ಗೋಣಿಕೊಪ್ಪಲು: (ನ್ಯೂಸ್ ಮಲ್ನಾಡ್ ವರದಿ) ಮದ್ಯದ ಅಮಲಿನಲ್ಲಿ ಇಬ್ಬರ ನಡುವೆ ಜಗಳವಾಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನ ಹಾತೂರು ಬಳಿಯ ಕುಂದ ಗ್ರಾಮದಲ್ಲಿ ನಡೆದಿದೆ. ಮೊನ್ನಿ (32) ಹತ್ಯೆಯಾದ ವ್ಯಕ್ತಿ.
ಇದನ್ನೂ ಓದಿ; ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು
ಇದನ್ನೂ ಓದಿ; ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅವರ ತಂದೆ ನಿಧನ
ಕುಂದ ಗ್ರಾಮದ ಕಾಫಿ ಬೆಳೆಗಾರ ಜಮ್ಮಡ ಮನ ಮಾದಪ್ಪ ಅವರ ಲೈನ್‌ಮನೆಯಲ್ಲಿ ವಾಸವಿದ್ದ ಮೊನ್ನಿ ಹಾಗೂ ಶ್ರೀನಿವಾಸ ಅವರು ಮದ್ಯಪಾನ ಮಾಡಿ ಗಲಾಟೆ ಮಾಡಿಕೊಂಡಿದ್ದಾರೆ. ಇದು ಅತಿರೇಕಕ್ಕೆ ಹೋದಾಗ ಶ್ರೀನಿವಾಸ ಕತ್ತಿಯಿಂದ ಮೊನ್ನಿಗೆ ಹೊಡೆದಿದ್ದಾನೆ. ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಮೊನ್ನಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕಾರು ಡಿಕ್ಕಿಯಾಗಿ ಪಾದಚಾರಿ ಸಾವು; ಚಾಲಕ ಪರಾರಿ
- ನಕಲಿ ದಾಖಲೆ ಸೃಷ್ಟಿಸಿ ಸೈಟ್ ಮಾರಾಟ; ಓರ್ವನ ಬಂಧನ
- ಗಡಿ ಭಾಗದಲ್ಲಿ ಮತ್ತೆ ನಕ್ಸಲರು ಪ್ರತ್ಯಕ್ಷ
ಆರೋಪಿ ಶ್ರೀನಿವಾಸ್‌ನನ್ನು ಗೋಣಿಕೊಪ್ಪಲು ಎಸ್‌ಐ ಸಿದ್ಧರಾಜು ಹಾಗೂ ಸಿಬ್ಬಂದಿ ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ; 2000 ಮುಖಬೆಲೆಯ ನೋಟ್ ಬ್ಯಾನ್.. ಸೆಪ್ಟೆಂಬರ್ 30ಕ್ಕೆ ಬದಲಾವಣೆಗೆ ಕೊನೆಯ ದಿನಾಂಕ
ಗಳಿಕೆಯಲ್ಲಿ ಇತಿಹಾಸ ನಿರ್ಮಿಸಿದ ‘ದಿ ಕೇರಳ ಸ್ಟೋರಿ’
ದೇಶಾದ್ಯಂತ ಭಾರೀ ಚರ್ಚೆ ಹುಟ್ಟಾಕ್ಕಿರುವ ‘ದಿ ಕೇರಳ ಸ್ಟೋರಿ’ ನಿಧಾನವಾಗಿ ಸದ್ದು ಮಾಡಲು ಆರಂಭಿಸಿದೆ. ಈಗಾಗಲೇ ಕೆಲವೆಡೆ ಸಿನಿಮಾ ಪ್ರದರ್ಶನ ನಿಲ್ಲಿಸಲಾಗುತ್ತಿದೆ. ಆದರೂ ಕೂಡ ಪ್ರೇಕ್ಷಕರು ಸಿನಿಮಾ ನೋಡಲು ಮುಗಿಬೀಳುತ್ತಿದ್ದಾರೆ. ಇದು ಮತ್ತೊಂದು ‘ಕಾಶ್ಮೀರ್ ಫೈಲ್ಸ್’ ಆಗುವ ಸುಳಿವು ಸಿಗುತ್ತಿದೆ.
ಇದನ್ನೂ ಓದಿ; ಅನಾಥ ಶವದ ಪಕ್ಕದಲ್ಲಿದ್ದ ಬ್ಯಾಗಿನಲ್ಲಿ 6.65 ಲಕ್ಷ ಪತ್ತೆ
ಸುದೀಪ್ತೊ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಅದಾ ಶರ್ಮಾ, ಯೋಗಿತಾ ಬಿಹಾನಿ ಹಾಗೂ ಸೋನಿಯಾ ಬಾಲಾನಿ ಲೀಡ್ ರೋಲ್‌ಗಳಲ್ಲಿ ನಟಿಸಿದ್ದಾರೆ. ರಿಲೀಸ್‌ಗೂ ಮೊದಲೇ ಈ ಸಿನಿಮಾ ಪ್ರದರ್ಶನಕ್ಕೆ ಅವಕಾಶ ಕೊಡಬಾರದು ಎಂದು ಕೇರಳದಲ್ಲಿ ಒತ್ತಡ ಶುರುವಾಗಿತ್ತು. ಸಿನಿಮಾ ಬಿಡುಗಡೆ ವಿರೋಧಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಸಿನಿಮಾ ಬಿಡುಗಡೆಗೆ ಕೋರ್ಟ್ ಅಸ್ತು ಎಂದಿತ್ತು.
