(Drought-Relief:) 2023-24ರ ಸಾಲಿನಲ್ಲಿ ಅತಿಹೆಚ್ಚು ರೈತರಿಗೆ ಬರ ಪರಿಹಾರ ನೀಡಲಾಗಿದ್ದು, ಈ ಹಿಂದಿನ ಯಾವುದೇ ವರ್ಷ ಅಥವಾ ಯಾವುದೇ ಸರ್ಕಾರಕ್ಕೆ ಹೋಲಿಸಿದರೆ ನಮ್ಮ ಸರ್ಕಾರ ಅತಿಹೆಚ್ಚು ರೈತರಿಗೆ ಬರ ಪರಿಹಾರ ನೀಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಈ ದಿನ ಹೊಸ ರೇಷನ್ ಕಾರ್ಡ್ ನೀಡಲು ಮನೆ ಬಾಗಿಲಿಗೆ ಬರುತ್ತಿದ್ದಾರೆ ಅಧಿಕಾರಿಗಳು!; ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
ಹೌದು, ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಕೇಶವ ಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ವರ್ಷ ಸುಮಾರು 38,78,525 ರೈತರಿಗೆ ಬರ ಪರಿಹಾರ ನೀಡಲಾಗಿದೆ. ಈ ಹಿಂದೆ 23,42,667 ರೈತರಿಗೆ ಪರಿಹಾರ ನೀಡಿದ್ದೇ ದಾಖಲೆಯಾಗಿತ್ತು. ಅಲ್ಲದೆ, ಕಳೆದ ಸರ್ಕಾರದ ನಾಲ್ಕು ವರ್ಷದ ಅವಧಿಯಲ್ಲಿ ನೀಡಿದ್ದು, 14,41,049 ರೈತರಿಗೆ ಪರಿಹಾರ ನೀಡಿದ್ದೇ ದೊಡ್ಡ ಸಂಖ್ಯೆಯಾಗಿತ್ತು. ಆದರೆ, ಯಾವುದೇ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಎರಡರಷ್ಟು ರೈತರಿಗೆ ಬರ ಪರಿಹಾರ ನೀಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ನೀಡಿದರು.
ಇದನ್ನೂ ಓದಿ: ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
ಅಲ್ಲದೆ ಅಧಿಕಾರಿಗಳು ಸ್ಥಳಕ್ಕೇ ತೆರಳಿ ಬೆಳೆ ಸಮೀಕ್ಷೆ APP ಮೂಲಕ ಬೆಳೆ ಆಗಿದ್ಯಾ, ಇಲ್ವಾ? ಅಂತ ಸಮೀಕ್ಷೆ ನಡೆಸಿ ಡಿಜಿಟಲ್ ಮೂಲಕ ನೇರವಾಗಿ ರೈತರ ಖಾತೆಗಳಿಗೆ ಬರ ಪರಿಹಾರ ಹಣ ಜಮೆ ಮಾಡಲಾಗಿದೆ. ಶೇ.33 ರಷ್ಟು ಬೆಳೆ ನಷ್ಟ ಅನುಭವಿಸಿದ ಎಲ್ಲಾ ರೈತರಿಗೂ ಪರಿಹಾರ ನೀಡಲಾಗಿದೆ. ನೀರಾವರಿ ಆಶ್ರಿತ ಜಮೀನು ಆಗಿದ್ದರೆ ಯಾರಿಗೆಲ್ಲಾ ನಾಲೆಯಲ್ಲಿ ನೀರು ಹರಿಸಲು ಸಾಧ್ಯವಾಗಿಲ್ಲ ಅಂತಹ ರೈತರಿಗೂ ಪರಿಹಾರ ನೀಡಿದ್ದೇವೆ. ಬಹುವಾರ್ಷಿಕ ತೋಟಗಾರಿಕಾ ಬೆಳೆಗಳಿಗೂ ಪರಿಹಾರ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಇದನ್ನೂ ಓದಿ: ಕಾರ್ಮಿಕ ಕಾರ್ಡ್ ನೋಂದಣಿಗೆ ಈ ದಾಖಲೆ ಕಡ್ಡಾಯ; ಇಲ್ಲಿದೆ ನೋಡಿ ಡಿಟೈಲ್ಸ್
ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಜೀವನೋಪಾಯ ನಷ್ಟವನ್ನೂ ರೈತರಿಗೆ ಭರಿಸಲು ಸರ್ಕಾರ ಮುಂದಾಗಿದೆ. ರಾಜ್ಯಾದ್ಯಂತ 17,80,000 ರೈತ ಕುಟುಂಬಗಳನ್ನು ಗುರುತಿಸಿದ್ದು, ಜೀವನೋಪಾಯ ನಷ್ಟಕ್ಕೆ ಹಣ ಪಾವತಿ ಮಾಡುವ ಕೆಲಸ ಚಾಲ್ತಿಯಲ್ಲಿದೆ. ಇದಕ್ಕಾಗಿ 517 ಕೋಟಿ ರೂಪಾಯಿಯನ್ನು ತೆಗೆದಿರಿಸಲಾಗಿದೆ. ಬರ ಪರಿಹಾರ ಕೆಲಸಕ್ಕೆ ಈವರೆಗೆ 4047 ಕೋಟಿ ರೂಪಾಯಿ ಹಣ ರೈತರಿಗೆ ಪರಿಹಾರವಾಗಿ ಕೊಟ್ಟಿದ್ದೇವೆ ಅಥವಾ ಚಾಲ್ತಿಯಲ್ಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






