತೆ ಬಳಿಕ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

drought relief money: NDRFನಿಂದ ಬಂದ ಹಣ ರೈತರ ಖಾತೆಗೆ ಜಮೆ
drought relief money: NDRFನಿಂದ ಬಂದ ಹಣ ರೈತರ ಖಾತೆಗೆ ಜಮೆ

ಇದನ್ನೂ ಓದಿ: ಬೆಳೆ ಪರಿಹಾರ ಹಣ ಜಮಾ ಆಗದೆ ಇರುವ ರೈತರೇ ಗಮನಿಸಿ; ತಪ್ಪದೇ ಈ ಕೆಲಸ ಮಾಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
    3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
    4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
    5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
    6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
    7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
    8. ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
    9. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    10. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