(drought relief) ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಈ ಮೂಲಕ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ಇದರೊಂದಿಗೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಕರ್ನಾಟಕ ಸರ್ಕಾರಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ.
ಇದನ್ನೂ ಓದಿ: ಚಿನ್ನದ ಮೇಲೆ ಸಾಲ ಪಡೆಯಬೇಕು ಅನ್ಕೊಂಡಿದ್ದೀರಾ?; ಹಾಗಾದ್ರೆ ಈ ಕುರಿತು ಬಿಗ್ ಅಪ್ಡೇಟ್ ಇಲ್ಲಿದೆ; ಮಿಸ್ ಮಾಡ್ದೆ ಓದಿ
18,171 ಕೋಟಿ ರೂ. ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಈಗ ಕೇಂದ್ರ ಸರ್ಕಾರವು ಪರಿಶೀಲನೆ ನಡೆಸಿ 3,454 ಕೋಟಿ ರೂ. ಬಿಡುಗಡೆ ಮಾಡಿದೆ. ಕರ್ನಾಟಕದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಆದರೆ, ಕೇಂದ್ರ ಸರ್ಕಾರ ಸಕಾಲಕ್ಕೆ ಬಿಡುಗಡೆ ಮಾಡದ ಕಾರಣ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಅದರಂತೆ, ಕೇಂದ್ರ ಸರ್ಕಾರವು ಈಗ ಬರ ಪರಿಹಾರ ಘೋಷಣೆ ಮಾಡಿದೆ. ಹಾಗೆಯೇ, ನೆರೆ ರಾಜ್ಯವಾದ ತಮಿಳುನಾಡಿಗೆ 275 ಕೋಟಿ ರೂ. ನೆರೆ ಪರಿಹಾರ ಬಿಡುಗಡೆ ಮಾಡಿದೆ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ; ಪೆಂಡಿಂಗ್ ಇರುವ ಹಣ ನಿಮ್ಮ ಖಾತೆಗೆ ಜಮಾ ಹೀಗೆ ಮಾಡಿ!
ಬರ ಪರಿಹಾರ ನೀಡಲು ಒಂದು ವಾರ ಬೇಕು ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿತ್ತು. “ಒಂದು ವಾರದಲ್ಲಿ ಬರ ಪರಿಹಾರದ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಹಾಗಾಗಿ, ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯವು ಒಂದು ವಾರ ಸಮಯಾವಕಾಶ ನೀಡಬೇಕು” ಎಂದು ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರು ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಕೇಂದ್ರ ಸರ್ಕಾರದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ಏಪ್ರಿಲ್ ೨೯ಕ್ಕೆ ವಿಚಾರಣೆ ಮುಂದೂಡಿತ್ತು. ಈಗ ವಿಚಾರಣೆಗೂ ಮೊದಲೇ ಬರ ಪರಿಹಾರ ಬಿಡುಗಡೆ ಮಾಡಿದೆ.
ಕರ್ನಾಟಕಕ್ಕೆ ಬರ ಪರಿಹಾರ ವಿತರಣೆ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ತೀವ್ರ ಜಟಾಪಟಿ ಉಂಟಾಗಿತ್ತು. ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಅನ್ಯಾಯ ಮಾಡಿತ್ತು. ತೆರಿಗೆ ಪಾಲು ನೀಡದ ಕೇಂದ್ರ ಸರ್ಕಾರವು ಬರ ಪರಿಹಾರವನ್ನೂ ನೀಡದೆ ಅನ್ಯಾಯ ಮಾಡುತ್ತಿದೆ. ಇನ್ನಾದರೂ ಬರ ಪರಿಹಾರ ನೀಡಬೇಕು ಎಂಬುದಾಗಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಆಗ್ರಹಿಸಿತ್ತು.
ಇದನ್ನೂ ಓದಿ: ನೀವು ವಾಟ್ಸಾಪ್ ಬಳಕೆದಾರರೇ?; ವಾಟ್ಸಾಪ್‌ನಲ್ಲಿ ನಿಮಗೆ ಇನ್ನಷ್ಟು ಭದ್ರತೆ ಬೇಕೇ?; ಹಾಗಿದ್ರೆ ಈ ಸುದ್ದಿ ಓದಲೇಬೇಕು
ಕೆಲ ದಿನಗಳ ಹಿಂದಷ್ಟೇ ಕರ್ನಾಟಕ ಸರ್ಕಾರದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರವು ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಪಾಲಿಸಬೇಕು ಎಂದಿತ್ತು. ಎರಡು ವಾರಗಳಲ್ಲಿ ಬರ ಪರಿಹಾರದ ಕುರಿತು ಉತ್ತರ ನೀಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಧ್ಯೆ ಎಂದಿಗೂ ಸ್ಪರ್ಧೆ ಇರಬಾರದು. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯ ಸರ್ಕಾರಗಳ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಬೇಕು. ಇತ್ತೀಚೆಗೆ ಹಲವು ರಾಜ್ಯ ಸರ್ಕಾರಗಳು ಪರಿಹಾರಕ್ಕಾಗಿ ನ್ಯಾಯಾಲಯದ ಮೊರೆ ಹೋಗುತ್ತಿವೆ. ಇಂತಹ ಬೆಳವಣಿಗೆಗಳು ಸರಿಯಲ್ಲ ಎಂದು ತಿಳಿಸಿತ್ತು.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply