Drought-relief: 16 ಲಕ್ಷ ರೈತ ಕುಟುಂಬಕ್ಕೆ 3,000 ಹಣ ಜಮಾ

(Drought-relief) ಕೇಂದ್ರ ಸರ್ಕಾರದ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ಅಡಿಯಲ್ಲಿ ರಾಜ್ಯಕ್ಕೆ 3,454 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಈ ಹಣವನ್ನು 32.12 ಲಕ್ಷ ರೈತರ ಖಾತೆಗಳಿಗೆ ಜಮಾ ಮಾಡಲಾಗಿದೆ. ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮತ್ತಿತರ ತಾಂತ್ರಿಕ ದೋಷಗಳಿಂದ ಇನ್ನೂ 2 ಲಕ್ಷ ರೈತರಿಗೆ ಪರಿಹಾರ ಧನ ತಲುಪಿಲ್ಲ. ಅವರಿಗೂ ಶೀಘ್ರವೇ ಪರಿಹಾರ ನೀಡಲು ಸರ್ಕಾರ ತೀರ್ಮಾನಿಸಿದ್ದು ಇನ್ನೊಂದು ವಾರದಲ್ಲಿ ಎಲ್ಲ ರೈತರಿಗೂ ಪರಿಹಾರ ಲಭ್ಯವಾಗಲಿದೆ.


ಇದನ್ನೂ ಓದಿ: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸೋರಿಗೆ ಬಂತು ಮತ್ತೊಂದು ಅಪ್ಡೇಟ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್


16 ಲಕ್ಷ ರೈತ ಕುಟುಂಬಕ್ಕೆ ತಲಾ 3,000 ರೂ ಪರಿಹಾರ:
ಇದೇ ಮೊದಲ ಬಾರಿಗೆ ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ಒಣ ಬೇಸಾಯ ಮಾಡುವ ಸುಮಾರು 16 ಲಕ್ಷ ರೈತ ಕುಟುಂಬಗಳಿಗೆ ಬರಗಾಲದಿಂದ ಉಂಟಾಗಿರುವ ಜೀವನೋಪಾಯ ನಷ್ಟಕ್ಕೆ ಪರಿಹಾರವಾಗಿ ತಲಾ 3,000 ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. SDRF ಮತ್ತು NDRF ಎರಡರ ನಿಧಿಯಿಂದ ಪರಿಹಾರ ನೀಡಲಾಗುತ್ತದೆ. ಈ ಮೊತ್ತ ಸುಮಾರು 460 ಕೋಟಿ ರೂಪಾಯಿ ದಾಟಬಹುದು ಎಂದು ತಿಳಿಸಿದ್ದಾರೆ. ಇದೇ ಮೊದಲ ಬಾರಿಗೆ ಈ ರೀತಿ ರೈತರ ನೆರವಿಗೆ ದಾವಿಸಲಾಗಿದ್ದು ಬರ ಪರಿಹಾರದ ಮಾರ್ಗಸೂಚಿಗಳಲ್ಲಿ ಪರಿಹಾರ ನೀಡಲು ಅವಕಾಶ ಇದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.


ಇದನ್ನೂ ಓದಿ: ರೈತರೇ ಗಮನಿಸಿ; ಬರಪರಿಹಾರ ಹಣದ ಕುರಿತು ಸರ್ಕಾರದಿಂದ ಮಹತ್ವದ ಸೂಚನೆ; ತಪ್ಪದೇ ಈ ಸುದ್ದಿ ಓದಿ


ರಾಜ್ಯದ 240 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಸರ್ಕಾರ ಘೋಷಿಸಿದೆ. ಇದರಲ್ಲಿ 196 ತಾಲ್ಲೂಕುಗಳನ್ನು ತೀವ್ರ ಬರ ಪೀಡಿತ ಎಂದು ಪಟ್ಟಿ ಮಾಡಲಾಗಿದೆ. ಬೆಳೆ ನಷ್ಟ ಪರಿಹಾರಕ್ಕಾಗಿ 44 ಲಕ್ಷ ರೈತರ ಪಟ್ಟಿ ಮಾಡಲಾಗಿತ್ತು. ಮಳೆ ಇಲ್ಲದೆ ಅನೇಕ ತಾಲೂಕುಗಳಲ್ಲಿ ಬರ ಪರಿಹಾರ ಪಟ್ಟಿಯಲ್ಲಿ ಸೇರದೆ ಇದ್ದ ಮಳೆ ಆಧಾರಿತ ಬೆಳೆಗಳಿಗೂ ಪರಿಹಾರ ಧನ ವಿತರಿಸಲು ತೀರ್ಮಾನಿಸಲಾಗಿದೆ. ಎರಡು ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶವನ್ನು ಒಳಗೊಳ್ಳುವ ಸುಮಾರು 1.63 ಲಕ್ಷ ಅರ್ಹ ರೈತರಿಗೂ ಪರಿಹಾರ ವಿತರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಚಿನ್ನ ಅಡವಿಟ್ಟು ಸಾಲ ಮಾಡಿದವರಿಗೆ ಭರ್ಜರಿ ಸುದ್ದಿ!; ಗೋಲ್ಡ್ ಲೋನ್ ಬಗ್ಗೆ ಹೊಸ ಅಪ್ಡೇಟ್


NDRF ಮಾರ್ಗಸೂಚಿಗಳ ಪ್ರಕಾರ ಪರಿಹಾರ ನಿಗದಿ:
NDRF ಮಾರ್ಗಸೂಚಿಗಳ ಪ್ರಕಾರ ಗರಿಷ್ಠ 2 ಹೆಕ್ಟೆರ್ ಪ್ರದೇಶದ ಮಿತಿಗೊಳಪಟ್ಟು ಬೆಳೆ ನಷ್ಟ ಪರಿಹಾರ ನಿಗದಿ ಮಾಡಲಾಗಿದೆ. ಅದರಂತೆ ಮಳೆಯಾಶ್ರಿತ ಬೆಳೆಗೆ 8,500 ರೂ. ನೀರಾವರಿ ಪ್ರದೇಶದ ಬೆಳೆಗೆ 17,000 ರೂ. ಮತ್ತು ದೀರ್ಘಾವಧಿ (ತೋಟಗಾರಿಕೆ) ಬೆಳೆಗೆ 22,500 ರೂ. ಪರಿಹಾರ ನೀಡಲಾಗುತ್ತಿದೆ.

Drought-relief: 16 ಲಕ್ಷ ರೈತ ಕುಟುಂಬಕ್ಕೆ 3,000 ಹಣ ಜಮಾ
Drought-relief: 16 ಲಕ್ಷ ರೈತ ಕುಟುಂಬಕ್ಕೆ 3,000 ಹಣ ಜಮಾ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್