ಇದನ್ನೂ ಓದಿ; ಹಣಕ್ಕಾಗಿ ಯುವತಿಯ ಕಿಡ್ನ್ಯಾಪ್
ಮೇ 5ರಂದು ದೇಶಾದ್ಯಂತ ಬಿಡುಗಡೆಗೊಂಡ ಈ ಚಿತ್ರ ೧೦ ದಿನಗಳಲ್ಲಿ ಮೈಲುಗಲ್ಲೊಂದನ್ನು ನೆಟ್ಟಿದೆ. ಸುದೀಪ್ತೋ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ ಸಿನಿಮಾ 135 ಕೋಟಿ ರೂ. ಗಳಿಸಿದೆ. ಈ ಮೂಲಕ ಬಾಕ್ಸ್ ಆಫೀಸ್ ನಲ್ಲಿ ಯಶಸ್ವಿ ಪ್ರದರ್ಶನ ಮುಂದುವರಿಸಿದೆ. ಈ ಮೂಲಕ 2023 ರಲ್ಲಿ ಬಾಲಿವುಡ್ ನಲ್ಲಿ ಅತೀ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾಗಳಲ್ಲಿ ಎರಡನೇ ಸಿನಿಮಾವಾಗಿ ‘ದಿ ಕೇರಳ ಸ್ಟೋರಿ’ ಹೊರಹೊಮ್ಮಿದೆ.
ಕೇರಳದಲ್ಲಿ ಬಲವಂತವಾಗಿ ಯುವತಿಯರನ್ನು ಇಸ್ಲಾಂಗೆ ಮತಾಂತರ ಮಾಡಿ ಅವರನ್ನು ಭಯೋತ್ಪಾದನೆಗೆ ದೂಡಲಾಗುತ್ತಿದೆ ಎನ್ನುವ ವಿಚಾರವನ್ನಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ವ್ಯವಸ್ಥಿತ ಮತಾಂತರ ಸುತ್ತಾ ಸಿನಿಮಾ ಕಥೆ ಸುತ್ತುತ್ತದೆ. ಈ ಸಿನಿಮಾದಲ್ಲಿ ಹೇಳಿರುವುದು ಕಟ್ಟು ಕತೆ, ಇದರಿಂದ ಕೆಟ್ಟ ಸಂದೇಶ ರವಾನೆಯಾಗುತ್ತದೆ. ಹಾಗಾಗಿ ಸಿನಿಮಾ ಬಿಡುಗಡೆ ಮಾಡಲು ಅವಕಾಶ ಕೊಡಬಾರದು ಎಂದು ಕೆಲವರು ಆಗ್ರಹಿಸಿದ್ದರು. ಐಪಿಎಲ್ ಭರಾಟೆ ನಡುವೆಯೂ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರೇಕ್ಷಕರನ್ನು ಥಿಯೇಟರ್‌ಗಳಿಗೆ ಸೆಳೀತಿದೆ.
ಇದನ್ನೂ ಓದಿ; ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ
ಇದನ್ನೂ ಓದಿ; ಮಗಳ ಮೊಬೈಲ್ ಫೋನ್ ನಿಂದಲೇ ಬಂತು 20 ಲಕ್ಷ ರೂ.ಗಳ ಬೇಡಿಕೆ
ಫಸ್ಟ್ ವೀಕೆಂಡ್ 35. 25 ಕೋಟಿ ರೂ. ಗಳಿಕೆ:
ಭಾರತದಲ್ಲಿ ಶುಕ್ರವಾರ 8.03 ಕೋಟಿ ರೂ. ಕಲೆಕ್ಷನ್ ಮಾಡಿದ್ದ ಸಿನಿಮಾ ಶನಿವಾರ 11.22 ಕೋಟಿ ರೂ. ಹಾಗೂ ಭಾನುವಾರ 16 ಕೋಟಿ ರೂ. ಗಳಿಕೆ ಕಂಡು ಸಂಚಲನ ಸೃಷ್ಟಿಸಿದೆ. ಒಟ್ಟಾರೆ ಫಸ್ಟ್ ವೀಕೆಂಡ್‌ನಲ್ಲಿ ಸಿನಿಮಾ 35. 25 ಕೋಟಿ ರೂ. ಬಾಚಿ ಗೆಲುವಿನ ಓಟ ಮುಂದುವರೆಸಿದೆ.